ತುಮಕೂರು | ಸಿಲ್ಕು, ಮಿಲ್ಕು ಮಾತ್ರವೇ ಜಿಲ್ಲೆಯ ರೈತರ ಕೈಹಿಡಿಯುವ ಬೆಳೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

Date:

ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವ ಬೆಳೆ ಎಂದರೆ ಸಿಲ್ಕು ಮತ್ತು ಮಿಲ್ಕು ಮಾತ್ರವೇ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

- Advertisement -

ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ರೇಷ್ಮೆ ಬೆಳೆಗಾರರ ಕಾರ್ಯಾಗಾರ ಹಾಗೂ ನನ್ನ ರೇಷ್ಮೆ-ನನ್ನ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಕೇವಲ ಒಂದು ಎಕರೆ ಭೂಮಿ ಇದ್ದರೆ ಒಂದು ಕುಟುಂಬವನ್ನು ಸಾಕುವಷ್ಟು ಸಾಮರ್ಥ್ಯ ಇರುವುದು ರೇಷ್ಮೆ ಬೆಳೆಗೆ ಮಾತ್ರ ಎಂದು ಹೇಳಿದ ಅವರು, ವಿಶೇಷವಾಗಿ ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವುದು ರೇಷ್ಮೆ ಬೆಳೆ ಮತ್ತು ಹೈನುಗಾರಿಕೆ ಮಾತ್ರ ಎಂದು ಅಭಿಪ್ರಾಯಪಟ್ಟರು. 

ರೇಷ್ಮೆ ಉದ್ದಿಮೆ ಕೇವಲ ಬೆಳೆ ಅಲ್ಲ. ಇದೊಂದು ಕೈಗಾರಿಕೆ ಎಂದ ಅವರು ಆ ಕಾರಣದಿಂದಲೇ ಈ ಇಲಾಖೆಯನ್ನು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಇಡಲಾಗಿದೆ ಎಂದರು.

ಕಡಿಮೆ ಭೂಮಿಯಲ್ಲಿ ಅತ್ಯಧಿಕ ಲಾಭ ತರಬಹುದಾದ ರೇಷ್ಮೆ ಬೆಳೆಯ ವಿಸ್ತೀರ್ಣವನ್ನು ಹೆಚ್ಚು ಮಾಡಬೇಕಿದೆ ಎಂದ ಅವರು, ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದಲೂ ಪೂರಕ ನೆರವು, ಸಹಕಾರವನ್ನು ನೀಡುವ ಅತ್ಯಂತ ಅವಶ್ಯ ಇದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ನೀಡುವ ಹಾಗೂ ರೇಷ್ಮೆ ಉದ್ದಿಮೆಯನ್ನು ಉತ್ತೇಜಿಸುವ ಯೋಜನೆಗಳನ್ನು ರೂಪಿಸುವುದಾಗಿ ಅವರು ತಿಳಿಸಿದರು. 

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ರೈತರು ರೇಷ್ಮೆ ಬೆಳೆಯನ್ನು ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವುದು ಅನಿವಾರ್ಯ ಮತ್ತು ಅಗತ್ಯ ಎಂದ ಅವರು, ರೇಷ್ಮೆ ಇಲಾಖೆ ಸೇರಿದಂತೆ ಈಗಾಗಲೇ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಿಗೆ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿದ್ದು, ಇಲಾಖೆಯನ್ನು ಬಲಪಡಿಸುವ ಎಲ್ಲಾ ಕಾರ್ಯಗಳನ್ನು ರೂಪಿಸುವುದಾಗಿ ಅವರು ತಿಳಿಸಿದರು.

ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಾತನಾಡಿ, ರೇಷ್ಮೆ ಕೃಷಿ ಲಾಭದಾಯಕ ಉದ್ದಿಮೆಯಾಗಿದ್ದು, ಚೀನಾಗೆ ಸರಿಸಮಾನವಾಗಿ ಉತ್ತೇಜನಗಳನ್ನು ನಮ್ಮ ರೈತರಿಗೆ ಕೊಡುವ ಅಗತ್ಯವಿದೆ ಎಂದರು. 

ರೇಷ್ಮೆ ಕೃಷಿಯಲ್ಲಿ ಕೇವಲ ಗೂಡು ಬೆಳೆಯುವುದು ಅಷ್ಟೇ ಅಲ್ಲದೆ, ನೂಲು ಬಿಚ್ಚುವ ತಂತ್ರಜ್ಞಾನಕ್ಕೆ ಉದ್ದಿಮೆಗಳು ಮುಂದಾಗಬೇಕು. ಇದರಿಂದ ರೇಷ್ಮೆ ಕೃಷಿ ಉದ್ದಿಮೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ. ಇದಕ್ಕಾಗಿ ಸರ್ಕಾರವನ್ನು ಅವಲಂಬಿಸಿದರೆ ಸಾಲದು. ಖಾಸಗಿ ವಲಯಗಳು ನೂಲು ಬಿಚ್ಚುವ ಕೈಗಾರಿಕೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಅಲ್ಲದೆ, ತುಮಕೂರಿನಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ತಿಳಿಸಿದರು. 

ಇದಕ್ಕೂ ಮುನ್ನ ರೇಷ್ಮೆ ಬೆಳೆಗಾರರಾದ ಶಿವಾನಂದ ಅವರು ಮಾತನಾಡಿ, ರಾಜ್ಯದಲ್ಲಿ ರೇಷ್ಮೆ ಬೇಸಾಯವನ್ನು ಉತ್ತೇಜಿಸುವ ಹಾಗೂ ರೇಷ್ಮೆ ಇಲಾಖೆಯನ್ನು ಬಲಪಡಿಸಲು ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ರೇಷ್ಮೆ ಅಪರ ನಿರ್ದೇಶಕಿ ಬಿ.ಆರ್. ಪ್ರತಿಭಾ, ರೇಷ್ಮೆ ಜಂಟಿ ನಿರ್ದೇಶಕರಾದ ಕೆ.ಎನ್. ರವಿ, ರಾಚಪ್ಪ, ವಿಜ್ಞಾನಿ ಡಾ: ವೈ. ಶ್ರೀನಿವಾಸಲು ಉಪಸ್ಥಿತರಿದ್ದರು. ರೇಷ್ಮೆ ಉಪನಿರ್ದೇಶಕ ಟಿ. ಲಕ್ಷ್ಮೀ ನರಸಯ್ಯ ಸ್ವಾಗತಿಸಿದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಲಾಟರಿ ಮೂಲಕ 32 ಮಂದಿಯ ಆಯ್ಕೆ ಬೇಡ ; ಎಲ್ಲ ಅರ್ಹರಿಗೂ ನಿವೇಶನ ನೀಡಿ : ಮಂಜುನಾಥ್ ಹೆತ್ತೇನಹಳ್ಳಿ

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶ್ರಯ...

ತುಮಕೂರು | ಕನ್ನಡದ ಬೆಳವಣಿಗೆಗೆ ಜಾತಿ, ಧರ್ಮಗಳ ಗಡಿಗಳಿಲ್ಲ: ಪ್ರೊ. ಎಸ್. ಮಲ್ಲಣ್ಣ

 ಕನ್ನಡ ಭಾಷೆಯ ಬೆಳವಣಿಗೆಗೆ ಜಾತಿ ಮತ್ತು ಧರ್ಮಗಳ ಗಡಿಗಳು ಎಂದಿಗೂ ಅಡ್ಡಿಯಾಗಿಲ್ಲ....

ತುಮಕೂರು | ಕನ್ನಡ ಕೇವಲ ಮಾತನಾಡುವ ಭಾಷೆಯಲ್ಲ, ಆಸ್ವಾದಿಸುವ ಸಂಸ್ಕೃತಿ: ಪ್ರೊ. ಕೃಷ್ಣೇಗೌಡ

ಕನ್ನಡ ಭಾಷೆಯನ್ನು ಕೇವಲ ಮಾತನಾಡುವುದಷ್ಟೇ ಅಲ್ಲ, ಅದರ ಸೊಗಡು, ಸಾಹಿತ್ಯ ಮತ್ತು...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...