ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

Date:

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಬಿ.ಜಿ.ಎಸ್. ಪ್ರಥಮ ದರ್ಜೆ ಕಾಲೇಜು (ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಮತ್ತು ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಸಂಯುಕ್ತವಾಗಿ ಅಕ್ಟೋಬರ್ 5ರಿಂದ 7ರವರೆಗೆ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ ಆಯೋಜಿಸಿವೆ.

- Advertisement -

ಪ್ರತಿ ವರ್ಷದ ಆರಂಭದಲ್ಲಿ ಪತ್ರಿಕೆ, ರೇಡಿಯೋ, ಟೆಲಿವಿಷನ್, ಸಿನಿಮಾ, ಜಾಹೀರಾತು ಹಾಗೂ ಡಿಜಿಟಲ್ ಮಾಧ್ಯಮ ತಂತ್ರಜ್ಞಾನ ಕುರಿತಂತೆ ಕ್ಷೇತ್ರದ ಪರಿಣಿತರನ್ನು ಆಹ್ವಾನಿಸಿ ಪ್ರಾಯೋಗಿಕ ತರಗತಿ ಮತ್ತು ಸಂವಾದ ನಡೆಸಲಾಗುತ್ತಿದ್ದು, ಈ ಕಾರ್ಯಾಗಾರವೂ ಅದೇ ಸಾಲಿಗೆ ಸೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಅಕ್ಟೋಬರ್ 5ರ ಬೆಳಿಗ್ಗೆ 10.30ಕ್ಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಂಗಳೂರು ಆಕಾಶವಾಣಿಯ ಹಿರಿಯ ಉದ್ಘೋಷಕಿ ಶ್ರೀಮತಿ ಬಿ.ಕೆ. ಸುಮತಿ ಅವರು ಉದ್ಘಾಟಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಆಡಳಿತಾಧಿಕಾರಿ ಡಾ. ಬಾಲಗುರುಮೂರ್ತಿ, ಮಾಧ್ಯಮ ಅಧ್ಯಯನ ಕೇಂದ್ರದ ಸಹಾಯಕ ಆಡಳಿತಾಧಿಕಾರಿ ಖಲಂದರ್ ಪಾಷ ಕೆ.ಎನ್. ಹಾಗೂ ಬಿ.ಜಿ.ಎಸ್. ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಶ್ವೇತಾರಾಣಿ ಹೆಚ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಧ್ಯಮ ಅಧ್ಯಯನ ಕೇಂದ್ರದ ಡಾ. ಬಿ.ಟಿ. ಮುದ್ದೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ರೇಡಿಯೋ ಬರವಣಿಗೆ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಮತ್ತು ಛಾಯಾಗ್ರಹಣ ಸೇರಿದಂತೆ ಒಟ್ಟು ಐದು ಗೋಷ್ಠಿಗಳು ನಡೆಯಲಿವೆ. ಮಾಧ್ಯಮ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ಜ್ಯೋತಿ ಸಿ., ಶ್ರೀಮತಿ ಶ್ವೇತಾ ಎಂ.ಪಿ., ಶ್ರೀಮತಿ ಕೋಕಿಲ ಎಂ.ಎಸ್., ಚಲನಚಿತ್ರ ನಟ-ನಿರ್ದೇಶಕ ಹಾಗೂ ಉಪನ್ಯಾಸಕ ನವೀನ್ ಎನ್.ಜಿ. ಮತ್ತು ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕಿ ಶ್ರೀಮತಿ ಮಣಿ ಎಚ್.ಜಿ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

Advertisements

ಅಕ್ಟೋಬರ್ 7ರ ಮಧ್ಯಾಹ್ನ 2.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಲೇಖಕಿ ಶ್ರೀಮತಿ ಕಮಲಾ ನರಸಿಂಹ ಅವರ ನಿರ್ದೇಶನದ ‘ಶಾರದಾ’ ಕಿರುಚಿತ್ರ ಬಿಡುಗಡೆಯಾಗಲಿದೆ. ಬಿ.ಜಿ.ಎಸ್. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರೋಹಿತ್ ಎನ್.ಆರ್. ಅವರು ಪ್ರಮಾಣಪತ್ರ ವಿತರಿಸಲಿದ್ದು, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತಾ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ಪದವಿ ವಿದ್ಯಾರ್ಥಿಗಳು, ಬಿ.ಜಿ.ಎಸ್. ಕಾಲೇಜಿನ ಪದವಿ ವಿದ್ಯಾರ್ಥಿಗಳು, ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ರೇಡಿಯೋ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಪ್ರಮಾಣಪತ್ರ ನೀಡಲಾಗುವುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ತಿಪಟೂರು | ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಎತ್ತಿನಗಾಡಿ, ಟ್ರ್ಯಾಕ್ಟರ್ ಜಾಥಾ

 ಬರಪೀಡಿತ ತಿಪಟೂರು ತಾಲ್ಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು...

ಮಧುಗಿರಿ | ವೃತ್ತಿ ಗುರಿ ಸ್ಪಷ್ಟವಾಗಿದ್ದರೆ ಯಶಸ್ಸು ಖಚಿತ: ಪ್ರೊ.ರಾಮು ಜೆ

ವಿದ್ಯಾರ್ಥಿಗಳು ಪದವಿ ಶಿಕ್ಷಣದ ಅವಧಿಯಲ್ಲಿಯೇ ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಮತ್ತು...