ತುಮಕೂರು | ಎಸ್‌ಐಆರ್-2026 : ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Date:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ERO, AERO ಹಾಗೂ ಸಂಬಂಧಿಸಿದ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ನಿಗದಿತ ದಿನಾಂಕದಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲು ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಪ್ರತಿದಿನ ನೋಟಿಸ್ ಜಾರಿಗೊಳಿಸಿ, ಅಗತ್ಯವಿರುವ ಕಡೆ ವಿಚಾರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವುದರೊಂದಿಗೆ, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಬೇಕು. ನಿಗದಿತ ದಾಖಲೆಗಳ ಘೋಷಣೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ವ್ಯವಸ್ಥಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವುದರ ಜೊತೆಗೆ, ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಮೇಲೂ ಸೂಕ್ತ ಗಮನಹರಿಸಬೇಕು. ಹೊಸದಾಗಿ ನೇಮಕಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ SIR ಪ್ರಕ್ರಿಯೆ ಹಾಗೂ ಮೊಬೈಲ್ ಆ್ಯಪ್ ಬಳಕೆಯ ಕುರಿತು ಅಗತ್ಯ ತರಬೇತಿ ನೀಡಿ, ಆ್ಯಪ್ ಅನ್ನು ಸಮರ್ಪಕವಾಗಿ ಬಳಸುವಂತೆ ಮಾರ್ಗದರ್ಶನ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಆದ್ಯತೆಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಹೊಸದಾಗಿ ನಿಯೋಜನೆಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ SIR ಕಾರ್ಯದ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು. ಹೊಸ ಬೂತ್‌ಗಳ ಜವಾಬ್ದಾರಿ ಹೊಂದಿರುವ EROಗಳು ಹೆಚ್ಚಿನ ಗಮನಹರಿಸಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಮಾನ್ಯತೆ ಪಡೆದ ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...