ತುಮಕೂರು | ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಕೃಷ್ಣೇಗೌಡ

Date:

 ಭಾಷೆ ಎನ್ನುವುದು ಕೇವಲ ಸಂವಹನದ ಸಾಧನವಲ್ಲ. ಸಂಗೀತ, ಭಾವನೆ, ಕೋಪ, ಕಾಮ, ಮದ ಸೇರಿದಂತೆ ಮನುಷ್ಯನ ವಿವಿಧ ಭಾವನೆಗಳನ್ನು ಪದಗಳಲ್ಲಿ ಪೋಣಿಸಿ ಅಭಿವ್ಯಕ್ತಿಸುವ ಅದ್ಭುತ ಮಾಧ್ಯಮ. ಸಪ್ತಸ್ವರಗಳನ್ನು ತುಂಬಿಕೊಂಡು ಅಭಿನಯಿಸುವ, ಬಿರುಗಾಳಿಯ ಅಬ್ಬರವನ್ನೂ ಶಬ್ದಸಹಿತವಾಗಿ ಕಟ್ಟಿಕೊಡುವ ಶಕ್ತಿ ಕನ್ನಡ ಭಾಷೆಗಿದೆ ಎಂದು ಖ್ಯಾತ ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡ ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ.ಜಿ. ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಅ. 28ರ ಬುಧವಾರ ಆಯೋಜಿಸಿದ್ದ ನಾಡೋಜ ಪ್ರೊ. ಕಮಲಾ ಹಂಪನಾ ದತ್ತಿ ಉಪನ್ಯಾಸ ಹಾಗೂ ಕನ್ನಡ ಕಾವ್ಯಭಾಷೆ ಕುರಿತ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕನ್ನಡ ಭಾಷೆಗೆ ನಾದ ಮತ್ತು ಅರ್ಥದ ಸೊಗಸಷ್ಟೇ ಅಲ್ಲ, ಅಭಿನಯಿಸುವ ಸಾಮರ್ಥ್ಯವೂ ಇದೆ. ಬದುಕಿನ ಅನುಭವಗಳನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸಲು ಕನ್ನಡ ಅತ್ಯಂತ ಸಮರ್ಥ ಭಾಷೆಯಾಗಿದೆ. ಆದರೆ, ಭಾಷೆಯ ನಿಜವಾದ ಶಕ್ತಿಯ ಅರಿವು ಮೂಡಬೇಕಾದರೆ ನಿರಂತರವಾಗಿ ಬರೆಯಬೇಕು, ಓದಬೇಕು ಮತ್ತು ಮಾತನಾಡಬೇಕು. ಎಲ್ಲ ಕ್ಷೇತ್ರಗಳಲ್ಲೂ ವಿಕಾಸ ನಡೆಯುವಂತೆ ಕನ್ನಡ ಭಾಷೆಯಲ್ಲೂ ನಿರಂತರ ಬೆಳವಣಿಗೆ ಆಗುತ್ತಿದೆ ಎಂದರು.

ಸುಮಾರು ಎರಡು ಸಾವಿರ ವರ್ಷಗಳ ಗತವೈಭವ, ಕಲೆ, ಸಂಸ್ಕೃತಿ, ಆಚರಣೆ, ವಿಚಾರಧಾರೆಗಳು, ಗೆಲುವು–ಸೋಲು ಸೇರಿದಂತೆ ನಾಡಿನ ಬದುಕಿನ ವಿವಿಧ ಆಯಾಮಗಳನ್ನು ದಾಖಲಿಸಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದೆ. ಕನ್ನಡದ ಸಾಹಿತ್ಯಿಕ ಶ್ರೀಮಂತಿಕೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.

ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯ ಮಾತನಾಡಿ, ಕಮಲಾ ಹಂಪನಾ ಅವರು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಜಿ.ಎಸ್. ಶಿವರುದ್ರಪ್ಪ ಅವರು ಕರ್ನಾಟಕದ ಮೂರನೇ ರಾಷ್ಟ್ರಕವಿಯಾಗುವಲ್ಲಿ ಕಮಲಾ ಹಂಪನಾ ಅವರ ಪಾತ್ರ ಮಹತ್ವದ್ದಾಗಿತ್ತು. ಕರ್ನಾಟಕದ ಹಲವು ಆಯ್ಕೆ ಸಮಿತಿಗಳು ಅವರ ಸಲಹೆಗಳನ್ನು ಪಡೆಯುತ್ತಿದ್ದವು. ಅವರ ಅಭಿಪ್ರಾಯಗಳಿಗೆ ಸರ್ಕಾರ ಮನ್ನಣೆ ನೀಡುತ್ತಿದ್ದುದೇ ಅವರ ಸಾಹಿತ್ಯಿಕ ಜ್ಞಾನ, ದೂರದೃಷ್ಟಿ ಮತ್ತು ಪ್ರಭಾವಕ್ಕೆ ಸಾಕ್ಷಿ ಎಂದು ತಮ್ಮ ಪತ್ನಿ ಕಮಲಾ ಹಂಪನಾ ಅವರೊಂದಿಗಿನ ಒಡನಾಟ ಹಾಗೂ ಅವರ ಸಾಧನೆಗಳನ್ನು ಸ್ಮರಿಸಿದರು.

ಪರೀಕ್ಷಾಂಗ ಕುಲಸಚಿವ ಪ್ರೊ. ಮೋಹನ್ ಎಚ್.ಎಸ್., ಕಲಾ ನಿಕಾಯದ ಡೀನ್ ಪ್ರೊ. ಪರಶುರಾಮ್ ಕೆ.ಜಿ., ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷೆ ಪ್ರೊ. ಅಣ್ಣಮ್ಮ ಹಾಗೂ ಕಾರ್ಯಕ್ರಮದ ಸಂಯೋಜಕಿ ಪ್ರೊ. ಗೀತಾ ವಸಂತ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ...

ಮಧುಗಿರಿ | ಮಾನವೀಯ ಮೌಲ್ಯಗಳ ಪ್ರತಿಪಾದಕ ವಾಲ್ಮೀಕಿ ಸದಾ ಸ್ಮರಣೀಯರು: ಪ್ರೊ. ಕೆ.ಎಸ್. ಕುಮಾರ್

 ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣವನ್ನು ನೀಡಿದ ಮಹರ್ಷಿ ವಾಲ್ಮೀಕಿ ಮಾನವೀಯ ಮೌಲ್ಯಗಳನ್ನು...

ಸಿರಾ | ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮಾಜದಿಂದ ಸಿಎಂಗೆ ಮನವಿ

ಕಳೆದ 30 ವರ್ಷಗಳಿಂದ ವಾಲ್ಮೀಕಿ ಸಮುದಾಯದ ಪ್ರಮುಖ ಬೇಡಿಕೆಯಾಗಿರುವ ಮೀಸಲಾತಿ ಹೆಚ್ಚಳಕ್ಕೆ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...