ತುಮಕೂರು | ಎಸ್ಐಆರ್ ಗೊಂದಲ ನಿವಾರಿಸಲು ಕಾಂಗ್ರೆಸ್ ಪಕ್ಷ ಒತ್ತಾಯ

Date:

ಸಾರ್ವಜನಿಕವಾಗಿ ಎಸ್ ಐಆರ್ ಕುರಿತು ಇರುವ ಗೊಂದಲಗಳನ್ನು ನಿವಾರಿಸುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ನ ಕಾನೂನು, ಮಾನವಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾಧ್ಯಕ್ಷ ಟಿ. ಎನ್. ಸುರೇಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿಮಾಡಿ ಮನವಿ ಪತ್ರ ಸಲ್ಲಿಸಿದರು

- Advertisement -

ಭಾರತ ಸಂವಿಧಾನ ನೀಡಿರುವ ಮತದಾನದ ಹಕ್ಕು ಈ ದೇಶದ ಎಲ್ಲರು ಪಡೆದುಕೊಳ್ಳುವಂತೆ ನೋಡಿಕೊಳ್ಳುವುದು ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಜವಬ್ದಾರಿ. ಅದರೆ ಎಸ್ ಐಆರ್ ನಿಂದ ಹಲವರನ್ನು ಮತದಾನದ ಹಕ್ಕಿನಿಂದ ತೆಗೆಯಲಾಗುತ್ತಿದೆ. ಬಿ ಎಲ್.ಓ.ಗಳು ಸರಿಯಾಗಿ ಸ್ಥಳ ಪರಿಶೀಲನೆ ಮಾಡದೇ ಮ್ಯಾಪಿಂಗ್ ಮಾಡಿದ್ದಾರೆ. ಇದರಿಂದ ತೊಂದರೆ ಆಗುವ ಸಾಧ್ಯತೆ ಇದೆ.  ಪ್ರಸ್ತುತ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭವಾಗಿದ್ದು ಜನರಲ್ಲಿರುವ ಗೊಂದಲಗಳನ್ನು ನಿವಾರಿಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ತುಮಕೂರು  ಜಿಲ್ಲಾ  ಕಾಂಗ್ರೆಸ್ ನ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾಧ್ಯಕ್ಷ ಟಿ. ಎನ್. ಸುರೇಶ್ ಒತ್ತಾಯಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

  ಚುನಾವಣಾ ಆಯೋಗ ಈ ಮ್ಯಾಪಿಂಗ್ ಕಾರ್ಯವನ್ನು ಮಾಡುವ ಮುನ್ನ ಬಿ.ಎಲ್.ಓ.ಗಳಿಗೆ 2002 ರ ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ನೀಡಿ, ಅದರ ಬಗ್ಗೆ ಅವರಿಗೆ ಅರಿವು ಮೂಡಿಸಬೇಕು. ಬಿ.ಎಲ್.ಓ.ಗಳು ಯಾವುದೋ ಒಂದು ವ್ಯಕ್ತಿಯ ಚುನಾವಣಾ ಗುರುತಿನ ಚೀಟಿಗೆ ಮಾಡಿರುವುದಿಲ್ಲ. ಮತ್ಯಾವುದೋ ವ್ಯಕ್ತಿಯ ಮಾಡಿರುತ್ತಾರೆ. ಪೋಷಕರ ಮಾಹಿತಿಯನ್ನು ಮ್ಯಾಪಿಂಗ್ ಮಾಡಬೇಕು.2002 ರಲ್ಲಿದ್ದ ವಿಧಾನಸಭಾ ಕ್ಷೇತ್ರಗಳು 2026 ರಲ್ಲಿ ಬದಲಾವಣೆ ಆಗಿರುವ ಪರಿಣಾಮ ಯಾವ ಯಾವ ಹಳ್ಳಿಗಳು, ಯಾವ ಯಾವ ವಿಧಾನಸಭಾ ಕ್ಷೇತ್ರಕ್ಕೆ ಸೇರಿಕೊಳ್ಳುತ್ತವೆ ಎಂದು ಸ್ವತಃ ಬಿ.ಎಲ್.ಓ.ಗಳಿಗೆ ಮಾಹಿತಿ ಇರುವುದಿಲ್ಲ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

 ತಂದೆ-ತಾಯಿಗಳು ಒಂದೆಡೆ ಇದ್ದು, ಮಕ್ಕಳು ವಲಸೆ ಬಂದು ನಗರ ಪ್ರದೇಶಗಳಲ್ಲಿ ವಾಸವಿದ್ದು, ಮಕ್ಕಳಿಗೆ 40 ವರ್ಷ ತುಂಬಿದ್ದರೆ ಚುನಾವಣಾ ಆಯೋಗವು ಸಿದ್ಧಪಡಿಸಿರುವ ಅಪ್ಲಿಕೇಷನ್‌ನಲ್ಲಿ ತೆಗೆದುಕೊಳ್ಳುವುದಿಲ್ಲ. ಇದನ್ನು ಸರಿಪಡಿಸಿಕೊಳ್ಳಲು ಕೇಳಿಕೊಳ್ಳುತ್ತೇವೆ.ಈಗಾಗಲೇ 40 ವರ್ಷ ತುಂಬ ತುಂಬಿದ ಪ್ರಜೆಗಳು 2002 ರಲ್ಲಿ ಯಾವುದೇ ವಿಧಾನ ಸಭಾ ಕ್ಷೇತ್ರಗಳಲ್ಲಿ ಮತವನ್ನು ಚಲಾಯಿಸಿರುವುದಿಲ್ಲ ಮತ್ತು ಅವರಿಗೆ ಅಥವಾ ಬೇರೆ ರೀತಿಯಲ್ಲಿ ಮ್ಯಾಪಿಂಗ್ ಮಾಡಲು ಪ್ರೋಜನಿಯಾಗಿ ಅವಕಾಶವಿರುವುದಿಲ್ಲ. ಹೀಗಾಗಿ ಅವರು ಮತದಾರರ ಪಟ್ಟಿಯಿಂದ ವಂಚಿತರಾಗಿರುತ್ತಾರೆ. ಇದನ್ನು ಸರಿಪಡಿಸಿಕೊಳ್ಳಲು ಕೇಳಿಕೊಳ್ಳುತ್ತೇವೆ. ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಬಂದಿರತಕ್ಕಂತಹ ಹೆಣ್ಣುಮಕ್ಕಳ ಚುನಾವಣಾ ಚೀಟಿಗಳು ಹಳ್ಳಿ ಹಳ್ಳಿಗಳ ಮಾಹಿತಿಗಳು ಬಿ.ಎಲ್.ಓ. ಗಳಿಗೆ ಇಲ್ಲದೆ ಇರುವುದರಿಂದ, ಐ.ಡಿ.ಗಳು ಡೀಲೀಟ್ ಆಗುವ ಸಂಭವವಿರುತ್ತದೆ ಎಂದು ಹೇಳಿದ್ದಾರೆ 

ಬಿ.ಎಲ್.ಓ. ಗಳಿಗೆ ಚುನಾವಣಾ ಆಯೋಗವು ಖುದ್ದು ಸ್ಥಳಪರಿಶೀಲನೆಯನ್ನು ಮಾಡಿ, ವ್ಯಕ್ತಿಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಮ್ಯಾಪಿಂಗ್ ಮಾಡಬೇಕೆಂದು ಹೇಳಿದ್ದರೂ ಸಹ ಬಿ.ಎಲ್.ಓ.ಗಳು ಮಾಡಿರುವುದಿಲ್ಲ. 2002 ರಲ್ಲಿ ಚುನಾವಣಾ ಚೀಟಿಯಲ್ಲಿ ತಂದೆಯ ಹೆಸರು ಅಥವಾ ಅರ್ಜಿದಾರರ ಹೆಸರುಗಳು ತಿದ್ದುಪಡಿಯಾಗಿದ್ದು, ಅದನ್ನು ಮತ್ತೆ 2026 ರಲ್ಲಿ ಯಾವ ರೀತಿ ಮ್ಯಾಪಿಂಗ್ ಮಾಡಬೇಕೆಂದು ಬಿ.ಎಲ್.ಓ. ಗಳಿಗೆ ಮಾಹಿತಿ ಇರುವುದಿಲ್ಲ ತಿದ್ದುಪಡಿಯಾಗಿರುವ ಚುನಾವಣಾ ಚೀಟಿಗಳಿಗೆ ಮತ್ತು ಪ್ರಸುತ ಇರುವಂತಹ ಚುನಾವಣಾ ಚೀಟಿಗಳಿಗೆ ವ್ಯತ್ಯಾಸ ಕಂಡು ಬರುವುದರಿಂದ, ವೋಟರ್ ಐ.ಡಿ.ಗಳು ಆಗುವ ಸಂಭವವಿರುತ್ತದೆ. ಈ ಗೊಂದಲ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ

ಬಿ.ಎಲ್.ಓ.ಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ, ತರಬೇತಿಯನ್ನು ಕೊಟ್ಟು, ಮತದಾರರ ಪಟ್ಟಿ ಪರಿಷ್ಕರಣೆಯ ಬಗ್ಗೆ ಅರಿವು ಮೂಡಿಸುವ ಅಗತ್ಯವಿರುತ್ತದೆ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

ಎಡಿಸಿ ತಿಪ್ಪೇಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...