ತುಮಕೂರು | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ : ಮುರುಳೀಧರ ಹಾಲಪ್ಪ

Date:

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಖಂಡಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ, ಮೊನ್ನೆಯವರೆಗೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿದ್ದ, ರೈಲ್ವೆ ನೇಮಕಾತಿ ಮಂಡಳಿ, ಹೊರಡಿಸಿರುವ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ಹಿಂದಿ ಮತ್ತು ಇಂಗ್ಲಿಷ್ ಭಾಷೆಗೆ ಮಾತ್ರ ಅವಕಾಶ ಕಲ್ಪಿಸಿ, ಉಳಿದ ಪ್ರಾದೇಶಿಕ ಭಾಷೆಗಳನ್ನು ಪರಿಗಣೆಗೆ ತೆಗೆದುಕೊಂಡಿಲ್ಲ. ಇದರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉದ್ಯೋಗಾಂಕ್ಷಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಕೇಂದ್ರ ಸರಕಾರದ ಮಲತಾಯಿ ಧೋರಣೆ ವಿರುದ್ದ ದ್ವನಿ ಎತ್ತುವಂತೆ ದೆಹಲಿಯಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ರಾಜ್ಯ ಸಂಸದರ ಸಭೆಯಲ್ಲಿ ಮನವಿ ಮಾಡುವುದಲ್ಲದೆ, ರೈಲ್ವೆ ಸಚಿವ ಅಶ್ವಿನ್ ಶ್ರೀವೈಷ್ಣವ್ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದೇಶದಲ್ಲಿಯೇ ಅತಿ ಹೆಚ್ಚು ನೇಮಕಾತಿ ಮಾಡಿಕೊಳ್ಳುವ ಇಲಾಖೆಗಳಲ್ಲಿ ರೈಲ್ವೆ ಕೂಡ ಒಂದು, ಪ್ರಸ್ತುತ ರೈಲ್ವೆಯಲ್ಲಿ 13 ಲಕ್ಷ ನೌಕರರಿದ್ದು, ಇವರಲ್ಲಿ 11 ಲಕ್ಷ ಹಿಂದಿ ಭಾಷಿಕರು, ಇತರೆ ಭಾಷೆಯ ಯುವಕರಿಗೆ ಅತ್ಯಂತ ಕಡಿಮೆ ಅದ್ಯತೆ ಇದೆ. ಭಾರತದ ಸಂವಿಧಾನದಲ್ಲಿ 22 ಭಾಷೆಗಳಿಗೆ ಮಾನ್ಯತೆ ಇದೆ. ಆದರೆ ಎರಡು ಭಾಷೆಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದು ಸಂವಿಧಾನಬಾಹಿರ ಕೆಲಸವಾಗಿದೆ. ಹಾಗಾಗಿ ಕೂಡಲೆ ಆರ್.ಆರ್.ಬಿ. ಅಧಿಸೂಚನೆ ಹಿಂಪಡೆದು, ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಿದ ಹೊಸ ಅಧಿಸೂಚನೆ ಹೊರಡಿಸಬೇಕೆಂಬುದು ಕನ್ನಡಪರ ಸಂಘಟನೆಗಳು ಹಾಗು ದ್ರಾವಿಡ ಭಾಷೆಗಳ ಒತ್ತಾಯವಾಗಿದೆ. ಕೇಂದ್ರ ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಲಪ್ಪ ತಿಳಿಸಿದರು.

ತುಮಕೂರು ಸಂಸದರು, ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಾಕಷ್ಟು ಕನ್ನಡ ಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಸಂಬಂಧಿಸಿದಂತೆ ಸಾಕಷ್ಟು ಪತ್ರ ವ್ಯವಹಾರ ನಡೆಸಿದ್ದಾರೆ. ಆದರೆ ಅವರ ಪ್ರಯತ್ನ ಕೈಗೂಡಿಲ್ಲ. ಕೇಂದ್ರದ ಮೌಖಿಕ ಭರವಸೆಯಿಂದ ಆಯಾಯ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಸಿದ್ದತೆ ನಡೆಸಿದ್ದ ಕರ್ನಾಟಕ ರಾಜ್ಯದ 1.80 ಲಕ್ಷ ಆಕಾಂಕ್ಷಿಗಳು ದಿಕ್ಕು ತೋಚದಂತಾಗಿದ್ದಾರೆ. ಹಾಗಾಗಿ ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ ಮತ್ತೊಮ್ಮೆ ಪರಿಶೀಲನೆ ನಡೆಸಬೇಕೆಂಬುದು ಎಲ್ಲಾ ಕನ್ನಡಿಗರ ಆಗ್ರಹವಾಗಿದೆ ಎಂದರು.

ಕೇಂದ್ರ ಸರಕಾರಕ್ಕೆ ದ್ರಾವಿಡ ಭಾಷೆಗಳ ಮೇಲೆ ಮೊದಲಿನಿಂದಲೂ ಮಲತಾಯಿ ಧೋರಣೆ, ಇದುವರೆಗೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿ, ಈಗ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಅವಕಾಶ ನೀಡಿ ಕನ್ನಡಿಗರ ತಲೆಯ ಮೇಲೆ ಚಪ್ಪಡಿ ಕಲ್ಕು ಎಳೆದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ರಾಜ್ಯದ ಸಂಸದರ ಸಭೆಯಲ್ಲಿ ಮನವಿ ಮಾಡಿ, ಸರಕಾರದ ಮೇಲೆ ಕನ್ನಡ ಭಾಷೆಗೆ ಅವಕಾಶ ನೀಡಲು ಒತ್ತಡ ತರುವಂತೆ ಕೋರಲಾಗುವುದು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್...