ತುಮಕೂರು | ಸಾಮ್ರಾಜ್ಯ ಶಾಹಿಗಳಿಂದ ತ್ವರಿತ ಲಾಭಕ್ಕೆ ದುಡಿಯುವ ವರ್ಗದ ಶೋಷಣೆ : .ಸಿ.ಯತಿರಾಜು

Date:

ಜಗತ್ತಿನ ಬಂಡವಾಳಶಾಹಿಗಳು ಹಾಗೂ ಸಾಮ್ರಾಜ್ಯಶಾಹಿಗಳು ತ್ವರಿತ ಲಾಭಕ್ಕಾಗಿ ದುಡಿಯುವ ವರ್ಗವನ್ನು ದುರ್ಬಲಗೊಳಿಸುವ ಹಾಗೂ ಪರಿಸರ ನಾಶದ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದು ಪರಿಸರವಾದಿ ಮತ್ತು ಪ್ರಗತಿಪರ ಚಿಂತಕರಾದ ಸಿ.ಯತಿರಾಜು  ಹೇಳಿದರು. 

- Advertisement -

ತುಮಕೂರು ನಗರದ  ಜನ ಚಳುವಳಿ ಕೇಂದ್ರದಲ್ಲಿ ಕೆಂಪು ಪುಸ್ತಕ ಆಚರಣೆ ಸಮಿತಿ ಹಾಗೂ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿಯಿಂದ ಕೆಂಪು ಪುಸ್ತಕ ದಿನಾಚರಣೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮತನಾಡಿದ ಅವರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

 ವಿಶ್ವದಾದ್ಯಂತರು ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಇಂದಿನ ಪೀಳಿಗೆ ಏನು ಕಲಿಯಬೇಕು, ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಗೊಂದಲ ಉಂಟಾಗಿದೆ. ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿದ್ದು, ಇಂದಿನ ನವೀನತೆ ನಾಳೆ ಹಳೆಯದಾಗುತ್ತಿದೆ ಎಂದರು.

ಇದರ ನಡುವೆ ಕೃಷಿ ಚಟುವಟಿಕೆಗಳಲ್ಲಿ ಉಂಟಾಗುತ್ತಿರುವ ಅವ್ಯವಸ್ಥೆ, ಜನಸಾಮಾನ್ಯರ ಆರೋಗ್ಯದ ಮೇಲೆ ಬೀಳುತ್ತಿರುವ ದುಷ್ಪರಿಣಾಮಗಳು, ಇಂಧನ ಹಾಗೂ ವಿದ್ಯುತ್ ಬಳಕೆಯ ಏರಿಕೆ, ವಾಯುಗುಣದ ಹದಗೆಟ್ಟು ಹೋಗುತ್ತಿರುವ ಪರಿಸ್ಥಿತಿ—ದುಡಿಯುವ ವರ್ಗ, ರೈತರು ಮತ್ತು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಸಂಘಟಿತ ಹೋರಾಟವೇ ಮುಖ್ಯ ದಾರಿ ಎಂದು ಕರೆ ನೀಡಿದರು.

1002871073

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಕೆ. ಸುಬ್ರಮಣ್ಯ ಮಾತನಾಡಿ, 1848ರ ಫೆಬ್ರವರಿ 21ರಂದು ಕಾರ್ಲ್ ಮಾರ್ಕ್ಸ್ ಹಾಗೂ ಫ್ರೆಡರಿಕ್ ಎಂಗೆಲ್ಸ್ ಅವರು ರಚಿಸಿದ ಕಮ್ಯುನಿಸ್ಟ್ ಮ್ಯಾನಿಫೆಸ್ಟೋ ವಿಶ್ವದ ಕ್ರಾಂತಿಕಾರಿ ಚಿಂತನೆಗೆ ದಿಕ್ಕು ತೋರಿದ ಮಹತ್ವದ ಗ್ರಂಥವಾಗಿದೆ ಎಂದು ಹೇಳಿದರು. ಇದೇ ದಿನ ವಿಶ್ವ ಮಾತೃಭಾಷಾ ದಿನವೂ ಆಗಿರುವುದು ವಿಶೇಷ ಎಂದು ತಿಳಿಸಿದರು. ಈ ವರ್ಷ ಕೆಂಪು ಪುಸ್ತಕ ದಿನವನ್ನು ಸಾಮ್ರಾಜ್ಯಶಾಹಿ ವಿರೋಧದ ವಿಷಯದ ಸುತ್ತ ಆಚರಿಸಲಾಗುತ್ತಿದೆ. ಇದು ದೃಢ ಸಾಮ್ರಾಜ್ಯಶಾಹಿ ವಿರೋಧಿ ನಾಯಕನಾಗಿದ್ದ ಫಿಡೆಲ್ ಕ್ಯಾಸ್ಟ್ರೋ ಅವರ ಶತಮಾನೋತ್ಸವ ವರ್ಷವೂ ಆಗಿದೆ ಎಂದು ಹೇಳಿದರು.

ಕಾರ್ಮಿಕ ಮುಖಂಡ ಶಿವಲಿಂಗಯ್ಯ ಮಾತನಾಡಿ, ಈ ಪುಸ್ತಕವು ಇಂದಿನ ಸಾಮ್ರಾಜ್ಯಶಾಹಿಯ ಸ್ವರೂಪ ಮತ್ತು ಅದರ ಮುಖ್ಯ ಗುಣಲಕ್ಷಣಗಳನ್ನು ವಿಶ್ಲೇಷಿಸುತ್ತದೆ. ಜಾಗತಿಕ ಮಟ್ಟದಲ್ಲಿ ಸಂಘಟಿತ ಹೋರಾಟದ ಮೂಲಕ ಮಾತ್ರ ಸಾಮ್ರಾಜ್ಯಶಾಹಿ ನೀತಿಗಳನ್ನು ಸೋಲಿಸಲು ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಬ್ಬಯ್ಯ ಮಾತನಾಡಿ, ಸಾಮ್ರಾಜ್ಯಶಾಹಿ ಹಾಗೂ ಕೋಮುವಾದ ಶಕ್ತಿಗಳು ಒಟ್ಟಾಗಿ ದೇಶದ ದುಡಿಯುವ ಜನರ ಸಮಸ್ಯೆಗಳನ್ನು ಗಂಭೀರಗೊಳಿಸುತ್ತಿವೆ. ಬಂಡವಾಳಶಾಹಿಗಳ ಲಾಭಕೋರ ನೀತಿಗಳನ್ನು ಸೋಲಿಸಲು ಜನತೆ ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಪುಸ್ತಕವು ಸಾಮ್ರಾಜ್ಯಶಾಹಿಯ ಮೂರು ಹಂತಗಳು, ಜನಜೀವನದ ಮೇಲೆ ಅದರ ಪರಿಣಾಮಗಳು ಹಾಗೂ ಯು.ಎಸ್. ಸಾಮ್ರಾಜ್ಯಶಾಹಿ ಭಾರತದಷ್ಟೇ ಅಲ್ಲ ಇಡೀ ಜಗತ್ತಿನ ಜನತೆಗೆ ಶತ್ರುವೆಂಬ ವಿಚಾರವನ್ನು ಸ್ಪಷ್ಟಪಡಿಸುತ್ತದೆ. ಸಾಮ್ರಾಜ್ಯಶಾಹಿಗೆ ಮಿಲಿಟರಿ ಹಾಗೂ ಆರ್ಥಿಕ ಶಕ್ತಿ ಇದ್ದರೂ ಅದು ಶಾಶ್ವತ ಅಭಿವೃದ್ಧಿಯ ಮಾರ್ಗವಲ್ಲ. ಜಗತ್ತಿನಲ್ಲಿ ಸಾಮ್ರಾಜ್ಯಶಾಹಿ ವಿರೋಧಿ ಹೋರಾಟಗಳ ದೀರ್ಘ ಪರಂಪರೆಯನ್ನು ಈ ಕೃತಿ ನೆನಪಿಸುತ್ತದೆ. ಜನತೆಗೆ ಸರಳವಾಗಿ ಅರ್ಥವಾಗುವ ಭಾಷೆಯಲ್ಲಿ ಪುಸ್ತಕವನ್ನು ಓದುವಂತೆ ಪ್ರೇರೇಪಿಸುವ ಕಾರ್ಯವೇ ಪ್ರಮುಖ ಉದ್ದೇಶ ಎಂದು ಹೇಳಿದರು.

ಆರಂಭದಲ್ಲಿ ಷಣ್ಮುಗಪ್ಪ ಸ್ವಾಗತಿಸಿದರು. ಲೋಕೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...