ತುಮಕೂರು | ಶೇ‌.50 ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅನುಮೋದಿಸಬೇಕು: ಡಾ.ಜಿ.ಪರಮೇಶ್ವರ

Date:

 ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ರಾಜೀವಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ಸ್ಥಾನಮಾನಗಳನ್ನು ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅವಕಾಶಗಳನ್ಮು ನೀಡಲಾಯಿತು‌. ಅದರಿಂದ ಇದೀಗ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿ ಪ್ರಾಧಾನ್ಯತೆ ಸಿಕ್ಕೆದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಂತರ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಇದ್ದಾಗ ಸಂಸತ್ತಿನಲ್ಲೂ ಶೇ.50 ಅವಕಾಶ ಕಲ್ಪಿಸುವ ಮಹಿಳಾ ಮಸೂದೆಯನ್ನು ಮಂಡಿಸಲಾಯಿತು. ಆ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅದು ಅನುಮೋದನೆ ಆಗಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಈ ಮಸೂದೆಯನ್ನು ಅನುಮೋದಿಸಿ ಮಹಿಳೆಗೆ ಶಕ್ತಿ ನೀಡಬೇಕು ಎಂದರು.

1003011001

ಇಡೀ ವಿಶ್ವದಲ್ಲಿ ಭಾರತದಲ್ಲಿಯೇ ಮಹಿಳೆಯರಿಗೆ ಹೆಚ್ಚು ಅವಕಾಶಗಳನ್ನು ಕಲ್ಪಿಸಿ ಸಬಲೀಕರಣಗೊಳಿಸಲಾಗಿದೆ. ಇಂದು ಮಹಿಳೆ ಎಲ್ಲ ಕ್ಷೇತ್ರದಲ್ಲೂ ಪುರುಷರನ್ನು ಹಿಂದಿಕ್ಕಿ ಸಾಧನೆ ಮಾಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿಯೇ ಘೋಷಿಸಿದಂತೆ ಮಹಿಳೆಯರ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಯಾರೂ ಅವಕಾಶಗಳನ್ನು ಕಾದು ಕೂರುವುದು ಸರಿಯಲ್ಲ. ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದರು.

1003011003

ವಿಶೇಷವಾಗಿ ಮಹಿಳೆಯವರು ಅತಿದೊಡ್ಡ ಜವಾಬ್ದಾರಿ ಹೊಂದಿರುತ್ತಾರೆ. ಮನೆಯ ಒಳಗೆ ಮತ್ತು ಹೊರಗೆ ದುಡಿಯಬೇಕಾಗುತ್ತದೆ. ಈ ನಡುವೆ ತಮ್ಮ ಆರೋಗ್ಯವನ್ನೂ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 2ವರ್ಷಗಳು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ಮು ಮಾಡಿದ್ದು, ಜಿಲ್ಲೆಯಲ್ಲಿ 1160 ಕಂದಾಯ ಗ್ರಾಮಗಳನ್ನು ಗುರುತಿಸಿದ್ದು, ಸದ್ಯದಲ್ಲೇ 22ಸಾವಿರ ಹಕ್ಕುಪತ್ರಗಳನ್ನು ನೀಡಲಿದ್ದೇವೆ. ಇದನ್ನು ನಾವು ಸೃಷ್ಟಿಕೊಂಡಿದ್ದೇವೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ನೂರುನ್ನಿಸಾ ಮಾತನಾಡಿ, ಮಹಿಳೆ ಪುರುಷರಿಗೆ ಸ್ಪರ್ಧಿಯಾಗುವುದು ಬೇಡ, ಮಹಿಳೆಯೇ ತಮ್ಮ ಆತ್ಮ ಸಂತೋಷಕ್ಕಾಗಿ ಕೆಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಿದೆ ಎಂದರು.

1003011022

ಇಂದಿನ ದಿನಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿದ್ದಾರೆ, ಆದರೆ ಆರ್ಥಿಕ ಸ್ವಾಲಂಭನೆಯನ್ನು ಅನುಭವಿಸುವ ಹಕ್ಕನ್ನು ಜಯಿಸಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಸಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೆಶಕಿ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

ತುಮಕೂರು ಜಿಲ್ಲೆಯ ಎಲ್ಲ ಮಹಿಳಾ ಅಧಿಕಾರಗಳು ಹಾಗೂ ಮಹಿಳಾ ಸಾಧಕಿಯರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...