ತುಮಕೂರು | ಸಂವಿಧಾನದ ಆಶಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಡಾ. ಫಕ್ಕೀರೇಶ ಹಳ್ಳಳ್ಳಿ

Date:

ದೇಶಕ್ಕೆ ಸಂವಿಧಾನ ಜಾರಿಯಾಗಿ 77 ವರ್ಷಗಳು ಕಳೆದಿದ್ದರೂ ಸಮಾಜದಲ್ಲಿ ಜಾತಿ ಅಸಮಾನತೆ, ಅಸ್ಪೃಶ್ಯತೆ ಮತ್ತು ದಬ್ಬಾಳಿಕೆ ಇಂದಿಗೂ ಜೀವಂತವಾಗಿವೆ. ಇಂತಹ ಅಸಮಾನತೆ ಹಾಗೂ ದೌರ್ಜನ್ಯಗಳ ವಿರುದ್ಧ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟದ ಹಾದಿ ಅನಿವಾರ್ಯವಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಫಕ್ಕೀರೇಶ ಹಳ್ಳಳ್ಳಿ ಅಭಿಪ್ರಾಯಪಟ್ಟರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಗುರುವಾರ (ನ.26) ಆಯೋಜಿಸಿದ್ದ 77ನೇ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಗ್ರಾಮೀಣ ಪ್ರದೇಶಗಳ ಕೆರೆಗಳ ಬಳಕೆಯಲ್ಲಿಯೂ ಜಾತಿ ಅಸಮಾನತೆಯ ಕುರುಹುಗಳು ಕಂಡುಬರುತ್ತಿವೆ. ಮನುಸ್ಮೃತಿಯ ವಿಚಾರಧಾರೆಗಳು ಇಂತಹ ಅಸಮಾನತೆ, ದೌರ್ಜನ್ಯ ಮತ್ತು ದಬ್ಬಾಳಿಕೆಗೆ ಮೂಲ ಕಾರಣವಾಗಿವೆ. ಇಂದಿನ ರಾಜಕೀಯ ಅಧಿಕಾರದ ದಬ್ಬಾಳಿಕೆಯ ವಿರುದ್ಧವೂ ಜನರು ತಮ್ಮ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.

ದೇಶವೆಂದರೆ ಕೇವಲ ಭೌಗೋಳಿಕ ಪ್ರದೇಶವಲ್ಲ. ವಿವಿಧ ಆಚಾರ-ವಿಚಾರ, ಸಂಸ್ಕೃತಿ ಮತ್ತು ಪರಂಪರೆಗಳನ್ನು ಹೊಂದಿರುವ ಜನಸಮುದಾಯಗಳ ನೆಲೆಯಾಗಿದೆ. ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಮಾನತೆ, ಮಾನವೀಯತೆ ಹಾಗೂ ಸೌಹಾರ್ದತೆಯ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಭಾರತ ಹಲವು ರಾಷ್ಟ್ರಗಳಿಗೆ ಮಾದರಿಯಾಗಿದೆ. ಪ್ರತಿಯೊಬ್ಬರೂ ಸಮಾನರು ಎಂಬ ಆಶಯದೊಂದಿಗೆ ಎಲ್ಲರೂ ಸೌಹಾರ್ದತೆಯಿಂದ ಬದುಕುವ ವ್ಯವಸ್ಥೆಯನ್ನು ಸಂವಿಧಾನ ರೂಪಿಸಿದೆ ಎಂದು ತಿಳಿಸಿದರು.

1004474983

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕೇವಲ ಕಾಪಿ-ಪೇಸ್ಟ್ ಮಾಡಿದ ದಾಖಲೆಯಲ್ಲ. ಹಲವು ಮಹತ್ವದ ಅಧ್ಯಯನಗಳು, ಉಲ್ಲೇಖಗಳು ಹಾಗೂ ಜಾಗತಿಕ ಸಂವಿಧಾನಗಳ ಅನುಭವಗಳನ್ನು ಆಧರಿಸಿ ರೂಪಿಸಿರುವ ಸಮಗ್ರ ದಾಖಲೆಯಾಗಿದೆ. ಸರ್ವಕಾಲಿಕ ಮೌಲ್ಯಗಳನ್ನು ಒಳಗೊಂಡಿರುವ ಸಂವಿಧಾನದ ಹಕ್ಕುಗಳು ಮತ್ತು ಆಶಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬುದೇ ಅದರ ಮೂಲ ಉದ್ದೇಶವಾಗಿದೆ ಎಂದರು.

ಸಂವಿಧಾನವು ಕೇವಲ ಮನುಷ್ಯಕೇಂದ್ರಿತ ವ್ಯವಸ್ಥೆಯಲ್ಲ. ಜೀವಸಂಕುಲ ಮತ್ತು ಪಂಚಭೂತಗಳ ಮಹತ್ವವನ್ನೂ ಒಳಗೊಂಡ ವಿಶಾಲವಾದ ಚಿಂತನೆಯಾಗಿದೆ. ಸಂವಿಧಾನದ ಆಶಯಗಳನ್ನು ಕೇವಲ ಆಚರಣೆ ಮತ್ತು ಭಾಷಣಗಳಿಗೆ ಸೀಮಿತಗೊಳಿಸದೆ ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳ ಹಾದಿಯಲ್ಲಿ ಸಾಗಿದಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ದೊರೆಯುತ್ತದೆ ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಮೋಹನ ಎಚ್.ಎಸ್. ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಇಂದಿನ ಕಾಲಘಟ್ಟದಲ್ಲಿ ಸಂವಿಧಾನ ರಚನೆಯ ಹಿಂದಿನ ನೋವು, ಸಾಮಾಜಿಕ ಅಸಮಾನತೆ, ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯ ಕರಾಳ ಇತಿಹಾಸದ ಕುರಿತು ಯುವಜನರಲ್ಲಿ ಅರಿವಿನ ಕೊರತೆ ಇರುವುದು ವಿಷಾದನೀಯ. ಸಂವಿಧಾನದ ಮಹತ್ವ ಹಾಗೂ ಅದರ ಹಿಂದಿರುವ ಹೋರಾಟದ ಇತಿಹಾಸವನ್ನು ಯುವಜನರಿಗೆ ತಿಳಿಸಿಕೊಡುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸುದೀಪ್ ಕುಮಾರ್ ಆರ್. ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಕೇಶವ ಸ್ವಾಗತಿಸಿದರು. ಡಾ. ಮಹಾಲಿಂಗ ಕೆ. ನಿರೂಪಿಸಿದರು. ವಿದ್ಯಾರ್ಥಿಗಳ ಕ್ಷೇಮಪಾಲನಾ ವಿಭಾಗದ ನಿರ್ದೇಶಕ ಪ್ರೊ. ಬಿ. ಶೇಖರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಲಾಟರಿ ಮೂಲಕ 32 ಮಂದಿಯ ಆಯ್ಕೆ ಬೇಡ ; ಎಲ್ಲ ಅರ್ಹರಿಗೂ ನಿವೇಶನ ನೀಡಿ : ಮಂಜುನಾಥ್ ಹೆತ್ತೇನಹಳ್ಳಿ

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶ್ರಯ...

ತುಮಕೂರು | ಕನ್ನಡದ ಬೆಳವಣಿಗೆಗೆ ಜಾತಿ, ಧರ್ಮಗಳ ಗಡಿಗಳಿಲ್ಲ: ಪ್ರೊ. ಎಸ್. ಮಲ್ಲಣ್ಣ

 ಕನ್ನಡ ಭಾಷೆಯ ಬೆಳವಣಿಗೆಗೆ ಜಾತಿ ಮತ್ತು ಧರ್ಮಗಳ ಗಡಿಗಳು ಎಂದಿಗೂ ಅಡ್ಡಿಯಾಗಿಲ್ಲ....

ತುಮಕೂರು | ಕನ್ನಡ ಕೇವಲ ಮಾತನಾಡುವ ಭಾಷೆಯಲ್ಲ, ಆಸ್ವಾದಿಸುವ ಸಂಸ್ಕೃತಿ: ಪ್ರೊ. ಕೃಷ್ಣೇಗೌಡ

ಕನ್ನಡ ಭಾಷೆಯನ್ನು ಕೇವಲ ಮಾತನಾಡುವುದಷ್ಟೇ ಅಲ್ಲ, ಅದರ ಸೊಗಡು, ಸಾಹಿತ್ಯ ಮತ್ತು...

ತಿಪಟೂರು | ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಓದುವ ಸಂಸ್ಕೃತಿ ಬೆಳೆಸಬೇಕು: ಸಿ.ಬಿ. ಶಶಿಧರ್

 ಮಕ್ಕಳಲ್ಲಿ ಮೂಢನಂಬಿಕೆಗಳ ಬದಲಿಗೆ ವೈಚಾರಿಕತೆ, ವೈಜ್ಞಾನಿಕ ಚಿಂತನೆ ಹಾಗೂ ತರ್ಕಬದ್ಧ ಆಲೋಚನೆಗಳನ್ನು...