ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

Date:

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಿಗೊಳಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು.

- Advertisement -

ತುಮಕೂರು ನಗರದಲ್ಲಿ ಎಸ್‌ಐಆರ್‌ನಿಂದ ವಂಚಿತರಾಗಿರುವ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ ಜನಚಳುವಳಿ ಕೇಂದ್ರದಲ್ಲಿ ಎಸ್‌ಐಆರ್ ಪ್ರತಿರೋಧ ಹೋರಾಟ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಎಸ್‌ಐಆರ್ ಪ್ರಕ್ರಿಯೆ ನಡೆಸಿರುವುದೇ ತಪ್ಪು. ಇದು ಎಲ್ಲರನ್ನೂ ಒಳಗೊಂಡ ಪ್ರಕ್ರಿಯೆಯಾಗಿಲ್ಲ ಎಂದು ಆರೋಪಿಸಿದ ಅವರು, ಮತದಾರರ ಪಟ್ಟಿಯಲ್ಲಿ ಬದುಕಿರುವವರ ಹೆಸರುಗಳು ಕೈಬಿಟ್ಟು, ಮೃತಪಟ್ಟವರ ಹೆಸರುಗಳು ಉಳಿದಿರುವ ಪರಿಸ್ಥಿತಿಗಳಿವೆ. ಇಂತಹ ಸಂದರ್ಭದಲ್ಲಿ ಹೊಸದಾಗಿ ಫಾರಂ-6 ತುಂಬಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳುವಂತೆ ಹೇಳುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಪ್ರಶ್ನಿಸಿದರು.

ದೆಹಲಿ, ಹರಿಯಾಣ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದ ಪ್ರಕಾಶ್ ರಾಜ್, ಬೇರೆ ರಾಜ್ಯಗಳಲ್ಲಿ ನಡೆದ ರೀತಿಯಲ್ಲೇ ಎಲ್ಲೆಡೆ ಚುನಾವಣಾ ಫಲಿತಾಂಶಗಳನ್ನು ಪ್ರಭಾವಿಸುವ ಉದ್ದೇಶದಿಂದ ಎಸ್‌ಐಆರ್ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದರು. ಈ ಪ್ರಕ್ರಿಯೆಯ ಹಿಂದೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪಾತ್ರವಿದೆ ಎಂದು ಅವರು ಆರೋಪಿಸಿದರು.

1004065386

ಎಸ್‌ಐಆರ್ ವಿರೋಧಿ ಹೋರಾಟಕ್ಕೆ ಹೊಸ ಸ್ವರೂಪ ನೀಡಲಾಗುತ್ತಿದೆ ಎಂದು ತಿಳಿಸಿದ ಅವರು, ಬೆಂಗಳೂರಿಗೆ ಬಂದು ಪ್ರತಿಭಟನೆ ನಡೆಸುವ ಅಗತ್ಯವಿಲ್ಲ. ಪ್ರತಿಯೊಬ್ಬರೂ ತಮ್ಮ ತಮ್ಮ ಬೂತ್‌ಗಳಲ್ಲಿ ಕಂಡುಬರುವ ಸಮಸ್ಯೆ ಹಾಗೂ ಅನ್ಯಾಯಗಳನ್ನು ಮೊಬೈಲ್‌ನಲ್ಲಿ ವೀಡಿಯೋ ಮಾಡಿ ದಾಖಲಿಸಬೇಕು. ಅವುಗಳನ್ನು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಸ್ಥಳೀಯ ಪತ್ರಿಕೆಗಳು ಹಾಗೂ ಹೋರಾಟದ ತಂಡಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಮಟ್ಟದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸಂಗ್ರಹಿಸಿ, ಅವುಗಳ ಆಧಾರದ ಮೇಲೆ ಮುಂದಿನ ಹೋರಾಟವನ್ನು ರೂಪಿಸಲಾಗುವುದು ಎಂದರು.

ಅಕ್ಟೋಬರ್ 1ರಂದು ದೆಹಲಿ, ಜಾರ್ಖಂಡ್, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳ ತಂಡಗಳೊಂದಿಗೆ ರಾಷ್ಟ್ರಮಟ್ಟದ ಪತ್ರಿಕಾಗೋಷ್ಠಿ ನಡೆಸಲಾಗುವುದು. ಅಕ್ಟೋಬರ್ 3ರಂದು ವಕೀಲರ ತಂಡದ ಮೂಲಕ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಕಾಶ್ ರಾಜ್ ತಿಳಿಸಿದರು.

ಅಕ್ಟೋಬರ್ 15ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ವಿರೋಧ ಪಕ್ಷಗಳ ಸಂಸದರು, ರೈತರು, ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಒಕ್ಕೂಟದೊಂದಿಗೆ ಬೃಹತ್ ಹೋರಾಟ ನಡೆಸಲಾಗುವುದು ಎಂದರು. ಅ.15ರ ಜಂತರ್ ಮಂತರ್ ಕಾರ್ಯಕ್ರಮದ ಕುರಿತು ಇತ್ತೀಚಿನ ವರದಿಗಳಲ್ಲಿಯೂ ಉಲ್ಲೇಖಿಸಲಾಗಿದೆ.

ಎಸ್‌ಐಆರ್‌ನಿಂದ ಸಮಸ್ಯೆ ಎದುರಿಸುತ್ತಿರುವವರು ಹಾಗೂ ಸಾಮಾನ್ಯ ಜನರು ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಧ್ವನಿ ಇಲ್ಲದವರ ಪರ ಧ್ವನಿಯಾಗಿ ಹೋರಾಟ ನಡೆಸುವುದಾಗಿ ಪ್ರಕಾಶ್ ರಾಜ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಚಿಂತಕ ದೊರೈರಾಜು, ಸಂಯುಕ್ತ ಹೋರಾಟದ ಸಿ. ಯತಿರಾಜು, ಎದ್ದೇಳು ಕರ್ನಾಟಕದ ಇಂದಿರಾ, ಸಿಐಟಿಯುನ ಸೈಯದ್ ಮುಜೀಬ್, ರೈತಸಂಘದ ಗೋವಿಂದರಾಜು, ಮಹಮದ್ ಯೂಸುಫ್, ವೀರಸಂಗಯ್ಯ, ತಾಜುದ್ದೀನ್, ಸಮೀಉಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು...

ಮಧುಗಿರಿ | ಸ್ವಾವಲಂಬನೆ, ಆತ್ಮವಿಶ್ವಾಸದೊಂದಿಗೆ ಪದವಿ ಪಡೆಯಿರಿ: ಡಾ. ಎಂ. ಗೋವಿಂದರಾಯ

ಪದವಿ ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಿರದೆ, ಸ್ವಾವಲಂಬನೆ, ವೃತ್ತಿಪರತೆ ಹಾಗೂ...