ತುಮಕೂರು | ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ: ಡಾ.ಕರೀಗೌಡ ಬೀಚನಹಳ್ಳಿಅಭಿಮತ

Date:

 ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ. ಆದ್ದರಿಂದ ಸರ್ಕಾರ ಯಾವುದೇ ಕೊರತೆಯ ಕಾರಣ ಹೇಳಿ ಶಾಲೆಗಳನ್ನು ಮುಚ್ಚಬಾರದು ಎಂದು 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ, ವಿದ್ವಾಂಸ ಡಾ. ಕರೀಗೌಡ ಬೀಚನಹಳ್ಳಿ ಅಭಿಪ್ರಾಯಪಟ್ಟರು.

- Advertisement -

ತುಮಕೂರಿನ ಅಮಾನಿಕೆರೆ ಗಾಜಿನಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು ಎರಡು ದಿನಗಳು ನಡೆಯುತ್ತಿರುವ 17ನೇ ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ತಮ್ಮ ಸರ್ವಾಧ್ಯಕ್ಷರ ಭಾಷಣ ಪ್ರತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.  ಕರ್ನಾಟಕದ ಶಿಕ್ಷಣ ಇಲಾಖೆಯ ವರದಿಗಳ ಪ್ರಕಾರ ರಾಜ್ಯದಲ್ಲಿ 3222 ಸರ್ಕಾರಿ ಶಾಲೆಗಳು ಶತಮಾನ ಕಂಡಿವೆ. ಈ ಶಾಲೆಗಳು ದುರಸ್ತಿಯಾಗಿ ಸಬಲೀಕರಣಗೊಳ್ಳಬೇಕಿದೆ. ಅವುಗಳ ಜೀರ್ಣೋದ್ಧಾರದ ಅವಶ್ಯಕತೆ ಇದೆ. ಕೆಲವು ಊರುಗಳಲ್ಲಿ ಶಾಲಾ ಕಟ್ಟಡಗಳಿಲ್ಲ. ಕೆಲವೆಡೆ ಶಿಕ್ಷಕರಿಲ್ಲ, ಕೆಲವೆಡೆ ಮಕ್ಕಳೇ ಇಲ್ಲ ಎಂಬ ವೈರುದ್ಯಗಳು ಇವೆ. ಆದರೆ ಸರ್ಕಾರ ಇದರ ಸುಧಾರಣೆಗೆ ಕ್ರಮ ವಹಿಸಬೇಕೆ ವಿನಃ ಕೊರತೆಯ ಕಾರಣ ಹೇಳಿ ಶಾಲೆಗಳನ್ನು ಮುಚ್ಚುವ ಕ್ರಮಕ್ಕೆ ಮುಂದಾಗಬಾರದು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...
1002587234

ಕರ್ನಾಟಕದ ವಿಶ್ವ ವಿದ್ಯಾಲಯಗಳು ಆರ್ಥಿಕ ಅನುದಾನವಿಲ್ಲದೆ, ಬೋಧಕರ ಕೊರತೆಯಿಂದ ದಿನೇ ದಿನೇ ಅವನತಿಯ ಹಾದಿ ಹಿಡಿದಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ನಿಕಾಯಕ್ಕೊಂದು ವಿಶ್ವವಿದ್ಯಾಲಯ ತೆರೆದು ಅದಕ್ಕೊಬ್ಬ ಕುಲಪತಿ ನೇಮಿಸಿ ಸರ್ಕಾರ ಕೈತೊಳೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಯುಜಿಸಿ ನಿಯಮಗಳು ಹಾಗೂ ರಾಜ್ಯ ಸರ್ಕಾರದ ನಿಯಮಗಳ ಗೊಂದಲಗಳಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಅಪಾಯದಲ್ಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕನಿಷ್ಠ 10ನೇ ತರಗತಿವರೆಗಾದರೂ ಶಿಕ್ಷಣ ರಾಷ್ಟ್ರೀರಣವಾಗುವುದು ಅನಿವಾರ್ಯ ಎಂದು ಪ್ರತಿಪಾದಿಸಿದ ಅವರು, ಮಹಿಳೆಯರ ಧ್ವನಿಗಳು ಅವರ ದೃಷ್ಟಿಕೋನಗಳನ್ನು ವಿಶ್ಲೇಷಿಸುವ ಚಿಂತನೆಗಳು ರೂಪುಗೊಳ್ಳಬೇಕಾಗಿದೆ. ಸಾಮಾಜಿಕವಾಗಿ, ರಾಜಕೀಯವಾಗಿ, ವೈಚಾರಿಕವಾಗಿ ಸಮಸ್ಯೆಗಳ್ನು ಅನ್ವೇಷಿಸುವತ್ತ ಲೇಖಕಿಯರು ಧಾವಿಸಬೇಕು ಎಂದರು.

ಹಿAದಿ ಭಾಷೆಯನ್ನು ಕೇಂದ್ರ ಸರ್ಕಾರ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಪ್ರಾದೇಶಿಕ ಭಾಷೆಗಳ ಮೇಲೆ ಹೇರುತ್ತಿರುವುದು ಕಳವಳಕಾರಿ ಎಂದ ಅವರು, ಹಿಂದಿ ಒಂದು ಆಕ್ರಮಣಕಾರಿ ಭಾಷೆ. ಈ ಮನೋಭಾವ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಲುವು ಎಂದು ಡಾ. ಬೀಚನಹಳ್ಳಿ ಹೇಳಿದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಜಾತಿ ಧರ್ಮಗಳ ಪ್ರಶ್ನೆ ವಿಜೃಂಭಿಸುತ್ತಿರುವುದು ಬಹುತ್ವ ಭಾರತಕ್ಕೆ

ಆರೋಗ್ಯಕಾರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ದೇಶ, ನಾಡು, ನುಡಿ ರಕ್ಷಣೆ ಎಲ್ಲರ ಜವಾಬ್ದಾರಿ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...