ತುಮಕೂರು | ರಾಜ್ಯದಲ್ಲಿ ಭೀಕರ ಬರ : ಕೇಂದ್ರಕ್ಕೆ ಸಮಗ್ರ ವರದಿ ಸಲ್ಲಿಕೆ : ಡಾ. ಜಿ. ಪರಮೇಶ್ವರ

Date:

ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟದಲ್ಲಿರುವ ರೈತರು ಹಾಗೂ ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

- Advertisement -

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಲುಕುಂಟೆ ಗ್ರಾಮದ ಶೇಂಗಾ ಬೆಳೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಮತ್ತು ಮಲೆನಾಡು ಭಾಗಗಳನ್ನು ಹೊರತುಪಡಿಸಿದರೆ ರಾಜ್ಯದ ಬಹುತೇಕ ಕಡೆ ಮಳೆಯ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ರೈತರ ಕೈತಪ್ಪುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

240 ತಾಲೂಕುಗಳಲ್ಲಿ ಬರ ಪರಿಸ್ಥಿತಿ

ರಾಜ್ಯದ 240 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಪ್ರತಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಸಮಗ್ರ ವರದಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ಸಚಿವರಿಗೆ ಜವಾಬ್ದಾರಿ ನೀಡಿದ್ದಾರೆ. ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

1003800693

ಬರ ನಿರ್ವಹಣೆಗೆ ನೆರವು ಕೋರಿ

ಈಗಾಗಲೇ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬರ ಘೋಷಣೆಗೆ ಕೇಂದ್ರದ ಕೆಲವು ನಿಯಮಗಳಿರುವುದರಿಂದ ಪ್ರಕ್ರಿಯೆಗೆ ಸಮಯ ಬೇಕಾಗುತ್ತದೆ. ವರದಿ ಸಿದ್ಧವಾದ ಬಳಿಕ ಬೆಳೆ ನಷ್ಟ ಪರಿಹಾರ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕುಡಿಯುವ ನೀರಿಗೆ ₹5 ಕೋಟಿ

ಬರ ಪರಿಸ್ಥಿತಿ ಎದುರಿಸಲು ಪ್ರತಿ ಜಿಲ್ಲೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ₹5 ಕೋಟಿ ನೀಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಶಾಸಕರಿಗೆ ತಲಾ ₹1 ಕೋಟಿ ನೀಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿರುವ ಹಣವನ್ನು ಬಳಸುವಂತೆ ಸೂಚಿಸಲಾಗಿದೆ ಎಂದು ಡಾ. ಪರಮೇಶ್ವರ ಹೇಳಿದರು.

ವಿಮಾ ಹಣ ಪಾವತಿಗೆ ಕಟ್ಟುನಿಟ್ಟಿನ ಸೂಚನೆ

ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಫಸಲ್ ಬಿಮಾ ಯೋಜನೆಯಡಿ ವಿಮಾ ಹಣ ಸಕಾಲದಲ್ಲಿ ಪಾವತಿಯಾಗಬೇಕು. ಕಳೆದ ವರ್ಷ ಸಾವಿರಾರು ರೈತರು ವಿಮೆ ಕಂತು ಪಾವತಿಸಿದ್ದರೂ ಪರಿಹಾರ ದೊರೆಯದಿರುವ ಬಗ್ಗೆ ದೂರುಗಳು ಬಂದಿವೆ. ಈ ಕುರಿತು ವಿಮಾ ಕಂಪನಿಗಳೊಂದಿಗೆ ಸಭೆ ನಡೆಸಿ, ಅರ್ಹ ರೈತರಿಗೆ ಸಕಾಲದಲ್ಲಿ ಹಣ ಪಾವತಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮೇಲುಕುಂಟೆಯಲ್ಲಿ 45 ದಿನಗಳ ಹಿಂದೆ ಬಿತ್ತನೆ ಮಾಡಲಾಗಿದ್ದ ಶೇಂಗಾ ಬೆಳೆ ಮಳೆಯ ಕೊರತೆಯಿಂದ ತೇವಾಂಶವಿಲ್ಲದೆ ಕಾಳು ಕಟ್ಟದಿರುವುದನ್ನು ಪರಿಶೀಲಿಸಿದ ಅವರು, ಶಿರಾ ತಾಲೂಕಿನ 42 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ರೈತರಿಗೆ ಪಾವತಿಸಿರುವ ಬೆಳೆ ವಿಮಾ ಪರಿಹಾರದ ಸಂಪೂರ್ಣ ವಿವರ ನೀಡುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಬರಪೀಡಿತ ಗ್ರಾಮಗಳಿಗೆ ಭೇಟಿ

ಡಾ. ಪರಮೇಶ್ವರ ಅವರು ಶಿರಾ ತಾಲೂಕಿನ ಕಾಗೆಲಿಂಗನಹಳ್ಳಿ ಹಾಗೂ ಮೇಲುಕುಂಟೆ ಗ್ರಾಮಗಳಿಗೆ ಭೇಟಿ ನೀಡಿ ರೈತರು ಮತ್ತು ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಬರದಿಂದ ಕೃಷಿ ಚಟುವಟಿಕೆಗಳಿಗೆ ಉಂಟಾಗಿರುವ ಹಾನಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ತಡಕಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮನಹಳ್ಳಿಯಲ್ಲಿ ‘ವಿಬಿಜಿ ರಾಮ್ ಜಿ’ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದರು. ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಿ, ಯೋಜನೆಯಡಿ ನಿಯಮಿತವಾಗಿ ಕೆಲಸ ನೀಡಬೇಕು ಹಾಗೂ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ 1 ಲಕ್ಷ ಕ್ವಿಂಟಲ್ ಮೇವಿನ ಬೀಜ ವಿತರಣೆ

ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತುಮಕೂರು ಜಿಲ್ಲೆಯಲ್ಲಿ 1 ಲಕ್ಷ ಕ್ವಿಂಟಲ್ ಮೇವಿನ ಬೀಜ ವಿತರಿಸಲಾಗುತ್ತಿದೆ ಎಂದು ಡಾ. ಪರಮೇಶ್ವರ ತಿಳಿಸಿದರು.

ಪಾವಗಡ ತಾಲೂಕಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ರೈತರಿಗೆ ಮೇವಿನ ಬೀಜ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರತಿ ತಾಲೂಕಿಗೆ 10 ಸಾವಿರ ಕ್ವಿಂಟಲ್ ಮೇವಿನ ಬೀಜ ವಿತರಿಸಲಾಗುತ್ತಿದೆ. ನೀರಿನ ಸೌಲಭ್ಯವಿರುವ ರೈತರು ಮೇವು ಬೆಳೆಯಲು ಮುಂದಾಗಬೇಕು. ಹೆಚ್ಚುವರಿ ಮೇವನ್ನು ರೈತರಿಂದಲೇ ಖರೀದಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಪಾವಗಡ ತಾಲೂಕಿನಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ ಮಳೆಯ ಕೊರತೆಯಿಂದ ಕೇವಲ 4 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಬಿತ್ತನೆಯಾದ ಬೆಳೆ ಕೂಡ ಒಣಗುತ್ತಿದೆ ಎಂದು ಅವರು ಹೇಳಿದರು.

ಈ ತಿಂಗಳ ಅಂತ್ಯದೊಳಗೆ ವರದಿ

ರಾಜ್ಯದಲ್ಲಿ ಎಲ್ಲ ಸಚಿವರು ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಬಳಿಕ ಸಮಗ್ರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಅಗತ್ಯ ಪರಿಹಾರ ಮಂಜೂರು ಮಾಡುವಂತೆ ಒತ್ತಾಯಿಸಲಾಗುವುದು. ಈ ತಿಂಗಳ ಅಂತ್ಯದೊಳಗೆ ವರದಿ ಸಲ್ಲಿಸುವ ಗುರಿ ಹೊಂದಲಾಗಿದೆ ಎಂದು ಡಾ. ಜಿ. ಪರಮೇಶ್ವರ ತಿಳಿಸಿದರು.

ಪಾವಗಡ ತಾಲೂಕಿಗೆ ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಯಲ್ಲಿದ್ದು, ಇದರಿಂದ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...