ತುಮಕೂರು | ವಿದೇಶಗಳಲ್ಲೂ ಸಿದ್ದಗಂಗಾ ಶಿಕ್ಷಣ ಸಂಸ್ಥೆ ವಿಸ್ತರಿಸಲಿ : ಮುರುಳೀಧರ ಹಾಲಪ್ಪ

Date:

ಅನ್ನ, ಅಕ್ಷರ ಮತ್ತು ಆಶ್ರಯಕ್ಕೆ ದೇಶದಲ್ಲೇ ಹೆಸರುವಾಸಿಯಾಗಿರುವ ಸಿದ್ದಗಂಗಾ ಮಠವು ತನ್ನ ಶೈಕ್ಷಣಿಕ ಸಂಸ್ಥೆಗಳನ್ನು ಹೊರರಾಜ್ಯಗಳಲ್ಲದೆ ವಿದೇಶಗಳಿಗೂ ವಿಸ್ತರಿಸುವ ಮೂಲಕ ಅಲ್ಲಿನ ಭಾರತೀಯ ಮಕ್ಕಳಿಗೂ ಸಂಸ್ಕಾರಯುತ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮನವಿ ಮಾಡಿದರು.

- Advertisement -

ತುಮಕೂರು ನಗರದ ಜಯನಗರದಲ್ಲಿರುವ ತಮ್ಮ ನಿವಾಸಕ್ಕೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಪಾದಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಶ್ರೀಗಳ ಮುಂದೆ ಈ ಮನವಿ ಸಲ್ಲಿಸಿದ ಅವರು, ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ದೇಶದಾದ್ಯಂತ ವಿಶೇಷ ಗೌರವ ಪಡೆದಿವೆ. ಈ ಶಿಕ್ಷಣ ವ್ಯವಸ್ಥೆ ಬೇರೆ ದೇಶಗಳಲ್ಲಿರುವ ಭಾರತೀಯ ಮಕ್ಕಳಿಗೂ ಲಭ್ಯವಾಗಬೇಕು ಎಂಬುದು ತಮ್ಮ ಆಶಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಜೆಎಸ್‌ಎಸ್ ಹಾಗೂ ಬಿಜಿಎಸ್ ಸಂಸ್ಥೆಗಳು ಈಗಾಗಲೇ ನೆರೆಯ ರಾಷ್ಟ್ರಗಳು ಸೇರಿದಂತೆ ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿವೆ. ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯೂ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಇದೇ ರೀತಿಯಲ್ಲಿ ಸಿದ್ದಗಂಗಾ ಮಠವೂ ಕರ್ನಾಟಕದ ಹೊರಗೆ ಹಾಗೂ ವಿದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ನೇಪಾಳ, ಭೂತಾನ್, ಮಾರಿಷಸ್, ಅಮೆರಿಕ ಹಾಗೂ ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಲ್ಲಿ ಸಿದ್ದಗಂಗಾ ಮಠದ ಶಿಕ್ಷಣ ಸಂಸ್ಥೆಗಳು ಆರಂಭವಾಗಬೇಕು ಎಂಬುದು ತಮ್ಮಂತಹ ಅನೇಕರ ಆಶಯವಾಗಿದೆ. ಮಠ ಶಿಕ್ಷಣ ಸಂಸ್ಥೆಗಳನ್ನು ವಿಸ್ತರಿಸಲು ಮುಂದಾದರೆ ಆಯಾ ರಾಜ್ಯಗಳ ಸರ್ಕಾರಗಳು, ದಾನಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಸಹಕಾರ ನೀಡುವ ವಿಶ್ವಾಸವಿದೆ. ಶ್ರೀಗಳು ಮನಸ್ಸು ಮಾಡಿದರೆ ನೆರವಿನ ಮಹಾಪೂರವೇ ಹರಿದುಬರಲಿದೆ ಎಂದು ಮುರುಳೀಧರ ಹಾಲಪ್ಪ ಆಶಾಭಾವನೆ ವ್ಯಕ್ತಪಡಿಸಿದರು.

ಪಾದಪೂಜೆ ಸ್ವೀಕರಿಸಿ ರೈತ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಗಸ್ಟ್ ತಿಂಗಳು ಮುಗಿಯುತ್ತಾ ಬಂದರೂ ನಿರೀಕ್ಷಿತ ಮಳೆಯಾಗಿಲ್ಲ. ಶೇಂಗಾ ಬಿತ್ತನೆ ಸಾಧ್ಯವಾಗಿಲ್ಲ. ಕೆಲವೆಡೆ ಬಿತ್ತಿರುವ ರಾಗಿಯೂ ಮಳೆಯಿಲ್ಲದೆ ಒಣಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಠದಲ್ಲಿಯೂ ನೀರಿನ ಲಭ್ಯತೆ ಕಡಿಮೆಯಾಗಿದ್ದು, ದೇವಾಲಪುರ ಕೆರೆಯಲ್ಲಿ ಇರುವ ನೀರನ್ನೇ ಬಳಸಲಾಗುತ್ತಿದೆ. ಮಕ್ಕಳಿಗೆ ಕಡಿಮೆ ನೀರು ಬಳಕೆ ಮಾಡುವಂತೆ ಸಲಹೆ ನೀಡಲಾಗುತ್ತಿದೆ. ಸರ್ಕಾರ ಬರ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ. ಮಠ-ಮಾನ್ಯಗಳೂ ತಮ್ಮ ಶಕ್ತಿಮೀರಿ ಬರ ಪರಿಸ್ಥಿತಿಗೆ ಸ್ಪಂದಿಸುತ್ತಿವೆ ಎಂದರು.

ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಲು ಮಠ-ಮಾನ್ಯಗಳ ಕೊಡುಗೆ ಅಪಾರವಾಗಿದೆ. ಬರಗಾಲದ ಸಂದರ್ಭದಲ್ಲಿ ನೀರು, ಅನ್ನ ಹಾಗೂ ವಿದ್ಯುತ್‌ನ್ನು ಮಿತವಾಗಿ ಬಳಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಹಿಂದಿನ ಅವಿಭಕ್ತ ಕುಟುಂಬಗಳಲ್ಲಿ ಮಕ್ಕಳಿಗೆ ಇಂತಹ ಮೌಲ್ಯಗಳನ್ನು ಕಲಿಸಲಾಗುತ್ತಿತ್ತು. ಆದರೆ ಇಂದು ವಿಭಕ್ತ ಕುಟುಂಬ ವ್ಯವಸ್ಥೆಯಿಂದ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿದ್ದರೂ ಸಂಸ್ಕಾರದ ಕೊರತೆ ಕಂಡುಬರುತ್ತಿದೆ. ಇದರಿಂದ ಕೆಲವರು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂದಿನ ‘ಜೆನ್‌ ಜಿ’ ಪೀಳಿಗೆಗೆ ಶಿಕ್ಷಣದ ಜೊತೆಗೆ ಸಂಸ್ಕಾರವೂ ಅತ್ಯಗತ್ಯ ಎಂದು ಶ್ರೀಗಳು ಹೇಳಿದರು.

ಹಾಲಪ್ಪ ಪ್ರತಿಷ್ಠಾನದ ಮೂಲಕ ಮುರುಳೀಧರ ಹಾಲಪ್ಪ ಹಾಗೂ ಅವರ ಪತ್ನಿ ಉತ್ತಮ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳು, ರೈತರು ಹಾಗೂ ರೈತ ಮಹಿಳೆಯರನ್ನು ಗುರುತಿಸಿ ಪುರಸ್ಕರಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಸಿದ್ದಲಿಂಗ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳನ್ನು ವಿದೇಶಗಳಿಗೆ ವಿಸ್ತರಿಸುವಂತೆ ಮುರುಳೀಧರ ಹಾಲಪ್ಪ ಅವರು ಮಾಡಿರುವ ಮನವಿಗೆ ಪ್ರತಿಕ್ರಿಯಿಸಿದ ಶ್ರೀಗಳು, ಸದ್ಯದ ಪರಿಸ್ಥಿತಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ವಿಸ್ತರಿಸುವುದು ಕಷ್ಟ. ಭೂಮಿಯ ಬೆಲೆ ಗಗನಮುಖಿಯಾಗಿದೆ. ಅಲ್ಲದೆ ಇಂಗ್ಲಿಷ್ ಮಾಧ್ಯಮ ಶಿಕ್ಷಣದತ್ತ ಜನರ ಒಲವು ಹೆಚ್ಚಾಗಿದ್ದು, ಗ್ರಾಮೀಣ ಶಾಲೆಗಳನ್ನು ಉಳಿಸುವುದೇ ದೊಡ್ಡ ಸವಾಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮುರುಳೀಧರ ಹಾಲಪ್ಪ ಹಾಗೂ ಅವರ ಪತ್ನಿ ಕಲ್ಪನಾ ಹಾಲಪ್ಪ ಅವರು ಸಿದ್ದಗಂಗಾ ಶ್ರೀಗಳನ್ನು ಮಂಗಳವಾದ್ಯದೊಂದಿಗೆ ಬರಮಾಡಿಕೊಂಡು ಪಾದಪೂಜೆ ನೆರವೇರಿಸಿದರು. ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ರೈತ ಮಹಿಳೆಯರನ್ನು ಶ್ರೀಗಳು ಅಭಿನಂದಿಸಿದರು. ಪೃಥ್ವಿರಾಜ್ ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗ್ರಾಮೀಣ ಪದವೀಧರರಿಗೆ ಉದ್ಯೋಗದ ದಾರಿ ತೋರಿಸಲು ಹಾಲಪ್ಪ ಫೌಂಡೇಷನ್‌ನಿಂದ ಎರಡು ದಿನಗಳ ಕಾರ್ಯಾಗಾರ

ಗ್ರಾಮೀಣ ಭಾಗದ ಪದವೀಧರ ನಿರುದ್ಯೋಗಿ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗ...

ತುಮಕೂರು | 2047ರ ಭಾರತ ನಿರ್ಮಾಣಕ್ಕೆ ಯುವಶಕ್ತಿಯೇ ಬುನಾದಿ : ಪ್ರೊ. ಪರಶುರಾಮ ಕೆ.ಜಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಗುರಿ...

ತುಮಕೂರು | ಮಾಧ್ಯಮ ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ; ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ‘ಸಿದ್ಧಾರ್ಥ ಸಂಪದ’

ಪತ್ರಿಕೋದ್ಯಮ ಮತ್ತು ಮಾಧ್ಯಮ ಕ್ಷೇತ್ರದ ಕೌಶಲ್ಯಗಳನ್ನು ತರಗತಿಯ ಪಾಠಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಂದಲೇ...