ತುಮಕೂರು | ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ವಿಳಂಬ :ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ತರಾಟೆ

Date:

ತುಮಕೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹು ದಿನಗಳಿಂದ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ತುಮಕೂರಿನಲ್ಲಿ ಸೋಮವಾರ ನಡೆಯಿತು. 

- Advertisement -

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ ಸಹಯೋಗದಲ್ಲಿ ಸೋಮವಾರ ತುಮಕೂರು ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಆಯೋಗದ ಅಧ್ಯಕ್ಷ ಪಿ. ರಘು ಅವರು ನಗರಸಭೆ, ಪುರಸಭೆ ಸೇರಿದಂತೆ ಇತರೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದಾಗ್ಯೂ ಈವರೆಗೆ ಪೌರ ಕಾರ್ಮಿಕರ ಹುದ್ದೆ ಭರ್ತಿಗೆ ಮುಂದಾಗದ ಅಧಿಕಾರಿಗಳ ವರ್ತನೆ ಬೇಜವಾಬ್ದಾರಿಯಿಂದ ಕೂಡಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸರ್ಕಾರದ ಆದೇಶ ಪೌರ ಕಾರ್ಮಿಕರ ಬಳಿಯಿದೆ. ಆದರೆ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳ ವಿಳಂಬಧೋರಣೆ ಅಥವಾ ನಿರ್ಲಕ್ಷö್ಯದಿಂದ ಈವರೆಗೆ ಆದೇಶವನ್ನು ಪಾಲಿಸದೆ ಅಧಿಕಾರಿಗಳು ವಿಳಂಬಧೋರಣೆ ತೋರುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. 

ಇದೇ ಸಂದರ್ಭದಲ್ಲಿ ಶಿರಾ ಪುರಸಭೆಯ ಮುಖ್ಯಾಧಿಕಾರಿ ರುದ್ರೇಶ್ ಅವರಿಗೆ ನೋಟೀಸ್ ಜಾರಿಗೊಳಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು. 

1002919703

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣವೇ ಆರಂಭಿಸಬೇಕು. ಈ ಸಂಬAಧ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಯೋಗದ ಅಧ್ಯಕ್ಷರು ಸೂಚಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರು ಮನೆ/ನಿವೇಶನ ದೊರಕಿಸಿಕೊಡುವಂತೆ ಕೋರಿಕೆ ಇಟ್ಟ ಹಿನ್ನೆಲೆಯಲ್ಲಿ ಸಂಬAಧಿಸಿದ ಅಧಿಕಾರಿಗಳು ಈ ಕೂಡಲೇ ಪೌರ ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಿರುವ ಸೌಲಭ್ಯವನ್ನು ವಿತರಿಸಲು ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು. 

1002919704

ಪೌರ ಕಾರ್ಮಿಕರ ಜಾಗೃತ ಸಮಿತಿ ಸದಸ್ಯರಾದ ಓಬಳೇಶ್ ಅವರು ತುಮಕೂರು ಜಿಲ್ಲೆಯಲ್ಲಿ 2002ರಲ್ಲಿ 157 ಕುಟುಂಬಗಳನ್ನು ಸಫಾಯಿ ಕರ್ಮಚಾರಿ ಕುಟುಂಬಗಳು ಎಂದು ಗುರುತಿಸಲಾಗಿದೆ. ಆದರೆ ಅವರ ಪುನರ್ವಸತಿ ಯೋಜನೆಗಳು ಜಿಲ್ಲೆಯಲ್ಲಿ ಜಾರಿಯಾಗಿಲ್ಲ, ಕೇವಲ 2 ಕುಟುಂಬಗಳಿಗೆ ಸಾರಥಿ ಯೋಜನೆಯಡಿ 2 ವಾಹನಗಳು ಹಾಗೂ 7 ಕುಟುಂಬಗಳಿಗೆ ಸಾಲ ಸೌಲಭ್ಯ ಮಂಜೂರಾತಿಯಾಗಿದೆ. ಆದರೆ ಜಿಲ್ಲಾ ಜಾಗೃತಿ ಸಮಿತಿ ಸಭೆ ನಡೆಯದೆ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿರುವುದಿಲ್ಲ ಎಂದರು. 

ಅಲ್ಲದೆ, ತುಮಕೂರು ಮಹಾನಗರಪಾಲಿಕೆ ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡಲು 17 ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ. ಆದರೂ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆದಿಲ್ಲ ಎಂದು ತಿಳಿಸಿದರು. 

1002919705

ಈ ಸಂಬಂಧ ಸಭೆಯಲ್ಲಿದ್ದ ತುಮಕೂರು ಮಹಾನಗರಪಾಲಿಕೆ ಆಯುಕ್ತೆ ಶುಭ ಅವರಿಗೆ ಸೂಚನೆ ನೀಡಿ ಪೌರ ಕಾರ್ಮಿಕರ ನಿವೇಶನಗಳನ್ನು ಹಂಚಿಕೆ ಮಾಡುವ ಸಂಬAಧ ಕ್ರಮವಹಿಸುವಂತೆ ಆಯೋಗದ ಅಧ್ಯಕ್ಷರು ಸೂಚಿಸಿದರು. 

ನಗರ ಹಾಗೂ ಗ್ರಾಮ ಪಂಚಾಯತಿ ಇನ್ನಿತರ ಕಡೆಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರ ಕಾರ್ಮಿಕರು ಹಾಗೂ ಸ್ವಚ್ಛತಾಗಾರರಿಗೆ ಇಡೀ ಸಮಾಜ ಋಣಿಯಾಗಿರಬೇಕು, ಈ ಸಮುದಾಯದ ಸುಧಾರಣೆಗೆ ನಿಯಮಾನುಸಾರ ಸಿಗಬೇಕಿರುವ ಸೌಲಭ್ಯಗಳನ್ನು ವಿತರಿಸಲು ಸಂಬAಧಿಸಿದ ಆಡಳಿತ ಕ್ರಮವಹಿಸಬೇಕು ಎಂದು ಅವರು ಕಿವಿ ಮಾತು ಹೇಳಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ. ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಯೋಗಾನಂದ ಹಾಗೂ ತುಮಕೂರು ಮಹಾನಗರಪಾಲಿಕೆಯ ಆಯುಕ್ತೆ ಶುಭ ಉಪಸ್ಥಿತರಿದ್ದರು. 

ಸಂವಾದದಲ್ಲಿ ತುಮಕೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು, ಪಂಚಾಯತಿ ವ್ಯಾಪ್ತಿಯ ಸ್ವಚ್ಛತಾಗಾರರು, ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...