ತುಮಕೂರು | ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಸೂಚನೆ : ಪಿ. ರಘು

Date:

ತುಮಕೂರು  ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್    ಕಡ್ಡಾಯವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ಸೂಚನೆ ನೀಡಿದರು.  

- Advertisement -

ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ವೇತನ ಸೌಲಭ್ಯ ನೀಡಬೇಕೆಂದು ಹೇಳಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯಲ್ಲಿ  ಆರೋಗ್ಯ ತಪಾಸಣೆ ವರದಿಯನ್ನು ನೀಡಬೇಕೆಂದು ನಿರ್ದೇಶನ ನೀಡಿದರು. 

ಹೊರ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಿರುವ ಇಎಸ್‌ಐ, ಪಿಎಫ್ ಸೌಲಭ್ಯವನ್ನು ನೀಡಬೇಕು ಹಾಗೂ ಎಲ್ಲಾ ಪೌರಕಾರ್ಮಿಕರು ಕಡ್ಡಾಯವಾಗಿ ಜೀವ ವಿಮೆ ಮಾಡಿಸುವಂತೆ ಕ್ರಮವಹಿಸಬೇಕೆಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ. ಸಂಜೀವಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಯೋಗಾನಂದ, ತುಮಕೂರು ಮಹಾನಗರಪಾಲಿಕೆಯ ಆಯುಕ್ತೆ ಶುಭ ಹಾಗೂ ಉಪ ವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...