ತುಮಕೂರು | ಯುವಜನರೇ, ನಿಮ್ಮೊಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ : ಮುರುಳೀಧರ ಹಾಲಪ್ಪ

Date:

 ಇಂದಿನ ಯುವಜನತೆ ಕಾಲ್ಪನಿಕ ವ್ಯಕ್ತಿಗಳನ್ನು ಆರಾಧಿಸುವುದಕ್ಕಿಂತ, ನಮ್ಮ ಕಣ್ಣಮುಂದೆಯೇ ಇರುವ ಸಾಧಕರನ್ನು ಮಾದರಿಯಾಗಿಸಿಕೊಂಡು, ತಾವೂ ಸಾಧಕರ ಸಾಲಿನಲ್ಲಿ ನಿಲ್ಲುವ ಬಗ್ಗೆ ಚಿಂತಿಸಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.

- Advertisement -

ತುಮಕೂರು ನಗರದ ತುಮಕೂರು ವಿಶ್ವವಿದ್ಯಾನಿಲಯದ ಡಾ. ಸದಾನಂದ ಮಯ್ಯ ಬ್ಲಾಕ್‌ನಲ್ಲಿ ವಿಶ್ವವಿದ್ಯಾನಿಲಯದ ಐಕ್ಯೂಎಸಿ ವಿಭಾಗ ಹಾಗೂ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ನಮ್ಮ ನಡುವೆಯೇ ಅನೇಕ ಕೊರತೆಗಳ ನಡುವೆಯೂ ಕಷ್ಟಪಟ್ಟು ಸಾಧನೆ ಮಾಡಿದವರಿದ್ದಾರೆ. ಅಂತಹವರನ್ನು ಮಾದರಿಯಾಗಿಸಿಕೊಂಡರೆ ನಮ್ಮಲ್ಲಿರುವ ಕೊರತೆಗಳನ್ನು ಮೆಟ್ಟಿನಿಂತು ಸಾಧಕರ ಸಾಲಿನಲ್ಲಿ ನಿಲ್ಲಲು ಸಾಧ್ಯ. ಸಾಧನೆ ಎಂಬುದು ಸುಲಭವಾಗಿ ಸಿಗುವಂತಹದ್ದಲ್ಲ. ಅದಕ್ಕೆ ನಿರಂತರ ಪರಿಶ್ರಮ ಮತ್ತು ಬದ್ಧತೆ ಅಗತ್ಯ ಎಂದರು.

ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಈ ಕಾರ್ಯಾಗಾರ ಆಯೋಜಿಸಿರುವ ಪ್ರಮುಖ ಉದ್ದೇಶ ನಮ್ಮ ಜಿಲ್ಲೆಯ ಯುವಜನರು ಆಡಳಿತ ವ್ಯವಸ್ಥೆಯ ಪ್ರಮುಖ ಹುದ್ದೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಬೇಕು ಎಂಬುದಾಗಿದೆ. ಉದ್ಯೋಗ ಮೇಳಗಳಲ್ಲಿ ಉದ್ಯೋಗಕ್ಕಾಗಿ ಯುವಜನರು ಸಾಲುಗಟ್ಟಿ ನಿಲ್ಲುವುದನ್ನು ಕಂಡಾಗ ವಿಷಾದವಾಗುತ್ತದೆ. ಖಾಸಗಿ ಕಂಪನಿಗಳ ಉದ್ಯೋಗಗಳ ಜತೆಗೆ ಸರ್ಕಾರಿ ಇಲಾಖೆಗಳಲ್ಲಿರುವ ಉದ್ಯೋಗಾವಕಾಶಗಳು, ಅರ್ಜಿ ಸಲ್ಲಿಸುವ ವಿಧಾನ, ಪರೀಕ್ಷಾ ಸಿದ್ಧತೆ ಹಾಗೂ ಪಠ್ಯಕ್ರಮದ ಕುರಿತು ಜಿಲ್ಲೆಯ ವಿದ್ಯಾವಂತ ಯುವಜನರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ಇಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ ತಮ್ಮ ಕೌಶಲ್ಯ ಮತ್ತು ಸಂವಹನ ಸಾಮರ್ಥ್ಯವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್‌ಸೈಟ್ ಅಕಾಡೆಮಿಯ ವಿನಯ್ ಜಿ.ಆರ್. ಮಾತನಾಡಿ, ಪಿಡಿಒ ಆಗಿ ಸರ್ಕಾರಿ ಸೇವೆಗೆ ಸೇರಿದ ಬಳಿಕ ಕೆಲಕಾಲ ಕೆಲಸ ಮಾಡಿ, ಕಳೆದ 12 ವರ್ಷಗಳಿಂದ ಇನ್‌ಸೈಟ್ ಅಕಾಡೆಮಿ ಮೂಲಕ ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದೇನೆ. ರಾಜ್ಯದ 21 ಜಿಲ್ಲೆಗಳಲ್ಲಿ ಅಕಾಡೆಮಿಯಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಬಹಳ ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರು ಮೊದಲು ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಪರೀಕ್ಷೆಗಳ ವ್ಯಾಪ್ತಿ ಹಾಗೂ ಆಳವನ್ನು ಅರ್ಥಮಾಡಿಕೊಳ್ಳಬೇಕು. ಪ್ರಯೋಗ ಮತ್ತು ತಪ್ಪುಗಳ ಮೂಲಕ ಕಲಿಯಲು ಇಲ್ಲಿ ಹೆಚ್ಚು ಅವಕಾಶವಿಲ್ಲ. ಕೌಟುಂಬಿಕ, ಆರ್ಥಿಕ ಹಾಗೂ ಸಾಮಾಜಿಕ ಹಿನ್ನೆಲೆಗಳನ್ನು ಅಡ್ಡಿಯಾಗಿಸಿಕೊಳ್ಳದೆ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆದಾಗ ಮಾತ್ರ ಯುಪಿಎಸ್‌ಸಿಯಂತಹ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಪ್ರತಿಯೊಬ್ಬರೂ ತಮ್ಮಲ್ಲಿರುವ ಅಂತಃಶಕ್ತಿಯನ್ನು ಗುರುತಿಸಿಕೊಳ್ಳಬೇಕು. ಅದಕ್ಕೆ ಸೂಕ್ತ ಮಾರ್ಗದರ್ಶನ ದೊರೆತರೆ ಮುಂದಿನ ವರ್ಷ ನೀವೂ ಸಾಧಕರ ಸಾಲಿನಲ್ಲಿ ನಿಲ್ಲಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿಕ್ ಸರ್ವೋದಯ ಫೌಂಡೇಷನ್‌ನ ಪ್ರೊ. ಕೆ. ಚಂದ್ರಣ್ಣ, ಕೆಎಎಸ್ ಅಧಿಕಾರಿ ಕೃಷ್ಣಮೂರ್ತಿ, ದಿಲೀಪ್ ಅಪ್ಪೇನಹಳ್ಳಿ, ಸಂಶೋಧಕ ಗಿರೀಶ್, ಕೃಷಿಕ್ ಸರ್ವೋದಯ ಫೌಂಡೇಷನ್‌ನ ಹನುಮೇಗೌಡ, ಉಪನ್ಯಾಸಕರಾದ ಮೋಹನ್ ಹಾಗೂ ಶೇಖರಯ್ಯ ಉಪಸ್ಥಿತರಿದ್ದರು.

ಎರಡು ದಿನಗಳ ಕಾರ್ಯಾಗಾರದಲ್ಲಿ ಎಸ್‌ಬಿಐನ ವಾದಿರಾಜ್, ಕೆಎಸ್‌ಎಫ್‌ನ ಗುರುರಾಜ್, ನಲ್ನುಡಿ ಸಂಪಾದಕ ಪ್ರೊ. ಪ್ರಸನ್ನ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರರಾದ ಶರಣಯ್ಯ ಬಂಡಾರಿಮಠ, ಗರಣಿ ಕೃಷ್ಣಮೂರ್ತಿ, ಜಾಗೃತ ದಳದ ಡಿವೈಎಸ್‌ಪಿ ಕೃಷ್ಣಮೂರ್ತಿ ಹಾಗೂ ಮೋಹನ್ ಅವರು ಅಭ್ಯರ್ಥಿಗಳಿಗೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಾಗಾರದಲ್ಲಿ 69 ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳ ಹಾಗೂ 9 ಡಿಪ್ಲೊಮಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಸುಮಾರು 1,704 ಅಭ್ಯರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕನ್ನಡದ ಬೆಳವಣಿಗೆಗೆ ಜಾತಿ, ಧರ್ಮಗಳ ಗಡಿಗಳಿಲ್ಲ: ಪ್ರೊ. ಎಸ್. ಮಲ್ಲಣ್ಣ

 ಕನ್ನಡ ಭಾಷೆಯ ಬೆಳವಣಿಗೆಗೆ ಜಾತಿ ಮತ್ತು ಧರ್ಮಗಳ ಗಡಿಗಳು ಎಂದಿಗೂ ಅಡ್ಡಿಯಾಗಿಲ್ಲ....

ತುಮಕೂರು | ಕನ್ನಡ ಕೇವಲ ಮಾತನಾಡುವ ಭಾಷೆಯಲ್ಲ, ಆಸ್ವಾದಿಸುವ ಸಂಸ್ಕೃತಿ: ಪ್ರೊ. ಕೃಷ್ಣೇಗೌಡ

ಕನ್ನಡ ಭಾಷೆಯನ್ನು ಕೇವಲ ಮಾತನಾಡುವುದಷ್ಟೇ ಅಲ್ಲ, ಅದರ ಸೊಗಡು, ಸಾಹಿತ್ಯ ಮತ್ತು...

ತಿಪಟೂರು | ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಓದುವ ಸಂಸ್ಕೃತಿ ಬೆಳೆಸಬೇಕು: ಸಿ.ಬಿ. ಶಶಿಧರ್

 ಮಕ್ಕಳಲ್ಲಿ ಮೂಢನಂಬಿಕೆಗಳ ಬದಲಿಗೆ ವೈಚಾರಿಕತೆ, ವೈಜ್ಞಾನಿಕ ಚಿಂತನೆ ಹಾಗೂ ತರ್ಕಬದ್ಧ ಆಲೋಚನೆಗಳನ್ನು...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...