ತುಮಕೂರು | ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

- Advertisement -

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲೆಯಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 7304975519, ಅಥವಾ 0816-2213400, 155304 ಈ ನಂಬರಿಗೆ ಸಾರ್ವಜನಿಕರು ದೂರು ಸಲ್ಲಿಸಬೇಕು. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಬಹುದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

 ಮಧುಗಿರಿ, ಶಿರಾ, ಕೊರಟಗೆರೆ ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗುತ್ತಿರುವ ಬಗ್ಗೆ ಪ್ರಯೋಗಾಲಯದ ವರದಿ ಬಂದಿದ್ದು, ಈಗಾಗಲೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಅಲ್ಲದೆ ಬಯಲು ಶೌಚ ಇನ್ನಿತರ ಸಾಂಕ್ರಾಮಿಕ ರೋಗ ಹರಡಬಹುದಾದ ವಿಷಯಗಳ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

 ಸಾಂಕ್ರಾಮಿಕ ರೋಗಗಳು ಹರಡಬಹುದಾದ ವಿದ್ಯಾರ್ಥಿನಿಲಯಗಳ ನೀರು ಸರಬರಾಜು, ಜಾತ್ರೆ, ಹಬ್ಬಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕೆಂದು ತಿಳಿಸಿದ ಅವರು, ತಮ್ಮ ತಾಲೂಕುಗಳಲ್ಲಿ ಯಾವ ಹಬ್ಬ, ಜಾತ್ರೆಗಳು ನಡೆಯುತ್ತವೆ, ಹೆಚ್ಚು ಜನರು ಸೇರುವ ಜಾಗಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದ ಅವರು ಜಾತ್ರೆ ಮತ್ತು ಹಬ್ಬ ಆಚರಣೆಗೆ ಅನುಮತಿಸುವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ಹಾಗೂ ಎಚ್ಚರಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.

 ಊರುಹಬ್ಬ, ಜಾತ್ರೆ ನಡೆಸಲು ತಹಸೀಲ್ದಾರ್ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದ ಅವರು, ತಾಲೂಕು ಆಡಳಿತದ ಅನುಮತಿ ಇಲ್ಲದೆ ಹಬ್ಬ ಅಥವಾ ಜಾತ್ರೆ ನಡೆದ ಬಗ್ಗೆ ದೂರುಗಳು ಬಂದರೆ ಸಂಬಂಧಿಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮ ವಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಆಯೋಜನೆಗೊಳ್ಳುವ ಊರ ಹಬ್ಬ/ಜಾತ್ರೆಗಳ ವೇಳೆ ಆಹಾರ/ಪ್ರಸಾದ ಮತ್ತು ಕುಡಿಯುವ ನೀರಿನಿಂದ ಹರಡಬಹುದಾದ ಕಾಯಿಲೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸಿ ಆರೋಗ್ಯ ಇಲಾಖೆ ಸಮನ್ವಯದೊಂದಿಗೆ ಸಂಪೂರ್ಣ ಮೇಲುಸ್ತುವಾರಿ ವಹಿಸಲು ಸೂಚಿಸಿದರು. 

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಊರ ಹಬ್ಬ/ಜಾತ್ರೆಗಳ ಅವಧಿಗೂ ಮುನ್ನವೇ ಜಾತ್ರೆ/ಹಬ್ಬ ಆಯೋಜಕರಿಗೆ/ಗ್ರಾಮಸ್ಥರಿಗೆ ಕುಡಿಯುವ ನೀರಿನ ನಿರ್ವಹಣೆ, ಆಹಾರ/ಪ್ರಸಾದ ತಯಾರಿಸುವ ಸ್ಥಳದ ಶುಚಿತ್ವ, ತ್ಯಾಜ್ಯ ವಿಸರ್ಜನ ಮತ್ತು ಶೌಚಾಲಯಗಳ ಕುರಿತಂತೆ ಸೂಕ್ತ ಮಾರ್ಗದರ್ಶನ/ಅರಿವು ಮೂಡಿಸಬೇಕು. ಊರ ಹಬ್ಬ/ಜಾತ್ರೆ ವೇಳೆ ವಿತರಿಸುವ ಕುಡಿಯುವ ನೀರನ್ನು ಪಡೆದ ನೀರಿನ ಮೂಲ, ಅದರ ಗುಣಮಟ್ಟ, ಸಾಗಿಸಲು ಉಪಯೋಗಿಸುವ ಟ್ಯಾಂಕರ್ ಮತ್ತು ಶೇಖರಿಸುವ ಟ್ಯಾಂಕ್‌ಗಳ ಶುಚಿತ್ವದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.  

ಆಹಾರ/ಪ್ರಸಾದ ತಯಾರಿಸಲು ಬಳಸುವ ನೀರು ಮತ್ತು ಅಡುಗೆ ಪ್ರದೇಶದ ಸುತ್ತಮುತ್ತ ಶುಚಿತ್ವದ ಬಗ್ಗೆ, ಪರಿವೀಕ್ಷಣೆ ನಡೆಸಬೇಕಲ್ಲದೆ, ಕುಡಿಯುವ ನೀರು/ಆಹಾರ/ಪ್ರಸಾದ ವಿತರಿಸುವವರು ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ವಿಸರ್ಜನೆ ಸ್ಥಳಗಳು ಮತ್ತು ಶೌಚಾಲಯಗಳಿಂದ ಕುಡಿಯುವ ನೀರು/ಆಹಾರ/ಪ್ರಸಾದ ವಿತರಿಸುವ ಸ್ಥಳಗಳಲ್ಲಿ ಅಗತ್ಯ ಅಂತರ ಕಾಪಾಡುವುದು, ಕ್ರಮಬದ್ದವಾಗಿ ತ್ಯಾಜ್ಯ ವಿಲೇವಾರಿ ಮಾಡುವುದೂ ಸೇರಿದಂತೆ ಮನೆಗಳಲ್ಲಿ ಎಲ್ಲಾ ಗ್ರಾಮಸ್ಥರು ಮುಖ್ಯವಾಗಿ ವೃದ್ಧರು, ಗರ್ಭಿಣಿ/ಬಾಣಂತಿ ಅನಾರೋಗಿಗಳು ಕಾಯಿಸಿ ಆರಿಸಿದ ನೀರನ್ನು ಸೇವಿಸುವಂತೆ ಸೂಚಿಸಬೇಕು.

ಗ್ರಾಮಗಳಲ್ಲಿನ ಕೊಳವೆಬಾವಿ, ಪೈಪ್‌ಲೈನ್ ಓಹೆಚ್‌ಟಿ ಆರ್‌ಓ ಪ್ಲಾಂಟ್ ಇತ್ಯಾದಿಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಊರ ಹಬ್ಬ/ಜಾತ್ರೆಗಳ ಅವಧಿಯಲ್ಲಿ ಸಂಬಂಧಪಟ್ಟ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು ಗ್ರಾಮಸ್ಥರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ಕೂಡಲೇ ಆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮತ್ತು ಮೇಲಾಧಿಕಾರಿಗಳಿಗೆ ವರದಿ ಮಾಡಬೇಕೆಂದು ಸೂಚನೆ ನೀಡಿದರು. 

ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಮತ್ತು ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ತುಮಕೂರು ಜಿಲ್ಲೆಯ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯ ಕ್ರಮಗಳ ಕುರಿತು ಯಾವುದೇ ಅಧಿಕಾರಿ ನಿರ್ಲಕ್ಷö್ಯತೆ ತೋರಿದ್ದಲ್ಲಿ ಅಂತಹ ಅಧಿಕಾರಿ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನಿರ್ದೇಶನ ನೀಡಿದರು. 

 ಮುಂದಿನ ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ತಾಲೂಕು ಮಟ್ಟದಲ್ಲಿ ನಡೆಸಿದ ಸಭೆಯ ಕುರಿತಾಗಿ ಜಿಲ್ಲಾ ಸಭೆಗೆ ಮಾಹಿತಿ ನೀಡುವಂತೆ ಅವರು ಸೂಚಿಸಿದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ಎಲ್ಲ ಹಂತದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...