ತುಮಕೂರು | ಮಹಿಳಾ ಸಬಲೀಕರಣದ ಚಿಂತನೆಗಳನ್ನು ಬಿಂಬಿಸುವ ‘ಸುಯೋಗಿನಿ’ ಕೃತಿ ಜನಾರ್ಪಣೆ

Date:

ಸಮಾಜದ ದೈನಂದಿನ ವಿದ್ಯಮಾನಗಳ ಸತ್ಯಾಸತ್ಯತೆಗಳನ್ನು ಪರಾಮರ್ಶಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಸ್ವಾತಂತ್ರ್ಯಪೂರ್ವದಿಂದಲೂ ಪತ್ರಿಕೆಗಳು ತಮ್ಮದೇ ಆದ ವಿಶಿಷ್ಟ ಅಸ್ತಿತ್ವವನ್ನು ಹೊಂದಿವೆ ಎಂದು ತುಮಕೂರು ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಹೇಳಿದರು.

- Advertisement -

ನಗರದಲ್ಲಿ ನಡೆದ ‘ದಿ.ಚೆನ್ನುಡಿ’ ಪತ್ರಿಕೆಯ ಬೆಳ್ಳಿ ಸಂಚಿಕೆ ಬಿಡುಗಡೆ ಹಾಗೂ ಡಾ. ಸುಲೋಚನ ಜಿ.ಎಸ್. ಅವರ ‘ಸುಯೋಗಿನಿ’ ಕೃತಿ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಾರ್ವಜನಿಕರು ಹಾಗೂ ಯುವಜನರು ಪತ್ರಿಕೆಗಳನ್ನು ಓದುವ ಉತ್ತಮ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಪತ್ರಿಕೆಗಳು ಸಮಾಜದ ಆಗುಹೋಗುಗಳನ್ನು ಅರಿಯಲು ಹಾಗೂ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತವೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ‘ಸುಯೋಗಿನಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಬೇಕು. ಮಹಿಳಾ ಸಬಲೀಕರಣದ ಚಿಂತನೆಗಳನ್ನು ಬಿಂಬಿಸುವಂತಹ ಮತ್ತಷ್ಟು ಕೃತಿಗಳು ಪ್ರಕಟವಾಗಬೇಕು ಎಂದು ಆಶಿಸಿದರು.

ಕೃತಿಯ ಲೇಖಕಿ ಡಾ. ಸುಲೋಚನ ಜಿ.ಎಸ್. ಮಾತನಾಡಿ, ತುಮಕೂರಿನಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿರುವುದು ತಮ್ಮ ಲೇಖನಗಳ ರಚನೆಗೆ ಪ್ರಮುಖ ಪ್ರೇರಣೆಯಾಗಿದೆ ಎಂದರು.

‘ಸುಯೋಗಿನಿ’ ಕೃತಿಯಲ್ಲಿ ಮಹಿಳೆಯರ ಮನೆ-ಮನೆಗಳ ಕಥೆಗಳು, ಅವರ ಬದುಕಿನ ಸವಾಲುಗಳು ಹಾಗೂ ಮಹಿಳಾ ಸಶಕ್ತೀಕರಣಕ್ಕೆ ಸಂಬಂಧಿಸಿದ ಬರಹಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ತುಮಕೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೇಶ್ ಮಾತನಾಡಿ, ಹಿಣಿಯರಿಂದ ಹಿಡಿದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಮಹಿಳೆಯೂ ‘ಸುಯೋಗಿನಿ’ ಕೃತಿಯನ್ನು ಓದುವ ಮೂಲಕ ಸ್ಫೂರ್ತಿ ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಚಾಲುಕ್ಯ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ನಾಗಭೂಷಣ್, ಕನಕದಾಸ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ಪರಮೇಶ್ವರ್, ಸ್ನೇಹ ಮನೋವಿಕಾಸ ಕೇಂದ್ರದ ಡಾ. ಲೋಕೇಶ್ ಬಾಬು, ಪ್ರಕಾಶಕ ಚನ್ನಬಸವ ಎಂ., ನಿವೃತ್ತ ಪ್ರಾಚಾರ್ಯ ಪ್ರೊ. ಕೆ. ಚಂದ್ರಣ್ಣ, ಪತ್ರಕರ್ತ ಯೋಗೀಶ್ ಟಿ., ರಾಜ್ಯ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್ ಶಾಂತರಾಜು ಸೇರಿದಂತೆ ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮಾರಂಭದ ಅಂಗವಾಗಿ ಯಕ್ಷದೀವಿಗೆ ಬಳಗದಿಂದ ‘ಏಕಾದಶಿ ಮಹಾತ್ಮೆ’ ಬಯಲಾಟ ಯಕ್ಷಗಾನ ಹಾಗೂ ಶ್ಯಾಡೋಸ್ ರಾಜ್ ಡ್ಯಾನ್ಸ್ ಅಕಾಡೆಮಿಯಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಯುವಜನತೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು: ಡಾ.ಶಿವಣ್ಣ

ಯುವಜನತೆ ಶಿಕ್ಷಣದ ಜೊತೆಗೆ ಸಮಾಜದ ಬಗ್ಗೆ ಕಾಳಜಿ, ಜವಾಬ್ದಾರಿ ಹಾಗೂ ಸೇವಾ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...