ತುಮಕೂರು | ವಿಬಿ-ಜಿ-ರಾಮ್ ಜಿ ಯೋಜನೆ : ಹಿಪ್ಪುನೇರಳೆ ನಾಟಿಗೆ ನೋಂದಾಯಿಸಲು ಕರೆ

Date:

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಸರ್ಕಾರದ ವಿಕಸಿತ ಭಾರತ್–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಗ್ರಾಮೀಣ (ವಿಬಿ-ಜಿ-ರಾಮ್ ಜಿ) ಯೋಜನೆಯಡಿ ರೇಷ್ಮೆ ಬೆಳೆಗಾರರಿಗೆ ಹಿಪ್ಪುನೇರಳೆ ನಾಟಿ ಸೇರಿದಂತೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

- Advertisement -

ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದ್ದು, 2026-27ನೇ ಸಾಲಿನಲ್ಲಿ ಹಿಪ್ಪುನೇರಳೆ ನಾಟಿ ಮಾಡಲು ಉದ್ದೇಶಿಸಿರುವ ರೈತರು ಕೂಡಲೇ ತಮ್ಮ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೇಷ್ಮೆ ಉಪನಿರ್ದೇಶಕ ಟಿ. ಲಕ್ಷ್ಮೀನರಸಯ್ಯ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ರೈತರು, ಬಿಪಿಎಲ್ ಕುಟುಂಬಗಳು ಹಾಗೂ ಮಹಿಳಾ ಮುಖ್ಯಸ್ಥ ಕುಟುಂಬಗಳು ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ರೈತರು ತಮ್ಮ ಜಮೀನಿನ ಪಹಣಿ, ಆಧಾರ್ ಚೀಟಿ, ಉದ್ಯೋಗ ಚೀಟಿ (ವಿಬಿ-ಜಿ-ರಾಮ್ ಜಿ), ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್‌ನ ಜೆರಾಕ್ಸ್ ಪ್ರತಿಗಳೊಂದಿಗೆ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು.

ಇತ್ತೀಚಿನ ದಿನಗಳಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದ್ದು, ಕಳೆದ ಸಾಲಿನಲ್ಲಿ ರೇಷ್ಮೆ ಗೂಡಿನ ಸರಾಸರಿ ದರ ಪ್ರತಿ ಕೆ.ಜಿ.ಗೆ ₹120ರಿಂದ ₹130ರಷ್ಟಿತ್ತು. ಕಡಿಮೆ ನೀರು, ಕಡಿಮೆ ಬಂಡವಾಳದಲ್ಲಿ ಕೈಗೊಳ್ಳಬಹುದಾದ ರೇಷ್ಮೆ ಕೃಷಿಯಲ್ಲಿ ವರ್ಷಕ್ಕೆ 5ರಿಂದ 6 ಬೆಳೆ ಪಡೆಯಲು ಸಾಧ್ಯವಿದ್ದು, ರೈತರಿಗೆ ನಿರಂತರ ಉದ್ಯೋಗ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಲಾಭದಾಯಕ ಕೃಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ರೇಷ್ಮೆ ಗೂಡುಗಳ ಮಾರಾಟಕ್ಕೆ ಸರ್ಕಾರ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದೆ. ತುಮಕೂರು ಜಿಲ್ಲೆಯ ಮಣ್ಣು ಮತ್ತು ಹವಾಮಾನ ರೇಷ್ಮೆ ಕೃಷಿಗೆ ಪೂರಕವಾಗಿದ್ದು, ಜಿಲ್ಲೆಯ ದ್ವಿತಳಿ ರೇಷ್ಮೆ ಗೂಡುಗಳು ರಾಮನಗರ ಮಾರುಕಟ್ಟೆಯಲ್ಲಿ ಉತ್ತಮ ಧಾರಣೆಯಲ್ಲಿ ಮಾರಾಟವಾಗುತ್ತಿವೆ.

ರೇಷ್ಮೆ ಕೃಷಿಯಿಂದ ವರ್ಷವಿಡೀ ಉದ್ಯೋಗ ದೊರೆಯುವುದರಿಂದ ನಿರುದ್ಯೋಗಿ ಯುವಕರು ಸಹ ಈ ಕೃಷಿಯನ್ನು ಕೈಗೊಳ್ಳುವ ಮೂಲಕ ಸ್ವಯಂ ಉದ್ಯೋಗದ ಜೊತೆಗೆ ಉತ್ತಮ ಆದಾಯ ಗಳಿಸಬಹುದು ಎಂದು ಅವರು ಹೇಳಿದ್ದಾರೆ

ವಿಬಿ-ಜಿ-ರಾಮ್ ಜಿ ಯೋಜನೆಯಡಿ ಕೆಳಕಂಡ ಹಿಪ್ಪುನೇರಳೆ ನಾಟಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ:

1. ಒಂದು ಎಕರೆ ಹೊಸ ಹಿಪ್ಪುನೇರಳೆ ನಾಟಿ

(ಜೋಡಿ ಸಾಲು ಪದ್ಧತಿ 3×2 + 5/ಗುಣಿ ಪದ್ಧತಿ – ವಿವಿಧ ಅಂತರ)

– 225 ಮಾನವ ದಿನಗಳು

– ಕೂಲಿ ವೆಚ್ಚ: ₹85,926

– ಸಾಮಗ್ರಿ ವೆಚ್ಚ: ₹35,573

– ಒಟ್ಟು: ₹1,21,499

2. ಒಂದು ಎಕರೆ ಹೊಸ ಹಿಪ್ಪುನೇರಳೆ ನಾಟಿ

(4×4 ಅಂತರ/ಗುಣಿ ಪದ್ಧತಿ)

– 112 ಮಾನವ ದಿನಗಳು

– ಕೂಲಿ ವೆಚ್ಚ: ₹42,924

– ಸಾಮಗ್ರಿ ವೆಚ್ಚ: ₹18,629

– ಒಟ್ಟು: ₹61,553

3. ಒಂದು ಎಕರೆ ಹಿಪ್ಪುನೇರಳೆ ಮರಗಡ್ಡಿ ನಾಟಿ

(10×10)

– 137 ಮಾನವ ದಿನಗಳು

– ಕೂಲಿ ವೆಚ್ಚ: ₹52,313

– ಸಾಮಗ್ರಿ ವೆಚ್ಚ: ₹4,882

– ಒಟ್ಟು: ₹57,195

ಅರ್ಹ ರೈತರು ಯಾವುದೇ ವಿಳಂಬ ಮಾಡದೆ ತಮ್ಮ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳುವಂತೆ ರೇಷ್ಮೆ ಇಲಾಖೆ ಮನವಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ...

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...