ತುಮಕೂರು | ಎಚ್5ಎನ್1 ಆತಂಕ ಬೇಡ, ಎಚ್ಚರ ಇರಲಿ : ಡಿಸಿ ಶುಭ ಕಲ್ಯಾಣ್

Date:

 ಊರ್ಡಿಗೆರೆ ಹೋಬಳಿಯ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸಿದ್ದ ನವಿಲುಗಳ ಸಾವಿಗೆ H5N1 ವೈರಾಣು ಸೋಂಕು ಕಾರಣ ಎಂದು ದೃಢಪಟ್ಟಿದೆ. ಆದರೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

- Advertisement -

 ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ರಾಜ್ಯ ಸಾಂಕ್ರಮಿಕ ರೋಗಗಳ ಜಾಗೃತಿ ಸಮಿತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

 ಕಳೆದ ಏಪ್ರಿಲ್ 16ರಂದು ಊರ್ಡಿಗೆರೆ ಹೋಬಳಿಯ ಕೋಳಿಹಳ್ಳಿ ಅರಣ್ಯ ಪ್ರದೇಶದಲ್ಲಿ ನವಿಲುಗಳ ಅಸಾಧಾರಣ ಸಾವು ಸಂಭವಿಸಿತ್ತು. ಮೃತ ನವಿಲು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಎಚ್5ಎನ್1 ವೈರಾಣು ಸೋಂಕಿನಿಂದ ನವಿಲುಗಳು ಮೃತಪಟ್ಟ ಬಗ್ಗೆ ದೃಢಪಟ್ಟಿದೆ. ಜಿಲ್ಲಾಡಳಿತ ತಕ್ಷಣ ತ್ವರಿತ ಸ್ಪಂದನಾ ತಂಡ (RRT)ವನ್ನು ರಚಿಸಿದ್ದು ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ ವಹಿಸಿದೆ ಎಂದು ಅವರು ತಿಳಿಸಿದರು.

 ಊರ್ಡಿಗೆರೆ ಹೋಬಳಿಯ ಐದು ಹಳ್ಳಿಗಳಾದ ಕೋಳಿಹಳ್ಳಿ, ಉಳ್ಳೇನಹಳ್ಳಿ, ಬೋಮ್ಮನಹಳ್ಳಿ, ಭೈರಸಂದ್ರ, ಕಲ್ಲಳ್ಳಿ ಗ್ರಾಮಗಳಲ್ಲಿ ಹಾಗೂ ಸುತ್ತಲಿನ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಅರಣ್ಯ ಇಲಾಖೆ, ಪಶು ಇಲಾಖೆ, ಆರೋಗ್ಯ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡವನ್ನು ರಚಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ಕೋಳಿ ಸಾಕಾಣಿಕೆ ಮಾಡುವವರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ಭಾಗದ ಕೋಳಿ ಅಂಗಡಿಗಳು ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.

 ಎಚ್5ಎನ್1 ವೈರಾಣು ಮಾರಾಣಾಂತಿಕ ಸೋಂಕುವಾದ್ದರಿಂದ ಸಾರ್ವಜನಿಕರೂ ಜಗೃತಿ ವಹಿಸುವ ಅಗತ್ಯವಿದೆ. ಯಾವುದಾದರೂ ಕೋಳಿ ಫಾರಂಗಳಲ್ಲಿ ಕೋಳಿಗಳು ಅಸಾಧಾರಣ ಸಾವು ಕಂಡುಬಂದಲ್ಲಿ ಸ್ಮಾರ್ಟ್ ಸಿಟಿ ಕಂಟ್ರೋಲ್ ರೂಮ್ ನಂಬರಿಗೆ ತಿಳಿಸಬೇಕು ಎಂದರು.

 ರೋಗವು ವನ್ಯಜೀವಿಗಳಿಂದ ಹರಡುವ ಸಾಧ್ಯತೆ ಇರುವುದರಿಂದ ಹೇಗೆ ಹರಡುತ್ತದೆ ಎಂಬುದು ಹೇಳಲು ಆಗುವುದಿಲ್ಲ. ಕೋಳಿಹಳ್ಳಿ ಪ್ರಕರಣ ನಂತರ ಈವರೆಗೆ ನವಿಲುಗಳ ಸತ್ತ ಬಗ್ಗೆ ಎಲ್ಲೂ ವರದಿ ಆಗಿಲ್ಲ. ಮತ್ತು ಸಾಕು ಪ್ರಾಣಿಗಳಿಗೂ ಈ ರೋಗ ಹರಡಿರುವ ಬಗ್ಗೆ ತಿಳಿದುಬಂದಿಲ್ಲ. ಆದರೆ ಇಂದು ಮುಂಜಾನೆ ಬೊಮ್ಮನಹಳ್ಳಿ ಕೋಳಿ ಫಾರಂ ನಲ್ಲಿ 15 ಕೋಳಿಗಳು ಮೃತಪಟ್ಟಿದ್ದು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ವರದಿ ಬಂದ ಬಳಿಕ ರಾಜ್ಯ ಸರ್ಕಾರ ಹಾಗೂ ರಾಜ್ಯ ಜಾಗೃತಿ ಸಮಿತಿ ಸೂಚಿಸುವ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕೋಳಿಗಳ ಅಸಾಧಾರಣ ಸಾವಿನ ಸಂಬಂಧ ಕೋಳಿಫಾರಂ ಮಾಲಿಕರು ಹಾಗೂ ಅಕ್ಕಪಕ್ಕದ ಮನೆಯವರು ಎಲ್ಲಿಯೂ ಹೋಗದಂತೆ ಮನೆಯಲ್ಲೇ ಇರಲು ಹಾಗೂ ಕೋಳಿ ತ್ಯಾಜ್ಯವನ್ನು ಭೂಮಿಯಲ್ಲಿ ಆಳವಾಗಿ ಹೂಳಲು ಸೂಚಿಸಲಾಗಿದೆ. ಕೋಳಿ ಫಾರಂಗಳಿಗೆ ಸೋಡಿಯಂ ಕ್ಲೋರೈಟ್ ಸಿಂಪಡಣೆ ಇತ್ಯಾದಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದರು.

ಈಗಾಗಲೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಹಾಗೂ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ ಎಂದರು.

 ಕೋಳಿ ಪದಾರ್ಥ ತಿನ್ನುವವರು ಚೆನ್ನಾಗಿ ಬೇಯಿಸಿದ ಆಹಾರವನ್ನು ಸೇವಿಸುವುದು ಸೂಕ್ತ ಎಂದೂ ಅವರು ತಿಳಿಸಿದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯ ಸಾಂಕ್ರಾಮಿಕ ರೋಗ ಜಾಗೃತಿ ಸಮಿತಿಯ ಡಾ.ಚಂದ್ರಶೇಖರ್, ಡಾ.ಶ್ರೀನಿವಾಸ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಚಂದ್ರಶೇಖರ್, ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಶಿವಪ್ರಸಾದ್, ಉಪ ಅರಣ್ಯ ವಲಯಾಧಿಕಾರಿ ರಬ್ಬಾನಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ...

ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ...

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...