ತುಮಕೂರು | ಸಂಭ್ರಮದ ಬಕ್ರೀದ್ ಆಚರಣೆ : ಸಾಮೂಹಿಕ ಪ್ರಾರ್ಥನೆ

Date:

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.  ನಂತರ ಮಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈದ್ಗಾ ಮೈದಾನಕ್ಕೆ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ, ನಯಾಜ್ ಅಹಮದ್, ಇರ್ಫಾನ್, ಸೈಯದ್ ಫಯಾಜ್. ಗುರುಪ್ರಸಾದ್, ಸಿಕಂದರ್ ಅವರು ಭೇಟಿ ನೀಡಿ ಮುಸ್ಲಿಂ ಸಮುದಾಯದ ಮುಖಂಡರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.  

ಈ ಸಂದರ್ಭದಲ್ಲಿ ಮುಖಂಡರಾದ ಇಕ್ಬಾಲ್ ಅಹಮದ್ ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕ. ಬಡವರಿಗೆ, ನಿರ್ಗತಿಕರಿಗೆ ದಾನ, ಧರ್ಮ ಮಾಡಲು ಅವಕಾಶ ಮಾಡಿಕೊಡುವುದೇ ಬಕ್ರೀದ್ ಹಬ್ಬದ ವಿಶೇಷತೆ. ಎಲ್ಲರೂ ಕೂಡಿ ಸಹೋದರತೆ, ಸಮಾನತೆ ಹಾಗೂ ಸಹಬಾಳ್ವೆಯಿಂದ ಬದುಕು ನಡೆಸುವ, ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ ಈ ಬಕ್ರೀದ್ ಹಬ್ಬ ಎಂದರು.

ಮನುಕುಲಕ್ಕೆ ಶಾಂತಿ ನೀಡಲಿ, ಮಳೆಯಾಗಲಿ, ಬೆಳೆಯಾಗಲಿ. ಶಾಂತಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಬೇರೆಯವರ ಬಗ್ಗೆ ಇರುವ ಕೆಡಕನ್ನು ನಾವೆಲ್ಲಾ ತ್ಯಾಗ ಮಾಡಬೇಕಾಗಿದೆ ಎಂದರು.

ಬಕ್ರೀದ್ ಹಬ್ಬವು ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಎಲ್ಲರೂ ಕೂಡಿ ಬಾಳುವಂತಾಗಲಿ, ಉತ್ತಮ ಮಳೆ, ಬೆಳೆಯಾಗಿ ದೇಶ ಸಮೃದ್ಧಿಯಾಗಲಿ ಎಂದು ಆಶಿಸಿದರು. 

ನಮ್ಮಲ್ಲಿರುವ ಅಸೂಯೆ, ದ್ವೇಷವನ್ನು ತೆಗೆದು ಹಾಕಬೇಕು. ಬಕ್ರೀದ್ ತ್ಯಾಗ ಬಲಿದಾನದ ಸಂಕೇತ ಎಂದು ಹೇಳುವ ಮೂಲಕ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...