ತುಮಕೂರು | ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ : ಜಿಲ್ಲಾಧಿಕಾರಿ

Date:

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧನ ಧಾನ್ಯ ಕೃಷಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಭಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು,  ಈ ಯೋಜನೆಯು ರೈತರ ಉತ್ಪಾದಕತೆ ಹೆಚ್ಚಿಸುವುದರ ಜೊತೆಗೆ, ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿದ ಅವರು, ಯೋಜನೆಯ ಲಾಭ ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಜಾಗ್ರತೆ ವಹಿಸುವಂತೆ ತಿಳಿಸಿದರು. ಯಾವುದೇ ಹಂತದಲ್ಲಿ ವಿಳಂಬ ಅಥವಾ ನಿರ್ಲಕ್ಷö್ಯ ನಡೆಯದಂತೆ ಅಧಿಕಾರಿಗಳು ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯೋಜನೆಯಡಿ ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ, ತಾಂತ್ರಿಕ ಮಾರ್ಗದರ್ಶನ, ನೀರಾವರಿ ಸೌಲಭ್ಯ ಹಾಗೂ ಮಾರುಕಟ್ಟೆ ಸಂಪರ್ಕ ಒದಗಿಸುವ ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನಾ ಇಲಾಖೆ ಸೇರಿದಂತೆ ಸಂಬAಧಿಸಿದ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಸಾಧಿಸಲು ಈ ಯೋಜನೆ ಪ್ರಮುಖವಾಗಿದೆ. ಆದ್ದರಿಂದ ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ನಿಗಾ ವಹಿಸಿ, ರೈತರೊಂದಿಗೆ ನೇರ ಸಂಪರ್ಕ ಹೊಂದಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...