ತುಮಕೂರು | ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಯಾವ ಟೀಕೆಗೂ ಬಗ್ಗುವುದಿಲ್ಲ : ಡಾ. ಜಿ. ಪರಮೇಶ್ವರ

Date:

 ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಹಾಗೂ ಯಾವ ಟೀಕೆಗೂ ಸರ್ಕಾರ ಬಗ್ಗುವುದಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

- Advertisement -

ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬಡತನ ನಿರ್ಮೂಲನೆ ಮಾಡಬೇಕು. ಕರ್ನಾಟಕದ ಜನತೆ ವಿದ್ಯಾವಂತರಾಗಬೇಕು. ಹಳ್ಳಿಯ ಹುಡುಗರು ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ಸಮಾಜವನ್ನು ಕಟ್ಟಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಜನಕಲ್ಯಾಣದ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಹಾಗೂ ಈ ಸಂಬಂಧ ಯಾವುದೇ ಟೀಕೆಗೂ ಸರ್ಕಾರ ಬಗ್ಗುವುದಿಲ್ಲ ಎಂದು  ಸ್ಪಷ್ಟಪಡಿಸಿದರು. 

1002897181

ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೇನು ಹೊಸ ವಿಚಾರವಲ್ಲ. ಜನರಿಗೆ ಆರ್ಥಿಕ ಶಕ್ತಿ ನೀಡಬೇಕು. ದುಡಿಯುವ ಕೈಗೆ ಉದ್ಯೋಗ ಸಿಗಬೇಕು. ಜನರು ಹಸಿವಿನಿಂದ ಮುಕ್ತರಾಗಬೇಕೆಂಬ ಸದುದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಗಳಿಂದ ಜನರ ಬದುಕಿನಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು  ಹೇಳಿದರು. 

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಅವಧಿಯ ಸರ್ಕಾರದಲ್ಲಿ ಹಸಿವು ಮುಕ್ತ ಕರ್ನಾಟಕ ಘೋಷಣೆಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಪರಿಕಲ್ಪನೆಯನ್ನು ರಾಜ್ಯದ ಜನತೆ ಮೆಚ್ಚಿದ್ದರು. ಅದಲ್ಲದೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದು ದೇಶಾದ್ಯಂತ ಹಾಗೂ ವಿಶ್ವದ್ಯಂತ ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ. ಜನರ ಕಷ್ಟ-ಸುಖಗಳನ್ನು ನಮ್ಮ ಸರ್ಕಾರ ಅರ್ಥ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜನರ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು. 

1002897182

ತುಮಕೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯೊಂದರಲ್ಲಿ 3.43 ಲಕ್ಷ ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 20.03 ಕೋಟಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಹೀಗೆ ಲಕ್ಷಾಂತರ ಕೋಟಿ ಹಣವನ್ನು ತುಮಕೂರು ಜಿಲ್ಲೆಯೊಂದರಲ್ಲೇ ಸರ್ಕಾರದಿಂದ ವೆಚ್ಚ ಮಾಡಲಾಗಿದೆ. ಫಲಾನುಭವಿಗೆ ನೇರವಾಗಿ ತಲುಪುವ ಇಂತಹ ಯೋಜನೆಗಳಿಂದ ರಾಜ್ಯದ ಜನರಲ್ಲಿ ಆರ್ಥಿಕ ಸ್ವಾವಲಂಬನೆಯಾಗಿದೆ. ಇದರಿಂದ ಅಭಿವೃದ್ಧಿ ಸಾಧ್ಯವಿದೆ ಎಂಬುದನ್ನು ಹೆಸರಾಂತ ಆರ್ಥಿಕ ತಜ್ಞರು ವಿಶ್ವದೆಲ್ಲೆಡೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು. 

ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯನ್ನು ಬೆಂಗಳೂರಿಗೆ ಸಮಾನವಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ  ತಿಳಿಸಿದರು. 

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮಾತನಾಡಿ, ಈ ಹಿಂದೆ ದೇಶದಲ್ಲಿ ಗುಜರಾತ್ ಮಾದರಿ ಎಂದೆಲ್ಲಾ ಹೇಳಲಾಗುತ್ತಿತ್ತು. ಆದರೆ ಈಗ ಕರ್ನಾಟಕ ಮಾದರಿ ಎಂಬ ಹೆಸರು ದೇಶಾದ್ಯಂತ ಕೇಳಿ ಬರುತ್ತಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ರಾಜ್ಯವಾಗಿ ಪರಿಗಣಿಸಲ್ಪಟ್ಟಿದೆ ಎಂದರು. 

ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ 1.19ಲಕ್ಷ ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳಿಗೆ ಸಿಗುವಂತೆ ಮಾಡಿದೆ. ಕರ್ನಾಟಕ ಸರ್ಕಾರ ಜನರ ಬದುಕನ್ನು ಅಥೈಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ಹೇಳಿದರು. 

ವಿಶೇಷ ಉಪನ್ಯಾಸ ನೀಡಿದ ಜಾಗೃತ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಡಾ. ಹೆಚ್.ವಿ. ವಾಸು ಮಾತನಾಡಿ, ಗ್ಯಾರಂಟಿ ಯೋಜನೆ ಅಭಿವೃದ್ಧಿಗೆ ವಿರುದ್ಧವಲ್ಲ. ಜನರ ಜೀವನಮಟ್ಟ ಸುಧಾರಿಸುವುದು ಅಭಿವೃದ್ಧಿಯ ಸಂಕೇತ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಸುಧಾರಿಸಿವೆ ಎಂದರು. 

1002897179

ಗ್ಯಾರಂಟಿ ಯೋಜನೆಗಳು ಬಸವತತ್ವದ ಆಧಾರದಲ್ಲಿ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದನ್ನು ವಿರೋಧಿಸುವವರು ಬಸವ ವಿರೋಧಿಗಳು, ಕನ್ನಡ ದ್ರೋಹಿಗಳು ಎಂದು ಪರಿಗಣಿಸಬೇಕಾಗಿರುತ್ತದೆ ಎಂದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಜನರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದರು. 

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಸ್ವಾಗತಿಸಿದರು. ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ ವಂದಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಗೌಡ, ಉಪಾಧ್ಯಕ್ಷರಾದ ನರಸೀಯಪ್ಪ, ಶಿವಪ್ರಸಾದ್, ಹನುಮಂತಪ್ಪ, ಪಂಚಾಕ್ಷರಪ್ಪ, ಬಸವರಾಜು, ಅಂಬರೀಷ್ ಹಾಗೂ ವಿವಿಧ ತಾಲ್ಲೂಕುಗಳ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...