ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

Date:

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಜೀವನದಲ್ಲಿ ಕೌಟುಂಬಿಕ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ. ಕೃಷ್ಣ ಹೇಳಿದರು.

- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ಬೂರಿನಲ್ಲಿ ತುಮಕೂರು ಸಂಶೋಧಕರ ತಂಡ, ಇತಿಹಾಸ ಸಂಕಲನ ಸಮಿತಿ ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಐತಿಹಾಸಿಕ ಪರಂಪರೆ ಉಳಿಸಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕುಣಿಗಲ್ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯಲ್ಲಿ ಎಎಸ್‌ಐ ಹಾಗೂ ಯುನೆಸ್ಕೋ ಪಾತ್ರವನ್ನು ವಿವರಿಸಿದರು. ಕರ್ನಾಟಕದ ವಿಶ್ವ ಪಾರಂಪರಿಕ ತಾಣಗಳು, ಶಾಸನಗಳು ಹಾಗೂ ಮಸ್ಕಿ ಶಾಸನ, ಹೊನ್ನೇನಹಳ್ಳಿ ಕೃಷ್ಣದೇವರಾಯನ ಮರಣ ಶಾಸನ ಸೇರಿದಂತೆ ವಿವಿಧ ಐತಿಹಾಸಿಕ ದಾಖಲೆಗಳ ಮಹತ್ವವನ್ನು ತಿಳಿಸಿದರು. ಹೆಬ್ಬೂರಿನ ಸ್ಥಳೀಯ ಚರಿತ್ರೆ, ಸ್ಮಾರಕಗಳು ಹಾಗೂ ಜನಪದ ಸಂಸ್ಕೃತಿಯ ಕುರಿತು ಜನರಲ್ಲಿ ಐತಿಹಾಸಿಕ ಜಾಗೃತಿ ಮೂಡಿಸಬೇಕು ಎಂದರು.

ಡಾ. ಶ್ರೀನಿವಾಸ ಎ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿ, ನೈಸರ್ಗಿಕ, ಕೃಷಿಕ, ಆಹಾರ ಹಾಗೂ ಸಾಮಾಜಿಕ ಪರಂಪರೆಗಳೊಂದಿಗೆ ಅವುಗಳಲ್ಲಿರುವ ಮಾನವೀಯ ಮತ್ತು ಕೌಟುಂಬಿಕ ಮೌಲ್ಯಗಳ ಮಹತ್ವವನ್ನು ವಿವರಿಸಿದರು.

ವೀರಗಲ್ಲು, ದೇವಾಲಯ ಹಾಗೂ ಸತೀಕಲ್ಲುಗಳಂತಹ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು ಎಂದು ಪ್ರಾಂಶುಪಾಲ ಡಿ. ಕೃಷ್ಣ ಹೇಳಿದರು.

ಕಾರ್ಯಕ್ರಮವನ್ನು ಕುಮಾರ್ ಜಿ.ಸಿ. ಆಯೋಜಿಸಿದ್ದರು. ಡಾ. ಮೋಹನ್ ಕುಮಾರ್, ಡಾ. ರವೀಶ್, ವರದರಾಜು, ಡಾ. ಶಿಲ್ಪಶ್ರೀ ಹಾಗೂ ಡಾ. ಓಹಿಲೇಶ್ವರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ...

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...

ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ...