ತುಮಕೂರು | 22 ದೇವಸ್ಥಾನ ಕಳ್ಳತನ ಪ್ರಕರಣ ಭೇದ: 6 ಅಂತರ್ ಜಿಲ್ಲಾ ಕಳ್ಳರ ಬಂಧನ : ಅಶೋಕ್ ಕೆ. ವಿ

Date:

ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಅಂತರ್ ಜಿಲ್ಲಾ ಕುಖ್ಯಾತ ಕಳ್ಳರ ತಂಡವನ್ನು ತುರುವೇಕೆರೆ ಪೊಲೀಸರು ಬಂಧಿಸಿ, 22 ದೇವಸ್ಥಾನ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.

- Advertisement -

ತುಮಕೂರು ನಗರದಲ್ಲಿ ಬುಧವಾರ ಬೆಳಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 19ರಂದು ರಾತ್ರಿ ಸುಮಾರು 8.45ರ ವೇಳೆಗೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಜೋಡುಗಟ್ಟೆ ಗ್ರಾಮದ ಸಮೀಪ ಬಸ್ ನಿಲ್ದಾಣದ ಬಳಿ 5-6 ಮಂದಿ ದರೋಡೆಗೆ ಸಿದ್ಧತೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಖಾರದ ಪುಡಿ, ಕಬ್ಬಿಣದ ಚಾಕು, ಲಾಂಗು ಸೇರಿದಂತೆ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ತುರುವೇಕೆರೆ, ದಂಡಿನಶಿವರ, ಕುಣಿಗಲ್, ಅಮೃತೂರು, ಮಿಡಿಗೇಶಿ, ತಿಪಟೂರು ಗ್ರಾಮಾಂತರ, ಕೊಡಿಗೇನಹಳ್ಳಿ, ಚಿಕ್ಕನಾಯಕನಹಳ್ಳಿ, ಕೆ.ಬಿ. ಕ್ರಾಸ್, ಶಿರಾ, ಸಿ.ಎಸ್.ಪುರ, ಕೂದುರು ಹಾಗೂ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ರಾತ್ರಿ ವೇಳೆ ಬೀಗ ಮುರಿದು ದೇವರ ಚಿನ್ನದ ತಾಳಿ, ಚಿನ್ನ-ಬೆಳ್ಳಿ ಆಭರಣಗಳು ಹಾಗೂ ಹುಂಡಿ ಹಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಒಟ್ಟು 22 ದೇವಸ್ಥಾನ ಕಳ್ಳತನ ಪ್ರಕರಣಗಳು ಹಾಗೂ ತುರುವೇಕೆರೆ ಠಾಣಾ ವ್ಯಾಪ್ತಿಯ ಬೆನಕೆನಕೆರೆ ಗ್ರಾಮದ ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ನಡೆದ ಕಳ್ಳತನ ಪ್ರಕರಣವೂ ಇದೇ ತಂಡದಿಂದ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಎಸ್‌ಪಿ ತಿಳಿಸಿದರು.

ಆರೋಪಿಗಳಿಂದ ಒಟ್ಟು 86 ಗ್ರಾಂ ತೂಕದ 25 ಚಿನ್ನದ ತಾಳಿಗಳು, ಇತರೆ ಚಿನ್ನದ ಆಭರಣಗಳು, ಮೂರು ಬೈಕ್‌ಗಳು, ಒಂದು ಆಟೋ ಹಾಗೂ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ₹14.19 ಲಕ್ಷ ಎಂದು ಅವರು ಮಾಹಿತಿ ನೀಡಿದರು.

ಬಂಧಿತ ಆರೋಪಿಗಳು:

ಹಾಸನ ಜಿಲ್ಲೆಯ  ಚೆನ್ನರಾಯಪಟ್ಟಣದ ಹಿರಿಸ್ಯಾವೆಯ  ಲಯನ್ ಅಲಿಯಾಸ್  ಎಟಿಎಂ  ಕುಳ್ಳ (29), ಮಧುಸೂಧನ ಅಲಿಯಾಸ್  ಮಧು, ರಾಮನಗರ ಜಿಲ್ಲೆಯ ಜೋಗಿಪಾಳ್ಯದ ಮಂಜುನಾಥ್ ಅಲಿಯಾಸ್ ಮಾಗಡಿ ಮಂಜ (28), ಮಂಡ್ಯ ಜಿಲ್ಲೆಯ ನಾಗಮಂಗಲದ ಗೊಂಡೇನಹಳ್ಳಿಯ ಚಂದನ (19), ಮಂಡ್ಯ ಜಿಲ್ಲೆಯ ನಾಗಮಂಗಲದ ಲೇಔಟ್ ನ ಬಾಬು ಅಲಿಯಾಸ್  ಗುರು (22), ಗೊಂಡೇನಹಳ್ಳಿಯ ನರಸಿಂಹಮೂರ್ತಿ ಅಲಿಯಾಸ್  ಕರಿಯಾ (32) ಅವರನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...