ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯುವ ಸಮುದಾಯ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು.

- Advertisement -

ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಂ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಭಾರತದ ಪ್ರಜಾಪ್ರಭುತ್ವದ ನಾಲ್ಕು ಪ್ರಮುಖ ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗದ ಮೂಲ ಉದ್ದೇಶ ದೇಶದ ಸಮಗ್ರ ಅಭಿವೃದ್ಧಿಯಾಗಿದೆ. ಹೀಗಾಗಿ ಯುವಜನರು ಸಮಾಜದಲ್ಲಿರುವ ಬಡವರು, ನಿರ್ಗತಿಕರು ಹಾಗೂ ಶೋಷಿತ ವರ್ಗಗಳ ಧ್ವನಿಯಾಗಿ ಕೆಲಸ ಮಾಡಬೇಕು. ಸಾಮಾಜಿಕ ನ್ಯಾಯ ಎನ್ನುವುದು ಕೇವಲ ಒಂದು ಘೋಷಣೆಯಾಗದೆ, ಪ್ರತಿಯೊಬ್ಬರಿಗೂ ಜೀವನದ ಪ್ರತಿಯೊಂದು ಹಂತದಲ್ಲೂ ದೊರೆಯುವಂತಾಗಬೇಕು ಎಂದರು.

1004393332

ಇಂದಿನ ಯುವ ಸಂಸತ್ತಿನ ಚರ್ಚೆಗಳನ್ನು ಗಮನಿಸಿದಾಗ ತಮ್ಮ ಬಾಲ್ಯದ ದಿನಗಳು ನೆನಪಿಗೆ ಬಂದವು. ಯುವ ಮನಸ್ಸುಗಳಲ್ಲಿ ಭಯವಿಲ್ಲ, ಪ್ರಶ್ನಿಸುವ ಧೈರ್ಯ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಆತ್ಮವಿಶ್ವಾಸವಿದೆ ಎಂಬುದನ್ನು ಈ ಕಾರ್ಯಕ್ರಮ ಸಾಬೀತುಪಡಿಸಿದೆ. ಯುವಜನರು ಇದೇ ಆತ್ಮವಿಶ್ವಾಸವನ್ನು ಉಳಿಸಿಕೊಂಡು ಸರಿಯಾದ ಮಾರ್ಗದಲ್ಲಿ ಮುನ್ನಡೆದರೆ ನಿಗದಿತ ಗುರಿ ತಲುಪುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಳೆದ ಮೂರು ವರ್ಷಗಳಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಸಹಕಾರದಿಂದ ತುಮಕೂರು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ಮೂಲಕ ಸುಮಾರು 3,500 ಕೋಟಿ ರೂ. ಮೌಲ್ಯದ ಸಾಧನ-ಸಲಕರಣೆಗಳ ವಿತರಣೆ, ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

1993ರಿಂದ ಬಗೆಹರಿಯದೆ ಉಳಿದಿದ್ದ ದಾಖಲೆರಹಿತ ಗ್ರಾಮಗಳ ಸಮಸ್ಯೆಗೆ ಕಂದಾಯ ಇಲಾಖೆಯ ಮೂಲಕ ಪರಿಹಾರ ಕಲ್ಪಿಸಿ, ಗ್ರಾಮಗಳಿಗೆ ದಾಖಲೆ ಒದಗಿಸುವುದರೊಂದಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಒಂದೇ ಬಾರಿಗೆ 29 ಸಾವಿರ ಕುಟುಂಬಗಳಿಗೆ ದಾಖಲೆಗಳನ್ನು ಒದಗಿಸಿರುವುದು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿರುವುದು ಜಿಲ್ಲೆಯ ಹೆಮ್ಮೆಯ ಸಾಧನೆಯಾಗಿದೆ ಎಂದರು.

1004393325

ವಿದ್ಯಾರ್ಥಿ ಜೀವನದಿಂದಲೇ ನಾವು ಯಾವ ಗುರಿಯತ್ತ ಗಮನ ಹರಿಸುತ್ತೇವೆ ಎಂಬುದು ಮುಖ್ಯ. ಸರಿಯಾದ ದಿಕ್ಕು ಮತ್ತು ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಲು ಸಾಧ್ಯ. ಸುಮಾರು 70 ವರ್ಷಗಳ ಬೇಡಿಕೆಯಾಗಿದ್ದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ, ಉದ್ಯೋಗ ಮೇಳಗಳ ಮೂಲಕ 3,000 ಯುವಜನರಿಗೆ ಉದ್ಯೋಗ, 90 ವರ್ಷದ ಅಸಹಾಯಕ ವ್ಯಕ್ತಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಹಲವು ಜನಪರ ಕಾರ್ಯಗಳು ಜಿಲ್ಲಾಡಳಿತದ ಸಾಧನೆಗಳಾಗಿವೆ ಎಂದು ವಿವರಿಸಿದರು.

ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಸುಮಾರು 3,200 ಕೋಟಿ ರೂ.ಗಳ ಕಾಮಗಾರಿಗಳು ಸೇರಿದಂತೆ ಪ್ರಮುಖ ಅಭಿವೃದ್ಧಿ ಯೋಜನೆಗಳು ಜಿಲ್ಲೆಯಲ್ಲಿ ಪ್ರಗತಿಯಲ್ಲಿವೆ. ಈ ಯೋಜನೆಗಳಿಂದ ಜಿಲ್ಲೆಗೆ ನೀರು ಹರಿದರೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯುವುದರೊಂದಿಗೆ ರೈತರ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ. ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳು ಸಾಕಾರಗೊಂಡರೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಮಟ್ಟದ ಯುವ ಸಂಸತ್ತಿನಲ್ಲಿ ಉತ್ತಮ ಭಾಷಣ ಹಾಗೂ ಪ್ರತಿಭೆ ಪ್ರದರ್ಶಿಸುವ ವಿದ್ಯಾರ್ಥಿಗಳು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ಸಂಸತ್ತಿನ ಅಂತಿಮ ಸುತ್ತಿಗೆ ಆಯ್ಕೆಯಾಗಲಿದ್ದಾರೆ. ಇಂತಹ ವೇದಿಕೆಗಳು ಯುವಜನರ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಪ್ರಜಾಪ್ರಭುತ್ವದ ಅರಿವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಕಾರ್ಯಕ್ರಮ ಆಯೋಜಿಸಿರುವ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ‘ನಮ್ಮ ಮಾತು-ನಮ್ಮ ಭವಿಷ್ಯ’ ಎಂಬುದು ಯುವ ಸಂಸತ್ತಿನ ಘೋಷವಾಕ್ಯವಾಗಿದೆ. ನಮ್ಮ ಮಾತು ಎಂದರೆ ಜನರ ಧ್ವನಿ, ನಮ್ಮ ಭವಿಷ್ಯ ಎಂದರೆ ದೇಶದ ಭವಿಷ್ಯ. ಈ ಆಶಯವನ್ನು ಅರ್ಥಮಾಡಿಕೊಂಡು ಯುವಜನರು ಸಮಾಜದ ಧ್ವನಿಯಾಗಿ ಕೆಲಸ ಮಾಡಬೇಕು. ಯಾವುದೇ ವಿಚಾರವನ್ನು ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬಾರದು. ಪ್ರಶ್ನಿಸುವ ಗುಣ ಮತ್ತು ವಿಮರ್ಶಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

1004393326

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಚಂದ್ರಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಯುವಜನರಿಗೆ ಸಂಸತ್ತಿನ ಕಾರ್ಯವೈಖರಿ, ನಾಯಕತ್ವದ ಗುಣ, ವಿಷಯ ಮಂಡನೆ, ಮಾತನಾಡುವ ಕೌಶಲ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಯುವ ಸಂಸತ್ತು ಆಯೋಜಿಸಲಾಗಿದೆ. ಜಿಲ್ಲೆಯ 10 ತಾಲೂಕುಗಳಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಇಲ್ಲಿ ಉತ್ತಮ ಪ್ರದರ್ಶನ ನೀಡುವವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳಾದ ಈಶ್ವರಪ್ಪ ಮತ್ತು ಸಂಜೀವಪ್ಪ, ಯೋಜನಾ ನಿರ್ದೇಶಕ ಸಣ್ಣ ಮಸಿಯಪ್ಪ, ವಿವಿಧ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

ಯುವ ಸಂಸತ್ತಿನಲ್ಲಿ ಕೃಷಿ, ಸಮಾಜ ಕಲ್ಯಾಣ, ಕುಡಿಯುವ ನೀರು, ಉನ್ನತ ಶಿಕ್ಷಣ, ಗ್ರಂಥಾಲಯ ಸೇರಿದಂತೆ ಹಲವು ಜನಪರ ವಿಷಯಗಳ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರಾಗಿ ವಿದ್ಯಾರ್ಥಿಗಳು ಚರ್ಚೆ ನಡೆಸಿದರು. ವಿದ್ಯಾರ್ಥಿಗಳ ವಿಷಯ ಮಂಡನೆ, ವಾದ-ಪ್ರತಿವಾದ ಹಾಗೂ ಸಭಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ ವಿದ್ಯಾರ್ಥಿನಿಯ ಸಭಾ ನಿರ್ವಹಣಾ ಕೌಶಲಕ್ಕೆ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಸಂವಿಧಾನ ದೇಶದ ಚರಿತ್ರೆ, ವರ್ತಮಾನ ಮತ್ತು ಭವಿಷ್ಯವನ್ನು ಪ್ರತಿನಿಧಿಸುತ್ತದೆ: ಎ. ನಾರಾಯಣ

 ಪ್ರಪಂಚದಲ್ಲೇ ಬೃಹತ್ ಲಿಖಿತ ಸಂವಿಧಾನವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸಂವಿಧಾನವು ಏಕಕಾಲಕ್ಕೆ...

ಗುಬ್ಬಿ | ಸಿ.ಎಸ್.ಪುರದಲ್ಲಿ ನ.13 ರಂದು ದೇವೇಗೌಡರ ಪುತ್ಥಳಿ ಅನಾವರಣ : ಶಾಸಕ ಎಂ.ಟಿ.ಕೃಷ್ಣಪ್ಪ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ರಾಜಕೀಯ ಹಾದಿ ಹಾಗೂ ಸಮಾಜದ ಅಭಿವೃದ್ದಿ...

ಶಿರಾ | ಆತ್ಮವಿಶ್ವಾಸ, ಪರಿಶ್ರಮವೇ ಸಾಧನೆಯ ಯಶಸ್ಸಿನ ಸೂತ್ರ: ದೀಪಿಕಾ ಟಿಸಿ

ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮ ಅತ್ಯಂತ...

ತುರುವೇಕೆರೆಯಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಸುಗಮ ಸಂಚಾರಕ್ಕೆ ಅನುವು

ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಪಟ್ಟಣ...