ತುಮಕೂರು | ಪರಿಸರ ವಿಜ್ಞಾನಕ್ಕೆ ಹೆಚ್ಚಿದ ಬೇಡಿಕೆ; ತುಮಕೂರು ವಿವಿಯಲ್ಲಿ ಪ್ರವೇಶಕ್ಕೆ ಸದವಕಾಶ

Date:

ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಆಡಳಿತ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿ ಅವಕಾಶಗಳನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ತುಮಕೂರು ವಿಶ್ವವಿದ್ಯಾಲಯ ಉತ್ತಮ ಅವಕಾಶ ಕಲ್ಪಿಸಿದೆ.

- Advertisement -

ತುಮಕೂರು ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗ (DOSR in Environmental Science) ವತಿಯಿಂದ 2026–27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, M.Sc. Environmental Science ಹಾಗೂ PG Diploma in Environmental Sustainability and Governance (ESG) ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ, ನೀರಿನ ಕೊರತೆ, ವಾಯು ಮತ್ತು ಜಲಮಾಲಿನ್ಯ, ಅರಣ್ಯ ನಾಶ, ಜೀವವೈವಿಧ್ಯದ ಕುಸಿತ, ಪ್ಲಾಸ್ಟಿಕ್ ಹಾಗೂ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಸೇರಿದಂತೆ ಪರಿಸರ ಸವಾಲುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸರ ವಿಜ್ಞಾನ ಕ್ಷೇತ್ರದಲ್ಲಿ ತರಬೇತಿ ಪಡೆದ ತಜ್ಞರ ಬೇಡಿಕೆ ಹೆಚ್ಚುತ್ತಿದೆ.

ಪರಿಸರ ವಿಜ್ಞಾನವು ಜೀವಶಾಸ್ತ್ರ, ರಸಾಯನಶಾಸ್ತ್ರ, ಭೂವಿಜ್ಞಾನ, ಸೂಕ್ಷ್ಮಜೀವಶಾಸ್ತ್ರ, ಹವಾಮಾನ ವಿಜ್ಞಾನ, GIS, ಪರಿಸರ ತಂತ್ರಜ್ಞಾನ, ತ್ಯಾಜ್ಯ ನಿರ್ವಹಣೆ, ಪರಿಸರ ನೀತಿ ಹಾಗೂ ಆಡಳಿತ ಸೇರಿದಂತೆ ಹಲವು ವಿಭಾಗಗಳನ್ನು ಒಳಗೊಂಡ ಬಹುಶಿಸ್ತೀಯ ಅಧ್ಯಯನ ಕ್ಷೇತ್ರವಾಗಿದೆ.

ವಿದ್ಯಾರ್ಥಿಗಳಿಗೆ ತರಗತಿ ಬೋಧನೆಯೊಂದಿಗೆ ಕ್ಷೇತ್ರಕಾರ್ಯ, ಕೈಗಾರಿಕಾ ಭೇಟಿ, ಅಧ್ಯಯನ ಪ್ರವಾಸ, ಕೇಸ್ ಸ್ಟಡಿ, ಪರಿಸರ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡಲಾಗುತ್ತದೆ. NET/KSET ಮಾರ್ಗದರ್ಶನ, ಸಂಶೋಧನಾ ಚಟುವಟಿಕೆಗಳು ಹಾಗೂ ವಿದ್ಯಾರ್ಥಿ ಮಾರ್ಗದರ್ಶನಕ್ಕೂ ಅವಕಾಶ ಕಲ್ಪಿಸಲಾಗಿದೆ.

1003898798

ಪರಿಸರ ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಪಡೆದವರಿಗೆ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ವಿವಿಧ ಉದ್ಯೋಗಾವಕಾಶಗಳಿದ್ದು, ಪರಿಸರ ವಿಜ್ಞಾನಿ, ಸಂಶೋಧನಾ ವಿಜ್ಞಾನಿ, ಪರಿಸರ ಸುರಕ್ಷತಾ ಅಧಿಕಾರಿ, ಪರಿಸರ ಸಲಹೆಗಾರ, ಪರಿಸರ ರಸಾಯನಶಾಸ್ತ್ರಜ್ಞ, ಪರಿಸರ ಸಂರಕ್ಷಣಾಧಿಕಾರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬಹುದಾಗಿದೆ. EIA, ಪರಿಸರ ಆಡಿಟ್, ತ್ಯಾಜ್ಯ ನಿರ್ವಹಣೆ, ನೀರಿನ ಗುಣಮಟ್ಟ ಪರೀಕ್ಷೆ, ಮಾಲಿನ್ಯ ನಿಯಂತ್ರಣ, ಕಾರ್ಪೊರೇಟ್ ಸುಸ್ಥಿರತೆ ಹಾಗೂ ESG ವರದಿಗಾರಿಕೆ ಕ್ಷೇತ್ರಗಳಲ್ಲಿಯೂ ಅವಕಾಶಗಳು ಹೆಚ್ಚುತ್ತಿವೆ.

ವಿಶೇಷವಾಗಿ ESG (Environmental, Social and Governance) ಕ್ಷೇತ್ರವು ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಸುಸ್ಥಿರತೆ ಮತ್ತು ಪರಿಸರ ಹೊಣೆಗಾರಿಕೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಹೊಸ ವೃತ್ತಿ ಅವಕಾಶಗಳನ್ನು ಸೃಷ್ಟಿಸುತ್ತಿದೆ.

ಅರಣ್ಯ ಮತ್ತು ಪರಿಸರ ಇಲಾಖೆಗಳು, ಮಾಲಿನ್ಯ ನಿಯಂತ್ರಣ ಮಂಡಳಿಗಳು, ನಗರ ಸ್ಥಳೀಯ ಸಂಸ್ಥೆಗಳು, ಕೈಗಾರಿಕೆಗಳು, ತ್ಯಾಜ್ಯ ಸಂಸ್ಕರಣಾ ಘಟಕಗಳು, ಪರಿಸರ ಪರೀಕ್ಷಾ ಪ್ರಯೋಗಾಲಯಗಳು, ಸಂಶೋಧನಾ ಸಂಸ್ಥೆಗಳು ಹಾಗೂ ಪರಿಸರ ಸಲಹಾ ಸಂಸ್ಥೆಗಳಲ್ಲಿ ಪದವೀಧರರಿಗೆ ಅವಕಾಶಗಳಿವೆ.

ವಿಜ್ಞಾನ ಹಾಗೂ ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅರ್ಹತಾ ನಿಯಮಗಳ ಅನ್ವಯ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಸೇರಿದಂತೆ ಸಂಬಂಧಿತ ವಿಭಾಗಗಳ ಪದವೀಧರರಿಗೂ ನಿಯಮಾನುಸಾರ ಅವಕಾಶವಿದೆ.

2026–27ನೇ ಸಾಲಿನ ಪ್ರವೇಶಕ್ಕೆ ಸೀಮಿತ ಸ್ಥಾನಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನವಾಗಿದೆ. ಪರಿಸರ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ESG ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿಭಾಗವು ಕೋರಿದೆ.

ಉಪನ್ಯಾಸಕರು: 9972892246, 7892700587, 8951777357, 8296164266, 8724922899

ಸಂಯೋಜಕರು: 7899574890

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...