ತುಮಕೂರು | ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸಲು ಡಿ.ಸಿ. ಸೂಚನೆ

Date:

ಇದೇ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

- Advertisement -

 ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

 ಜಿಲ್ಲೆಯಲ್ಲಿ ಸುಮಾರು 50,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅವರ ಭವಿಷ್ಯ ಈ ಪರೀಕ್ಷೆಯಲ್ಲಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಿಯೋಜಿತ ಅಧಿಕಾರಿಗಳು ಕಟ್ಟೆಚ್ಚರವಹಿಸುವಂತೆ ಅವರು ಸೂಚಿಸಿದರು. 

 ಪ್ರಶ್ನೆಪತ್ರಿಕೆ ಸಂಗ್ರಹ ಹಾಗೂ ವಿತರಣೆ ಜವಾಬ್ದಾರಿಗೆ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಅಪರ ಜಿಲ್ಲಾಧಿಕಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಖಜಾನಾಧಿಕಾರಿಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಪ್ರಶ್ನೆ ಪತ್ರಿಕೆ ಖಜಾನೆಯಲ್ಲಿ ಸೂಕ್ತ ಬಂದೋಬಸ್ತ್ ನಲ್ಲಿ ಇರಿಸಲಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಸಿ.ಸಿ.ಟಿವಿ ಹಾಗೂ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲದೆ ಯುಪಿಎಸ್ ಸೌಲಭ್ಯವನ್ನೂ ಖಜಾನೆ ಹೊಂದಿರಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ತ್ರಿಸದಸ್ಯ ಸಮಿತಿ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಅವರು ಸೂಚಿಸಿದರು. 

 ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯಲು ನಿಗದಿಪಡಿಸಲಾದ ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ನಿಗದಿತ ಮಾರ್ಗದಲ್ಲಿ ವಾಹನಗಳು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆಪತ್ರಿಕೆಯನ್ನು ಕೊಂಡೊಯ್ಯಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದರು.  

 ಮುಕ್ತ ಹಾಗೂ ನಿರ್ಭೀತ ಪರೀಕ್ಷೆ ವಾತಾವರಣಕ್ಕಾಗಿ ಪರೀಕ್ಷಾ ಕೇಂದ್ರಗಳು ಸಜ್ಜುಗೊಳ್ಳಬೇಕು ಎಂದ ಅವರು, ಇದೇ 23ರೊಳಗೆ ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಲಭ್ಯ ಒದಗಿಸಿರುವ ಬಗ್ಗೆ ವರದಿ ಸಲ್ಲಿಸಿ ತಮ್ಮಿಂದ ಸಹಿ ಪಡೆಯಬೇಕು ಎಂದು ತಿಳಿಸಿದರು. 

 ಪರೀಕ್ಷಾ ಕೊಠಡಿಗಳಲ್ಲಿ ವೆಬ್‌ಕಾಸ್ಟಿಂಗ್ ಇರುವುದರಿಂದ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ ರೂಮ್ ಕಚೇರಿಗೆ ವ್ಯವಸ್ಥೆ ಮಾಡಬೇಕು ಎಂದ ಅವರು ಪರೀಕ್ಷೆಗೆ ಸಂಬಂಧಿಸಿದಂತೆ ಒಂದು ಲೋಪವೂ ಇಲ್ಲದಂತೆ ನಿಯೋಜಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಅವರು ಸೂಚಿಸಿದರು. 

 ವಿದ್ಯಾರ್ಥಿಗಳ ಸುಗಮ ಪ್ರಯಾಣಕ್ಕಾಗಿ ಜಿಲ್ಲೆಯಾದ್ಯಂತ ಎಲ್ಲಾ ಮಾರ್ಗಗಳಲ್ಲಿ ಬಸ್ಸುಗಳು ಸರಿಯಾದ ಸಮಯಕ್ಕೆ ಸಂಚರಿಸಬೇಕು. ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂಬAಧಿಸಿದ ಘಟಕಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. 

 ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆಯ ಉಭಯ ಜಿಲ್ಲೆಗಳ ಉಪನಿರ್ದೇಶಕರು, ಖಜಾನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...