ತುಮಕೂರು | ಜನಗಣತಿ ಅಂಕಿ, ಅಂಶಗಳೇ ಅಭಿವೃದ್ಧಿಗೆ ಆಧಾರ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

 ಜನಗಣತಿಯ ಅಂಕಿ-ಅಂಶಗಳೇ ಅಭಿವೃದ್ಧಿಗೆ ಆಧಾರವಾಗಿರುವುದರಿಂದ ಗಣತಿದಾರರು ಜವಾಬ್ದಾರಿಯಿಂದ ಗಣತಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ಸೋಮವಾರ ಭಾರತ ಜನಗಣತಿ-2027ರ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ  ಮಾತನಾಡಿದ ಅವರು,  ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜನಗಣತಿಯ ಅಂಕಿ-ಅಂಶಗಳೇ ಆಧಾರವಾಗಿರುತ್ತದೆ. ಸರ್ಕಾರ ರೂಪಿಸುವ ಯೋಜನೆಗಳು, ಕ್ಷೇತ್ರ ವಿಂಗಡಣೆ ಎಲ್ಲವೂ ಜನಸಂಖ್ಯೆ ಆಧಾರದ ಮೇಲೆಯೇ ನಿರ್ಧಾರವಾಗುತ್ತದೆ. ಆದ್ದರಿಂದ ಈ ಕಾರ್ಯದಲ್ಲಿ ನಿಯೋಜಿತರಾದ ಅಧಿಕಾರಿ ಸಿಬ್ಬಂದಿ ಯಾವುದೇ ಪೂರ್ವಗ್ರಹವಿಲ್ಲದೆ, ಸರಿಯಾದ ಮಾಹಿತಿಯನ್ನು ಕ್ರೋಢೀಕರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

1948ರ ಜನಗಣತಿ ಕಾಯ್ದೆಯ ಪ್ರಕಾರ ಜನಗಣತಿ ಕಾರ್ಯವನ್ನು ಕೈಗೊಳ್ಳಬೇಕಾಗಿದೆ. 1972ರಲ್ಲಿ ಮೊದಲ ಗಣತಿ ನಡೆದಿದ್ದು, ಅದರ ಬಳಿಕ ಜನಸಂಖ್ಯೆಯ ನಿಖರ ಮಾಹಿತಿಯನ್ನು ಸಂಗ್ರಹಿಸುವುದು ಸರ್ಕಾರದ ಯೋಜನೆಗಳ ಜಾರಿಗೆ ಪ್ರಮುಖವಾಗಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಅಲೆಮಾರಿ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದಕ್ಕಾಗಿ ಜಿಲ್ಲೆಯ ಮಟ್ಟದಲ್ಲಿ ಸಮಗ್ರ ಮಾಹಿತಿ ಅಗತ್ಯವಿದೆ. ಜನಗಣತಿ ಮೂಲಕ ಸಂಗ್ರಹವಾಗುವ ಅಂಕಿ-ಅಂಶಗಳು ಅದಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಇದಲ್ಲದೆ ಲೋಕಸಭೆ, ವಿಧಾನಸಭೆ, ಗ್ರಾಮ ಪಂಚಾಯ್ತಿ ಕ್ಷೇತ್ರಗಳ ರಚನೆಯೂ ಜನಸಂಖ್ಯೆ ಆಧಾರಿತವಾಗಿರುವುದರಿಂದ ಅಧಿಕಾರಿಗಳು ಜನಗಣತಿ ಕಾರ್ಯವನ್ನು ನಿಖರವಾಗಿ ಹಾಗೂ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಂವಹನ, ವಿಶ್ವಾಸಾರ್ಹತೆ ಹಾಗೂ ಮಾಹಿತಿ ಸಂಗ್ರಹ ಗಣತಿಯ ಪ್ರಮುಖ ಅಂಶಗಳು, ಈ ಹಿನ್ನೆಲೆಯಲ್ಲಿ ದೇಶದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಹಾಗೂ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಗಣತಿ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕಾಗಿದೆ. 

ಈ ಕಾರ್ಯಾಗಾರ ನಾಯಕತ್ವ ವಹಿಸಿಕೊಳ್ಳಬೇಕಾದ ಕಾರ್ಯಕ್ರಮವಾಗಿದ್ದು, ಆರಂಭದಲ್ಲಿ ನಿರಾಸಕ್ತಿ ಹುಟ್ಟಿಸಬಹುದು. ಆದರೆ ಜವಾಬ್ದಾರಿ ಮತ್ತು ಕರ್ತವ್ಯ ಎಂಬುದನ್ನು ಮರೆಯಬಾರದು. ತಮ್ಮ ಸಂದೇಹಗಳನ್ನು ಇಲ್ಲಿಯೇ ಬಗೆಹರಿಸಿಕೊಂಡು ಹೋಗಬೇಕು ಎಂದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಜನಗಣತಿ ಸಂಪನ್ಮೂಲ ವ್ಯಕ್ತಿಗಳಾದ ಆರ್.ಎಸ್. ಶರ್ಮಾ, ಭವ್ಯ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...