ತುಮಕೂರು | ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅಸಹಕಾರ ಚಳವಳಿ ಆರಂಭ : ಎ. ಗೋವಿಂದರಾಜು

Date:

ಪ್ರಸ್ತಾಪಿತ ಔಟರ್‌ ರಿಂಗ್‌ ರಸ್ತೆಗೆ ಸಂಬಧಿಸಿದಂತೆ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಆದರೂ ಸರಕಾರಗಳು ನಮ್ಮ ದ್ವನಿಗೆ ಕಿವುಗೊಡುತ್ತಿಲ್ಲ. ಈ ವಿಚಾರದಲ್ಲಿ ಗಟ್ಟಿಯಾದ ಹೋರಾಟ ರೂಪಿಸುವುದೊಂದೆ ನಮ್ಮ ಮುಂದಿರುವ ಆಯ್ಕೆಯಾಗಿದೆ ಎಂದು ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.

- Advertisement -

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶೂಲದ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಭೂ ಬಳಕೆ ಮತ್ತು ಭೂ ಹೊದಿಕೆ ನೀತಿ ಹಾಗೂ ಔಟರ್‌ ರಿಂಗ್‌ ರಸ್ತೆ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ರೈತ ಮುಖಂಡರ ಕಾರ್ಯಾಗಾರದಲ್ಲಿ ಭೂಮಿ ಹಕ್ಕಿಗಾಗಿ ಹೋರಾಟದ ಮುಂದಿನ ದಾರಿಗಳು ಎಂಬ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭೂಮಿ ಉಳಿಸಿಕೊಳ್ಳಲು ಕಾನೂನು ಹೋರಾಟ ಒಂದು ಕಡೆಯಾದರೆ, ಒಕ್ಕೊರಲ ಹೋರಾಟ ಮತ್ತೊಂದು ಕಡೆ ನಡೆಯಬೇಕಿದೆ. 2013ರಲ್ಲಿ ಜಾರಿಗೆ ಬಂದ ಭೂ ಸ್ವಾಧೀನ ಕಾಯ್ದೆಗೆ ಹಲವಾರು ತಿದ್ದುಪಡಿಗಳನ್ನು ತಂದು, ಕಾರ್ಪೋರೇಟ್ ಕಂಪನಿಗಳಿಗೆ ಪೂರಕ ಅಂಶಗಳನ್ನು ಸೇರಿಸಿ, ರಸ್ತೆ, ರೈಲ್ವೆ ಲೈನ್ ಹೆಸರಿನಲ್ಲಿ ರೈತರ ಲಕ್ಷಾಂತರ ಎಕರೆ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಂಡು ರೈತರನ್ನು ಬೀದಿಗೆ ಬೀಳುವಂತೆ ಮಾಡಲಾಗಿದೆ. ಭೂಮಿಯ ಜೊತೆಗೆ, ಆಹಾರ ಅಭದ್ರತೆಯೂ ಕಾಡಲಿದೆ. ನಾವು ಪ್ರಗತಿಯ ವಿರೋಧಿಗಳಲ್ಲ, ನಮ್ಮ ಬದುಕಿಗೆ ಪೂರಕವಾದ ಪ್ರಗತಿ ಬೇಕು. ಮಹಿಳೆಯರು ಈ ಹೋರಾಟದ ನೇತೃತ್ವ ವಹಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಔಟರ್‌ರಿಂಗ್ ವಿರೋಧಿಸಿ ಹಾಗೂ ಭೂ ಹೊದಿಕೆ, ಭೂ ಬಳಕೆ ನೀತಿ ಜಾರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಭೂ ಬಳಕೆ ಮತ್ತು ಭೂ ಹೊದಿಕೆ ರಾಷ್ಟ್ರೀಯ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಪಣದಾರ ಸಮುದಾಯಗಳೊಟ್ಟಿಗೆ ಸಮಾಲೋಚನೆ ನಡೆಸುವುದು, ನಂದಿಹಳ್ಳಿ-ಮಲ್ಲಸಂದ್ರ-ವಸಂತ-ನರಸಾಪುರ ಹೆದ್ದಾರಿ ಯೋಜನೆಗಳನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಿದ್ದೇವೆ. ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಹೆದ್ದಾರಿ ಯೋಜನೆಯ ಪರಿಸರ ಪರಿಣಾಮ ಅಂದಾಜು ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಿ ಅತ್ಯಂತ ಪಾರದರ್ಶಕವಾಗಿ ಈ ಯೋಜನೆಯ ಎಲ್ಲಾ ಮಾಹಿತಿಗಳನ್ನು ಸಾರ್ವಜನಿಕವಾಗಿ ಮತ್ತು ಅತ್ಯಂತ ಪಾರದರ್ಶಕವಾಗಿ ಮಂಡಿಸಿ ಒಪ್ಪಿಗೆ ಪಡೆಯುವುದು. ಮೇಲ್ಕಂಡ ಎಲ್ಲಾ ಕ್ರಮಗಳನ್ನು ಕೈಗೊಳ್ಳದಿದ್ದರೆ “ನಾಗರೀಕ ಶಾಂತಿಯುತ ಅಸಹಕಾರ ಚಳುವಳಿಯನ್ನು” ಆರಂಭಿಸುವ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ಎಐಕೆಕೆಎಂಎಸ್‌ನಜಿಲ್ಲಾಧ್ಯಕ್ಷ ಎಸ್.ಎನ್.ಸ್ವಾಮಿ ನಿರ್ಣಯವನ್ನು ಮಂಡಿಸಿದರು. ಎಐಕೆಎಸನ ಕಂಬೇಗೌಡ, ಎಐಟಿಯುಸಿ ಗಿರೀಶ್, ಕೆಪಿಆರ್‌ಎಸ್‌ನ ಚನ್ನಬಸಣ್ಣ, ರೈತರಾದ ಉದಯ ನಂದಿಹಳ್ಳಿ, ಸಿದ್ದಗಂಗಯ್ಯ, ಸುರೇಶ್, ರಾಜಶೇಖರ್, ನಿಂಗರಾಜು ಇದ್ದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...