ತುಮಕೂರು | ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

Date:

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಹಾಗೂ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

- Advertisement -

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಮಕೂರು ಜಿಲ್ಲೆಯಲ್ಲಿ 22 ಸಾವಿರಕ್ಕೂ ಹೆಚ್ಚು ಭಾರತ್ ಜೋಡೋ ಯುವ ಮಿಷನ್ ಸಂಘಗಳನ್ನು ನೋಂದಣಿ ಮಾಡಲಾಗಿದ್ದು, ವಿವಿಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸಂಘಗಳನ್ನು ಸ್ಥಾಪಿಸಿ, ಯುವಜನರು ಸಮುದಾಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿವೆ. ಸಂಘಗಳ ರಚನೆ ಮತ್ತು ವಿವಿಧ ಚಟುವಟಿಕೆಗಳ ಅನುಷ್ಠಾನದಲ್ಲಿ ಸಾಧಿಸಿರುವ ಪ್ರಗತಿಯಿಂದ ತುಮಕೂರು ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿರುವುದು ಸಂತಸದ ಸಂಗತಿ ಎಂದು ಅವರು ತಿಳಿಸಿದರು.

ಪ್ರತಿ ಸಂಘದಲ್ಲಿ ಕ್ರೀಡೆ, ಫಿಟ್‌ನೆಸ್, ಕೌಶಲ್ಯಾಭಿವೃದ್ಧಿ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ. ಮಾಸಿಕ ಸಭೆಗಳ ಮೂಲಕ ಸಂಘಗಳ ಚಟುವಟಿಕೆಗಳು, ಯುವಜನರ ಪಾಲ್ಗೊಳ್ಳುವಿಕೆ ಹಾಗೂ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಭಾರತ್ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಸಮುದಾಯದ ಮೇಲಿನ ಬದ್ಧತೆಯನ್ನು ಬೆಳೆಸುವುದು ಯೋಜನೆಯ ಉದ್ದೇಶವಾಗಿದೆ. ತುಮಕೂರು ಜಿಲ್ಲೆಯ ಸಾಧನೆಯು ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳಾದ ಸಂಜೀವಪ್ಪ ಹಾಗೂ ಈಶ್ವರಪ್ಪ, ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕ ಸಂತೋಷ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ...

ಮೇವು ಬ್ಯಾಂಕ್‌ಗಾಗಿ ರೈತರ ರಣಕಹಳೆ: ಗೋವುಗಳೊಂದಿಗೆ ತುಮಕೂರಿನತ್ತ ರೈತರ ಜಾಥಾ!

ಬರದ ಬರೆಗೆ ಬೆಂದ ಜಾನುವಾರುಗಳಿಗೆ ಮೇವು ಕೊಡಿ ಎಂದು ಆಗ್ರಹಿಸಿ ತಿಪಟೂರಿನಿಂದ...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...