ತುಮಕೂರು | ನದಿಗಳೇ ನಮ್ಮ ಆದರ್ಶ, ಎನ್‌ಎಸ್‌ಎಸ್ ಶಿಸ್ತಿನ ಪಾಠಶಾಲೆ : ಪ್ರೊ. ಮೋಹನ ಹೆಚ್.ಎಸ್.

Date:

ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಹಾಗೂ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರಲು ಎನ್‌ಎಸ್‌ಎಸ್ ಅತ್ಯುತ್ತಮ ವೇದಿಕೆಯಾಗಿದ್ದು, ಜವಾಬ್ದಾರಿ, ಶಿಸ್ತು ಮತ್ತು ಸಮಯಪಾಲನೆಯಂತಹ ಮೌಲ್ಯಗಳನ್ನು ಬೆಳೆಸುವ ಶಿಸ್ತಿನ ಪಾಠಶಾಲೆಯಾಗಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಮೋಹನ ಹೆಚ್.ಎಸ್. ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಸಂಪನ್ಮೂಲ ಅಭಿವೃದ್ಧಿ ಮತ್ತು ಪರಿಸರ ಪುನಶ್ಚೇತನ ಸಂಸ್ಥೆ, ಧಾನ್ಯ ಸಂಸ್ಥೆ ಹಾಗೂ ವೃಕ್ಷಮಿತ್ರ ಸಂಘಟನೆಗಳ ಸಹಯೋಗದಲ್ಲಿ ದೇವರಾಯನದುರ್ಗದಲ್ಲಿ ಆ.25ರಂದು ಆಯೋಜಿಸಿದ್ದ ‘ಜಯಮಂಗಲಿ ನದಿ ನಡಿಗೆ ಮತ್ತು ಪರಿಸರ ಜಾಗೃತಿ’ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಸಮಾಜದೊಂದಿಗೆ ಮಾನಸಿಕವಾಗಿ ಸ್ಪಂದಿಸುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇತರರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವ, ಅಹಂ ತೊರೆದು ತಮ್ಮ ಬಲ–ದುರ್ಬಲತೆಗಳನ್ನು ಅರಿತುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ಎನ್‌ಎಸ್‌ಎಸ್ ಉತ್ತಮ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ನದಿಗಳು ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಜೀವಜಲ ನೀಡುತ್ತವೆ. ಅವುಗಳಂತೆ ನಾವು ಕೂಡ ದ್ವೇಷ, ಅಸೂಯೆಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಬದುಕುವುದನ್ನು ಕಲಿಯಬೇಕು ಎಂದು ಪ್ರೊ. ಮೋಹನ ಹೆಚ್.ಎಸ್. ಕರೆ ನೀಡಿದರು.

ಇಂದು ನದಿಗಳು ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನದಿಗಳು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವುದು ಮಾತ್ರವಲ್ಲದೆ, ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯೂ ಯುವಜನರ ಮೇಲಿದೆ ಎಂದು ಅವರು ಹೇಳಿದರು.

ಹೆಬ್ಬೂರು ಕಾಲೇಜಿನ ಸಹಪ್ರಾಧ್ಯಾಪಕ ಮಧುಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಎನ್‌ಎಸ್‌ಎಸ್ ಸಂಯೋಜಕ ಡಾ. ನಾಗಭೂಷಣ ಬಗ್ಗನಡು, ಆರ್ಡರ್ ಸಂಸ್ಥೆಯ ರಘು, ಪರಿಸರ ತಜ್ಞ ಮಲ್ಲಿಕಾರ್ಜುನ್ ಹೊಸಪಾಳ್ಯ ಹಾಗೂ ಕಾರ್ಯಕ್ರಮಾಧಿಕಾರಿಗಳಾದ ಡಾ. ಮಂಜುನಾಥ್, ಮಂಜುಭಾರ್ಗವಿ, ಖಾಲಿದಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...