ತುಮಕೂರು | ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ : ಡಿಸಿಎಂ ಡಾ.ಜಿ. ಪರಮೇಶ್ವರ

Date:

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. 

- Advertisement -

ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದೇಶದಲ್ಲಿ 1200 ವಿಶ್ವವಿದ್ಯಾಲಯಗಳು ಇದ್ದು, 43,000 ಕಾಲೇಜುಗಳು ಹಾಗೂ 43 ದಶಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ದೇಶದ ಬಹುದೊಡ್ಡ ಪರಿವರ್ತನೆ. ಆದರೆ ಜಾಗತಿಕವಾಗಿ ಉದ್ಯಮ ಮತ್ತು ಶಿಕ್ಷಣದ ನಡುವೆ ಅಂತರವಿದ್ದು, ತಾವು ಕೊಡುವ ಶಿಕ್ಷಣ ಉದ್ಯಮಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಇದಕ್ಕಾಗಿ ಬೋಧಕರ ಕೊರತೆ ನೀಗಿಸಬೇಕು ಹಾಗೂ ಪ್ರಾದೇಶಿಕವಾಗಿ ಸಮಾನಾಂತರ ಬೋಧನೆಗೆ ವ್ಯವಸ್ಥೆ ಕಲ್ಪಿಸಬೇಕು. ಈ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎಂದು ತಿಳಿಸಿದರು.

ಭಾರತದ ಇತಿಹಾಸದಲ್ಲಿ ಮೊದಲಿನಿಂದಲೂ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದ ಉಪಮುಖ್ಯಮಂತ್ರಿ ಡಾ: ಪರಮೇಶ್ವರ ಅವರು, ವಿಶ್ವದ ವಿವಿಧೆಡೆಗಳಿಂದ ತಕ್ಷಶಿಲಾ ಹಾಗೂ ನಳಂದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಬರುತ್ತಿದ್ದರು. ಅಂದಿನಿಂದಲೂ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ನೀಡುತ್ತಾ ಬಂದಿರುವುದು ಇತಿಹಾಸದ ಮೂಲಕ ತಿಳಿಯುತ್ತದೆ. ನಂತರದ ದಿನಗಳಲ್ಲಿ ಬ್ರಿಟೀಷರು ಕಲ್ಕತ್ತ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರು. ನಂತರ ಮದ್ರಾಸ್, ಮೈಸೂರು ವಿಶ್ವವಿದ್ಯಾಲಯಗಳು ಆರಂಭವಾದವು. ಸ್ವಾತಂತ್ರ್ಯ ನಂತರ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಪಂಚ ವಾರ್ಷಿಕ ಯೋಜನೆ ಮೂಲಕ ಆಹಾರ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಇತ್ಯಾದಿ ವಿಷಯಗಳಿಗೆ ಆದ್ಯತೆ ನೀಡಿದ್ದರು. ಅದರ ಪರಿಣಾಮವಾಗಿ ಇಂದು 140 ಕೋಟಿ ಭಾರತೀಯರಲ್ಲಿ ಶೇ.80ರಷ್ಟು ಜನರು ಅಕ್ಷರಸ್ಥರಾಗಿದ್ದಾರೆ ಎಂದರೆ ತಪ್ಪಾಗಲಾರದು ಎಂದರು.

ಜಗತ್ತಿನ ಯಾವುದೇ ಮೂಲೆಗೆ ಹೋದರೂ ಇಂಜಿನಿಯರ್, ಡಾಕ್ಟರ್‌ಗಳು, ಪ್ರೊಪೆಸರ್‌ಗಳು ಭಾರತೀಯರಾಗಿರುತ್ತಾರೆ. ಅಲ್ಲದೆ, ವಿಶ್ವದ 500ಕ್ಕೂ ಹೆಚ್ಚು ಅತಿ ದೊಡ್ಡ ಕಂಪನಿಗಳಲ್ಲಿ ಭಾರತೀಯರದೇ ಪಾರಮ್ಯ. ಇದು ಭಾರತದ ಶೈಕ್ಷಣಿಕ ವ್ಯವಸ್ಥೆಯನ್ನು ಸೂಚಿಸುತ್ತದೆ ಎಂದು ಅವರು ತಿಳಿಸಿದರು. 

ಪ್ರಸಕ್ತ ದಿನಗಳಲ್ಲಿ ಬೆಂಗಳೂರು, ಮೈಸೂರು ನಂತರ ತುಮಕೂರಿನಲ್ಲಿ ಅತಿ ಹೆಚ್ಚು ವಿದ್ಯಾ ಸಂಸ್ಥೆಗಳಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳು ಓದುತ್ತಿರುವ ಸಾಲಿಗೆ ತುಮಕೂರು ಜಿಲ್ಲೆ ನಿಲ್ಲಲಿದೆ ಎಂದು ಅವರು ಹೇಳಿದರು.

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ಭಾರತ ಸರ್ಕಾರ ಹೊಸ ಶೈಕ್ಷಣಿಕ ನೀತಿಯ ಮೂಲಕ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಹೇಳಿದರು. 

ಪಿ.ಎಂ. ಉಷಾ ಯೋಜನೆಯಡಿ ವಿಶೇಷ ಅನುದಾನ ಪಡೆಯುತ್ತಿರುವ 4 ವಿಶ್ವವಿದ್ಯಾನಿಲಯಗಳಲ್ಲಿ ತುಮಕೂರು ವಿಶ್ವವಿದ್ಯಾಲಯವೂ ಒಂದು ಎಂದು ಹೇಳಿದ ಅವರು, ತುಮಕೂರು ವಿಶ್ವವಿದ್ಯಾಲಯದ ಮೂಲ ಸೌಲಭ್ಯಾಭಿವೃದ್ಧಿಗಾಗಿ ಈ ಯೋಜನೆಯಡಿ 20 ಕೋಟಿ ರೂ.ಗಳ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಮುಂದಿನ ದಿನದಲ್ಲಿ ಇನ್ನೂ 40 ಕೋಟಿ ರೂ.ಗಳ ಅನುದಾನ ವಿಶ್ವವಿದ್ಯಾಲಯಕ್ಕೆ ಬರಲಿದೆ ಎಂದು ತಿಳಿಸಿದರು.

ದೇಶದ ಅಭಿವೃದ್ಧಿ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅರಿತಿರುವ ಭಾರತ ಸರ್ಕಾರ ಶಿಕ್ಷಣಕ್ಕೆ ಉತ್ತೇಜನ ನೀಡಲು ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು. 

ಶಾಸಕ ಬಿ.ಸುರೇಶ್ ಗೌಡ ಅಧ್ಯಕ್ಷತೆವಹಿಸಿದ್ದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಿ.ಟಿ. ಶ್ರೀನಿವಾಸ್, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್ ಸಿಂಡಿಕೇಟ್ ಮತ್ತು ಶೈಕ್ಷಣಿಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...