ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ನಿಯೋಗದಿಂದ ತುಮಕೂರು ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಭೇಟಿ ಮಾಡಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅರ್ಹತೆಯುಳ್ಳ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲು ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ನಿಯೋಗದ ಉಪಸ್ಥಿತಿ ವಹಿಸಿದ್ದ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ ಕರ್ನಾಟಕ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳು ಮಕ್ಕಳ ಕಲ್ಯಾಣ ಮತ್ತು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕನಿಷ್ಠ ಹತ್ತು ವರ್ಷಗಳ ವೃತ್ತಿಪರ ಹಾಗೂ ಅಸದಾರಣ ಅನುಭವ ಹೊಂದಿರಬೇಕು. ಇದರಲ್ಲಿ ಶಿಕ್ಷಣದ ಹಕ್ಕು ಮಕ್ಕಳ ಅಭಿವೃದ್ಧಿ, ಬಾಲ ನ್ಯಾಯ, ಮಕ್ಕಳ ಆರೈಕೆ ಮತ್ತು ರಕ್ಷಣೆ ಬಾಲ ಕಾರ್ಮಿಕ ನಿರ್ಮೂಲನೆ, ಮಕ್ಕಳ ಮನೋವಿಜ್ಞಾನ , ಆರೋಗ್ಯ ಶಿಕ್ಷಣ, ಕಾನೂನು ಹಾಗೂ ಸಂಬAಧಿತ ಕ್ಷೇತ್ರಗಳು ಸೇರುವ ಜೊತೆಗೆ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಗಮನಾರ್ಹ ಸಾಧನೆಗಳನ್ನು ಮಾಡಿದವರಿಗೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರುಗಳನ್ನಾಗಿ ನೇಮಕ ಮಾಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ, ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರಿಗೆ ಮನವಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತುಮಕೂರು ಸ್ಲಂ ಸಮಿತಿಯ ಉಪಾಧ್ಯಕ್ಷರಾದ ಶಂಕ್ರಯ್ಯ, ಕಾರ್ಯದರ್ಶಿ ಅರುಣ್, ಪದಾಧಿಕಾರಿಗಳಾದ ಮೋಹನ್, ಗೋವಿಂದ, ಮಂಜಮ್ಮ, ಮುಂತಾದವರು ಪಾಲ್ಗೊಂಡಿದ್ದರು.




