ತುಮಕೂರು | ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ : ಶುಭ ಕಲ್ಯಾಣ್

Date:

ತುಮಕೂರು  ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. 

- Advertisement -

ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಜಾಗದಲ್ಲಿ 10 ವಿವಿಧ ಪ್ರಮುಖ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಅಲ್ಲದೆ, ಸಂಬಝಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯಕ್ರಮ ಇದಾಗಿದೆ ಎಂದು ಅವರು ತಿಳಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕಾರ್ಯಕ್ರಮ ಸ್ಥಳದಲ್ಲಿ ನಿರ್ಮಿಸಲಾಗುವ ತಾತ್ಕಾಲಿಕ ಮಳಿಗೆಗಳಲ್ಲಿ ಐಪಿಜಿಆರ್‌ಎಸ್ ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ, ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮ ರೂಪಿಸುವ ಸಂಬಂಧ ಆದೇಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಅಲ್ಲದೆ, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಜಿಲ್ಲಾದ್ಯಂತ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸೌಲಭ್ಯಗಳನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒದಗಿಸಲು ಕ್ರಮವಹಿಸಲಾಗಿದೆ. ಸಾರ್ವಜನಿಕರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅವರು ಮನವಿ ಮಾಡಿದ್ದಾರೆ. 

ಜನಸ್ಪಂದನದಲ್ಲಿ ಅಹವಾಲುಗಳಿಗೆ ತಾರ್ಕಿಕ ಅಂತ್ಯ; ಅಧಿಕಾರಿಗಳಿಗೆ ಡಿ.ಸಿ. ಸೂಚನೆ : 

 ಕಾರ್ಯಕ್ರಮದ ದಿನದಂದು ಮೊದಲು ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದು, ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪರಸ್ಪರ ಸಹಕಾರದೊಂದಿಗೆ ಸಾರ್ವಜನಿಕರಿಂದ ಬಂದಂತಹ ಅಹವಾಲುಗಳಿಗೆ ತಾರ್ಕಿಕ ಅಂತ್ಯ ಸಿಗುವಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. 

 ಎಲ್ಲಾ ತಾಲ್ಲೂಕುಗಳಿಂದ ಸುಮಾರು 2500 ಅರ್ಜಿಗಳು ಬಂದಿದ್ದು, ತಮ್ಮ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸಬೇಕೆಂದು ಅವರು ಸೂಚಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...