ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

Date:

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್ ವಿಭಾಗ, ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಸಂಸ್ಥೆ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಹೃದಯದ ಆರೋಗ್ಯ ಮತ್ತು ಸಿಪಿಆರ್ (CPR) ಜೀವ ರಕ್ಷಕ ವಿಧಾನದ ಕುರಿತು ಅರಿವು ಮೂಡಿಸಲಾಯಿತು.

- Advertisement -

ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್ ವಿಭಾಗದ ಮುಖ್ಯಸ್ಥರಾದ ಡಾ. ತಮೀಮ್ ಅಹ್ಮದ್ ಮತ್ತು ಅವರ ತಂಡವು ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನದಡಿ ಸಿಪಿಆರ್ ಕುರಿತು ಪ್ರಾಯೋಗಿಕ ಪ್ರಾತ್ಯಕ್ಷಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

 ಡಮ್ಮಿ ಮಾದರಿಯನ್ನು ಬಳಸಿ ಎದೆಯ ಮೇಲೆ ಸರಿಯಾದ ರೀತಿಯಲ್ಲಿ ಒತ್ತಡ ನೀಡುವ ಮೂಲಕ ತುರ್ತು ಸಂದರ್ಭದಲ್ಲಿ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ಸಿಪಿಆರ್ ವಿಧಾನವನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ತಮೀಮ್ ಅಹ್ಮದ್, “ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಯುವಜನರೂ ಹೃದಯ ಸಂಬಂಧಿ ತುರ್ತು ಪರಿಸ್ಥಿತಿಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಪ್ರತಿಯೊಬ್ಬರೂ ಸಿಪಿಆರ್ ನೀಡುವ ವಿಧಾನವನ್ನು ತಿಳಿದುಕೊಳ್ಳುವುದು ಅತ್ಯಂತ ಮುಖ್ಯ. ಯಾರಿಗೆ, ಯಾವ ಸಂದರ್ಭದಲ್ಲಿ ಹೃದಯಾಘಾತವಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಸಿಪಿಆರ್ ಕುರಿತು ಮೂಲಭೂತ ಜ್ಞಾನವಿದ್ದರೂ ಒಂದು ಜೀವವನ್ನು ಉಳಿಸಲು ನೆರವಾಗಬಹುದು,” ಎಂದರು.

‘ಹಾರ್ಟ್ ಸೇಫ್ ತುಮಕೂರು’ ಅಭಿಯಾನದಡಿ ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳು, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಚಿತ ಸಿಪಿಆರ್ ತರಬೇತಿ ನೀಡಲಾಗುತ್ತಿದೆ. ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನರು ಈ ಜೀವ ರಕ್ಷಕ ಕೌಶಲ್ಯವನ್ನು ಕಲಿಯುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಹೃದಯ ಸ್ತಂಭನ ಸಂಭವಿಸಿದಾಗ ಆಸ್ಪತ್ರೆಗೆ ತಲುಪುವವರೆಗೆ ಕಾಯದೆ ತಕ್ಷಣ ಸೂಕ್ತ ಜೀವ ರಕ್ಷಕ ಕ್ರಮಗಳನ್ನು ಕೈಗೊಳ್ಳುವುದು ನಿರ್ಣಾಯಕವಾಗಿದೆ. ಹಠಾತ್ ಹೃದಯ ಸ್ತಂಭನದ ಸಂದರ್ಭದಲ್ಲಿ ತರಬೇತಿ ಪಡೆದ ವ್ಯಕ್ತಿಗಳು ತಕ್ಷಣ ಸಿಪಿಆರ್ ನೀಡುವುದರಿಂದ ವ್ಯಕ್ತಿಯ ಬದುಕುಳಿಯುವ ಸಾಧ್ಯತೆಯನ್ನು ಹೆಚ್ಚಿಸಬಹುದು. ಆದ್ದರಿಂದ ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಹೇಳಿದರು.

ತುಮಕೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಜನರಿಗೆ ಸಿಪಿಆರ್ ಕುರಿತು ಅರಿವು ಮೂಡಿಸಿ, ಪ್ರಾಯೋಗಿಕ ತರಬೇತಿ ತಲುಪಿಸುವ ಉದ್ದೇಶದಿಂದ ‘ಹಾರ್ಟ್ ಸೇಫ್ ತುಮಕೂರು’ ಎಂಬ ಘೋಷವಾಕ್ಯದೊಂದಿಗೆ ಸಾರ್ವಜನಿಕ ಆರೋಗ್ಯ ಅಭಿಯಾನ ರೂಪಿಸಲಾಗಿದೆ. ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಇತ್ತೀಚೆಗೆ ಈ ಅಭಿಯಾನಕ್ಕೆ ಚಾಲನೆ ನೀಡಿದ್ದು, ಅದರ ಭಾಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್ ವಿಭಾಗದ ವೈದ್ಯರ ತಂಡ, ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಮಮತಾ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಬಿ.ಟಿ. ಮುದ್ದೇಶ್, ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...