ತುಮಕೂರು | ಆ.28ರಂದು 30 ಸಾವಿರಕ್ಕೂ ಅಧಿಕ ಎಸ್‌ಸಿ,ಎಸ್‌ಟಿ ನೌಕರರ ಐಕ್ಯತಾ ಸಮಾವೇಶ

Date:

 ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಆ.28ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8ರ ಬಳಿಯ ಶೃಂಗಾರ ಪ್ಯಾಲೇಸ್‌ನಲ್ಲಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಕೆ.ಸಿ. ನರಸಿಂಹಮೂರ್ತಿ ತಿಳಿಸಿದರು.

- Advertisement -

ಸಮಾವೇಶದಲ್ಲಿ ಸಂವಿಧಾನದ ಆಶಯಗಳು ಹಾಗೂ ಸವಲತ್ತುಗಳು ಸಮುದಾಯದ ಎಲ್ಲ ನೌಕರರಿಗೆ ತಲುಪಿಸುವ ಕುರಿತು ಚರ್ಚೆ ನಡೆಯಲಿದ್ದು, 15 ಅಂಶಗಳ ಬೇಡಿಕೆಗಳ ಮನವಿ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾಜ್ಯಾದ್ಯಂತ 30 ಸಾವಿರಕ್ಕೂ ಅಧಿಕ ಎಸ್‌ಸಿ/ಎಸ್‌ಟಿ ನೌಕರರು, ಅಧಿಕಾರಿಗಳು ಹಾಗೂ ಹಿತೈಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ತುಮಕೂರು ಜಿಲ್ಲೆಯಿಂದ ಸುಮಾರು 1 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮಂಜೂರಾಗಿರುವ 7.75 ಲಕ್ಷ ಸರ್ಕಾರಿ ಹುದ್ದೆಗಳ ಪೈಕಿ ಸುಮಾರು 2,84,724 ಹುದ್ದೆಗಳು ಖಾಲಿಯಿದ್ದು, ಸುಮಾರು 24 ಸಾವಿರ ಬ್ಯಾಕ್‌ಲಾಗ್ ಹುದ್ದೆಗಳು ಭರ್ತಿಯಾಗಿಲ್ಲ. ಮೀಸಲಾತಿ, ಬಡ್ತಿ ಹಾಗೂ ಜೇಷ್ಠತೆಯಲ್ಲಿ ಆಗುತ್ತಿರುವ ತಾರತಮ್ಯ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.

ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ಭಾಷಣ ಮಾಡಲಿದ್ದು, ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಸೇರಿದಂತೆ ಶಾಸಕರು, ಮಠಾಧೀಶರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ.

‘ಸಂವಿಧಾನದ ಆಶಯಗಳು, ಎಸ್‌ಸಿ/ಎಸ್‌ಟಿ ನೌಕರರು ಮತ್ತು ಅಧಿಕಾರಿಗಳ ಜವಾಬ್ದಾರಿ’ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಮೀಸಲಾತಿ ಹಾಗೂ ಸಂವಿಧಾನಿಕ ಹಕ್ಕುಗಳ ಕುರಿತು ಹರಡುತ್ತಿರುವ ಅಪಪ್ರಚಾರ ಮತ್ತು ಗೊಂದಲಗಳನ್ನು ನಿವಾರಿಸಿ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಸಮಾವೇಶದ ಉದ್ದೇಶವಾಗಿದೆ ಎಂದು ನರಸಿಂಹಮೂರ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಬಿ.ಆರ್. ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್. ನಾಗರಾಜು, ಖಜಾಂಚಿ ಹೆಚ್.ಎನ್. ಸುರೇಶ್, ಉಪಾಧ್ಯಕ್ಷ ಡಾ. ಹೆಚ್.ಎನ್. ಚಂದ್ರಕುಮಾರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...