ತುಮಕೂರು | ನೋಟ, ವೇಷ, ಭಾಷೆ ಸರಿಯಿದ್ದರೆ ಜಗತ್ತನ್ನೇ ಜಯಿಸಬಹುದು : ಡಾ. ವತ್ಸಲಾ ಮೋಹನ್

Date:

ನಮ್ಮ ನೋಟ, ವೇಷ ಮತ್ತು ಭಾಷೆ ಸರಿಯಾಗಿದ್ದರೆ ಇಡೀ ಜಗತ್ತನ್ನೇ ಜಯಿಸಲು ಸಾಧ್ಯ. ಪ್ರತಿಯೊಬ್ಬರೂ ಕನ್ನಡ ಭಾಷೆಯ ಮೇಲೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಾಧ್ಯಾಪಕರು ಹಾಗೂ ಚಿತ್ರ ನಟಿ ಡಾ. ವತ್ಸಲಾ ಮೋಹನ್ ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವಾರ್ಷಿಕೋತ್ಸವ ಅಭ್ಯುದಯ-2026 ಸಮಾರಂಭವನ್ನು ಜೂನ್ 5ರ ಶುಕ್ರವಾರದಂದು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪದವಿ ಎನ್ನುವುದು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಮುಖ್ಯ ಘಟ್ಟವಾಗಿದೆ. ಅಧ್ಯಾಪಕರಿಗೆ ವಿದ್ಯಾರ್ಥಿಗಳೇ ಬಹುದೊಡ್ಡ ಕೊಡುಗೆ. ಪದವಿ ಮುಗಿದ ಮೇಲೆಯೂ ಓದನ್ನು ನಿಲ್ಲಿಸದೆ ಮುಂದುವರಿಸಬೇಕು. ನಮ್ಮ ಜಾನಪದ ಕಲೆ ಹಾಗೂ ಸಂಸ್ಕೃತಿ ಯನ್ನು ಎಂದಿಗೂ ಮರೆಯಬಾರದು. ತುಮಕೂರು ವಿವಿಯಲ್ಲಿ ಗ್ರಾಮೀಣ ಭಾಗದ ಮಕ್ಕಳ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದರು. 

ಕಾರ್ಯಕ್ರಮದಲ್ಲಿ ಉದ್ಘಾಟನಾ ನುಡಿಗಳನ್ನಾಡಿದ ತುಮಕೂರು ವಿವಿಯ ಹಣಕಾಸು ಅಧಿಕಾರಿ ನರಸಿಂಹ ಮೂರ್ತಿ ಅವರು, ಸಮಗ್ರವಾಗಿ ಸರ್ವತೋಮುಖ ಅಭಿವೃದ್ಧಿಯತ್ತ ಸಾಗುವುದೇ ನಿಜವಾದ ಅಭ್ಯುದಯ. ವಿದ್ಯಾರ್ಥಿಗಳ ಯಶಸ್ಸನ್ನು ಕಾಣುವ ಉನ್ನತ ಚಿಂತನೆ ಹೊಂದಿರುವ ಈ ಕಾಲೇಜು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಹಿರಿಯ ಪ್ರಾಧ್ಯಾಪಕರಾದ ಪ್ರೊ. ಪರಮಶಿವಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದೇಶದ ಜನಸಂಖ್ಯೆಯಷ್ಟೇ ಮೊಬೈಲ್ ಸಂಖ್ಯೆಯೂ ಹೆಚ್ಚಳವಾಗಿದೆ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ದಿನಕ್ಕೆ ಸುಮಾರು 14 ಗಂಟೆಗಳ ಕಾಲ ಫೋನ್ ಬಳಕೆ ಮಾಡುತ್ತಿದ್ದಾರೆ. ತಂತ್ರಜ್ಞಾನದ ಬಳಕೆ ನಮ್ಮ ಬೆಳವಣಿಗೆಗೆ ಪೂರಕವಾಗಬೇಕೇ ಹೊರತು ಮಾರಕವಾಗಬಾರದು ಎಂದರು.

ತುಮಕೂರು ವಿವಿ ಕಲಾ ನಿಕಾಯದ ಡೀನ್ ಪ್ರೊ. ಕೆ. ಜಿ. ಪರಶುರಾಮ್ ಮಾತನಾಡಿ, ಪದವಿ ಮುಗಿಸಿದ ವಿದ್ಯಾರ್ಥಿಗಳು ಅಲ್ಲಿಗೇ ಶಿಕ್ಷಣ ನಿಲ್ಲಿಸಬಾರದು. ಜೀವನದಲ್ಲಿ ಪರಿಪೂರ್ಣ ಯಶಸ್ಸು ಗಳಿಸಲು ಮುಂದಿನ ಸ್ನಾತಕೋತ್ತರ ಪದವಿ (ಪಿ.ಜಿ.) ಶಿಕ್ಷಣವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ದಾಕ್ಷಾಯಣಿ ಅವರು ಮಾತನಾಡಿ, “ವಿದ್ಯಾರ್ಥಿಗಳು ದೇಶದ ಶಕ್ತಿ ಮತ್ತು ಸ್ಫೂರ್ತಿಯಾಗಿದ್ದಾರೆ. ಇಂದಿನ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಕಾಲದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ಸಾಧಿಸುವತ್ತ ದೃಢ ಚಿಂತನೆಗಳನ್ನು ಹೊಂದಿರಬೇಕು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್. ಆರ್ ರೇಣುಕಾ ಸ್ವಾಗತಿಸಿದರು. ಡಾ. ಎಸ್. ಶಿವಣ್ಣ ಬೆಳವಾಡಿ ನಿರೂಪಿಸಿ, ವಂದಿಸಿದರು. ಹಿರಿಯ ಪ್ರಾಧ್ಯಾಪಕರಾದ ಪ್ರೊ.ಬಿ.ಕರಿಯಣ್ಣ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಸುದೀಪ್ ಕುಮಾರ್ ಇನ್ನಿತರರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...