ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

Date:

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ ತುಮಕೂರು ದಸರಾ-2026 ಅನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ಈ ಬಾರಿ ಅಮಾನಿಕೆರೆಯಲ್ಲಿ ಸುಮಾರು 100 ಅಡಿ ಎತ್ತರಕ್ಕೆ ಚಿಮ್ಮುವ ಕಾರಂಜಿ, ಕೃತಕ ಬುದ್ಧಿಮತ್ತೆ (ಎಐ) ಹಾಗೂ ಆಧುನಿಕ ತಂತ್ರಜ್ಞಾನಗಳ ಪ್ರದರ್ಶನ, ಆಧುನಿಕ ಕಾರುಗಳ ಶೋ ಸೇರಿದಂತೆ ಹಲವು ಹೊಸ ಆಕರ್ಷಣೆಗಳನ್ನು ಪರಿಚಯಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

- Advertisement -

ತುಮಕೂರು  ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ವಿನ್ಯಾಸಗೊಳಿಸಲಾಗಿದ್ದ ದಸರಾ ಲಾಂಛನವನ್ನೇ ಈ ಬಾರಿಯೂ ಬಳಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿ ಹಾಗೂ ಎಲ್ಲರನ್ನು ಒಳಗೊಂಡಂತೆ ಆಚರಿಸಲಾಗುವುದು. ದಸರಾ ಪ್ರಯುಕ್ತ ಆಯೋಜಿಸಲಾಗುವ ವಸ್ತುಪ್ರದರ್ಶನದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರದರ್ಶನಗಳಿಗೆ ಅವಕಾಶ ಕಲ್ಪಿಸಲಾಗುವುದು. 2,000ಕ್ಕೂ ಹೆಚ್ಚು ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದರು.

ಮಹಾನವಮಿ ಹಬ್ಬವು ನಮ್ಮ ಜೀವನಕ್ಕೆ ಅನೇಕ ಪಾಠಗಳನ್ನು ಕಲಿಸುತ್ತದೆ. ತುಮಕೂರು ದಸರಾ ಉತ್ಸವವು ಜಿಲ್ಲೆಯ ಸಂಸ್ಕೃತಿ, ನಾಗರಿಕತೆ, ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತದೆ. ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ, ತುಮಕೂರಿಗೆ ಕೀರ್ತಿ ತರುವ ರೀತಿಯಲ್ಲಿ ದಸರಾ ಆಚರಿಸೋಣ ಎಂದು ಕರೆ ನೀಡಿದರು.

‘ತುಮಕೂರು ದಸರಾ ಉತ್ಸವ-2026’ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿದೆ. ಈ ವರ್ಷದ ದಸರಾ ಉತ್ಸವದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಗಿದ್ದು, ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಗಿದೆ. ಬಿಡುವು ಮಾಡಿಕೊಂಡು ಆಗಮಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಎರಡು ವರ್ಷಗಳ ಹಿಂದೆ ಆರಂಭವಾದ ‘ತುಮಕೂರು ದಸರಾ ಉತ್ಸವ’ ಪರಿಕಲ್ಪನೆಯು ಮೈಸೂರು ದಸರಾ ಮಾದರಿಯಲ್ಲಿ ಜನಾಕರ್ಷಣೆ ಪಡೆಯುತ್ತಿದೆ. ಜಾತಿ-ಧರ್ಮದ ಭೇದವಿಲ್ಲದೆ ಎಲ್ಲರನ್ನು ಒಳಗೊಂಡಂತೆ ದಸರಾ ಆಚರಿಸಲಾಗುತ್ತಿದೆ. ಕಳೆದ ವರ್ಷದ ದಸರಾ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿತ್ತು ಎಂದು ಡಾ. ಪರಮೇಶ್ವರ ಹೇಳಿದರು.

ಕಳೆದ ವರ್ಷ ನಿರ್ಮಿಸಲಾಗಿದ್ದ ದೇವಸ್ಥಾನದ ಪ್ರತಿಕೃತಿಯು ಮೂಲ ದೇವಸ್ಥಾನದಂತೆಯೇ ಗೋಚರಿಸಿತ್ತು. ಹತ್ತು ದಿನಗಳ ಕಾಲ ನಡೆದ ನವದುರ್ಗೆಯರ ಪೂಜೆ, ಹೋಮ-ಹವನ, ಕವಿಗೋಷ್ಠಿ, ಯುವ ದಸರಾ, ಮಹಿಳಾ ದಸರಾ ಹಾಗೂ ವೈಜ್ಞಾನಿಕ ವಸ್ತುಪ್ರದರ್ಶನಗಳು ಉತ್ಸವದ ಪ್ರಮುಖ ಆಕರ್ಷಣೆಗಳಾಗಿದ್ದವು ಎಂದರು.

ಇಸ್ರೋ ಸಂಸ್ಥೆಯವರು ಏರ್ಪಡಿಸಿದ್ದ ರಾಕೆಟ್ ತಯಾರಿಕೆ ಕುರಿತ ವೈಜ್ಞಾನಿಕ ಹಾಗೂ ತಾಂತ್ರಿಕ ವಸ್ತುಪ್ರದರ್ಶನವು ಶಾಲಾ ಮಕ್ಕಳ ಕಲಿಕೆಗೆ ಅನುಕೂಲವಾಯಿತು. ‘ಪ್ರಚಂಡ’ ಯುದ್ಧ ಹೆಲಿಕಾಪ್ಟರ್ ಅನ್ನು ಪ್ರದರ್ಶನಕ್ಕಿಡಲಾಗಿತ್ತು. ಹೆಲಿರೈಡ್‌ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅಳ್ವಾಸ್‌ನ 150 ಕಲಾವಿದರ ತಂಡವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿತು.

ಎಲ್ಲರನ್ನು ಒಳಗೊಂಡಂತೆ ದಸರಾ ಆಚರಿಸುವ ಪ್ರಯತ್ನ ಮಾಡಲಾಗಿದ್ದು, ಮೈಸೂರಿನ ಮಾದರಿಯಲ್ಲಿ ತುಮಕೂರಿನಲ್ಲಿಯೂ ದಸರಾ ಆಚರಿಸಲಾಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುದಾನ ಬಿಡುಗಡೆ ಮಾಡುವ ಮೂಲಕ ಸಹಕರಿಸಿದ್ದರು ಎಂದು ಅವರು ತಿಳಿಸಿದರು.

ದಸರಾ ಉತ್ಸವವು ಕೇವಲ ಒಂದು ಕಾರ್ಯಕ್ರಮವಾಗಿರದೆ, ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಪರಿಚಯಿಸುವ ‘ಊರ ಹಬ್ಬ’ವಾಗಬೇಕು. ಮಕ್ಕಳು, ಯುವಕರು ಹಾಗೂ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಯುವ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸಲಾಗುವುದು. ನೃತ್ಯ ತಂಡಗಳು ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದರು.

ಉತ್ಸವದಲ್ಲಿ ಸಾರ್ವಜನಿಕರ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಲಾಗುವುದು. ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದ್ದು, ಜಾತಿ-ಧರ್ಮದ ಭೇದವಿಲ್ಲದೆ ಎಲ್ಲರೂ ಒಗ್ಗೂಡಿ ದಸರಾ ಆಚರಿಸಬೇಕು ಎಂದು ಹೇಳಿದರು.

ತುಮಕೂರಿನ ಅಮಾನಿಕೆರೆಯನ್ನು ಅಭಿವೃದ್ಧಿಪಡಿಸಿ ಆಕರ್ಷಕವಾಗಿ ರೂಪಿಸುವ ಮೂಲಕ ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿ ಮಾಡಲಾಗುವುದು. ಈ ಬಾರಿ ಅಮಾನಿಕೆರೆಯಲ್ಲಿ ನಿರ್ಮಿಸಲಾಗುವ ಸುಮಾರು 100 ಅಡಿ ಎತ್ತರಕ್ಕೆ ಚಿಮ್ಮುವ ಕಾರಂಜಿಯು ವಿಶೇಷ ಆಕರ್ಷಣೆಯಾಗಲಿದೆ. ಇದರಿಂದ ಅಮಾನಿಕೆರೆ ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಸೆಳೆಯುವ ಪ್ರಮುಖ ಕೇಂದ್ರವಾಗಲಿದೆ ಎಂದರು.

ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತವನ್ನು ‘ತುಮಕೂರು ಸೆಂಟರ್ ಆಫ್ ಅಟ್ರಾಕ್ಷನ್’ ಆಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಇದಕ್ಕೆ ಅಗತ್ಯವಿರುವ ಕೆಲವು ವಸ್ತುಗಳನ್ನು ಚೀನಾದಿಂದ ತರಿಸಲಾಗುತ್ತಿದೆ. ತುಮಕೂರನ್ನು ವಿಶೇಷವಾಗಿ ಗುರುತಿಸುವಂತಹ ಹಲವು ಹೊಸ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಕ್ಕಳು ಹಾಗೂ ವಾಹನಗಳ ಬಗ್ಗೆ ಆಸಕ್ತಿ ಹೊಂದಿರುವವರನ್ನು ಆಕರ್ಷಿಸುವ ಉದ್ದೇಶದಿಂದ ಈ ಬಾರಿ ಆಧುನಿಕ ಕಾರುಗಳ ಪ್ರದರ್ಶನವನ್ನೂ ಆಯೋಜಿಸಲಾಗುವುದು. ಇಂತಹ ಹೊಸ ಪ್ರಯತ್ನಗಳ ಮೂಲಕ ದಸರಾ ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡುವುದರೊಂದಿಗೆ ಜಿಲ್ಲೆಯ ಸಂಸ್ಕೃತಿ, ನಾಗರಿಕತೆ ಹಾಗೂ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಲಾಗುವುದು ಎಂದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ತುಮಕೂರು ದಸರಾ ಉತ್ಸವ ಯಶಸ್ವಿಯಾಗಿ ನಡೆಯಲು ಡಾ. ಜಿ. ಪರಮೇಶ್ವರ ಅವರ ಪ್ರಯತ್ನಗಳು ಪ್ರಮುಖ ಕಾರಣವಾಗಿವೆ. ನಗರದಲ್ಲಿ ಉದ್ದೇಶಿತ ಅಮಾನಿಕೆರೆ ಕಾರಂಜಿ ಹಾಗೂ ‘ತುಮಕೂರು ಸ್ಕ್ವೇರ್’ ನಿರ್ಮಾಣ ಕಾರ್ಯವನ್ನು ಸ್ವಾಗತಿಸುತ್ತೇನೆ. ಕಳೆದ ವರ್ಷಗಳಂತೆ ಈ ಬಾರಿಯೂ ದಸರಾ ಉತ್ಸವ-2026ರ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಶುಭಾ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಂ ಜಂ ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಾರ್ಯಕಲಾಪ ಬಹಿಷ್ಕಾರ

 ಗೌರಿಬಿದನೂರು ಪಟ್ಟಣದಲ್ಲಿ ಹಿರಿಯ ವಕೀಲ ಸಣ್ಣಕ್ಕಿ ಅವರ ಮೇಲೆ ನಡೆದ ಚೂರಿ...

ಮಧುಗಿರಿ | ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು; ಕೃಷಿ ಹೊಂಡದಲ್ಲಿ ದುರಂತ

ಜಮೀನಿನ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ...

ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ...

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...