ತುಮಕೂರು | ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಅನನ್ಯ : ಶಾಸಕ ಬಿ.ಸುರೇಶ್ ಗೌಡ

Date:

ವಿಶ್ವವಿಖ್ಯಾತ ಶಿಲ್ಪಿ, ಶ್ರೇಷ್ಠ ಭಕ್ತಿ ಮತ್ತು ಕಾಯಕ ನಿಷ್ಠೆಗೆ ಹೆಸರಾದ ಅಮರಶಿಲ್ಪಿ ಜಕಣಾಚಾರಿ ಅವರು ಭಾರತೀಯ ಶಿಲ್ಪಕಲಾ ಲೋಕಕ್ಕೆ ನೀಡಿದ ಕೊಡುಗೆ ಅನನ್ಯ ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಹೇಳಿದರು

- Advertisement -

ಗುರುವಾರ ಕೈದಾಳದ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಲೂರು, ಹಳೇಬೀಡು ಸೇರಿದಂತೆ ರಾಜ್ಯದ ನೂರಾರು ದೇಗುಲಗಳಲ್ಲಿ ಜಕಣಾಚಾರಿಯವರ ಕೈಚಳಕ ಅಡಗಿದೆ. ಪ್ರಪಂಚದ ಬೇರೆಲ್ಲೂ ಇಂತಹ ಅದ್ಭುತ ಕೆತ್ತನೆಯನ್ನು ನೋಡಲು ಸಾಧ್ಯವಿಲ್ಲ ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಶ್ರೀ ಚನ್ನಕೇಶವ ದೇವಸ್ಥಾನದಲ್ಲಿ ಒಂದೇ ಶಿಲೆಯಲ್ಲಿ 42 ರಂಧ್ರಗಳನ್ನು ನೋಡುವ ತಾಂತ್ರಿಕ ನೈಪುಣ್ಯತೆ ಬೆರಗು ಮೂಡಿಸುವಂತದ್ದು. ಹೊಯ್ಸಳರ ಕಾಲದ ಈ ಅದ್ಭುತ ಶಿಲ್ಪಕಲೆಯ ತಾಣವಾದ ಕೈದಾಳವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದರು.

ಕೈದಾಳದಲ್ಲಿ ಈಗಾಗಲೇ 7 ಕೋಟಿ ರೂ.ಗಳ ವೆಚ್ಚದಲ್ಲಿ ಅಮರಶಿಲ್ಪಿ ಜಕಣಾಚಾರಿ ಸ್ಮಾರಕ ಭವನ ನಿರ್ಮಾಣವಾಗುತ್ತಿದೆ. ಈ ಸ್ಮಾರಕ ಭವನವು ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದ್ದು, ಲೋಕಾರ್ಪಣೆಯಾಗಲಿದೆ ಎಂದು ಹೇಳಿದರಲ್ಲದೆ, ಮುಂದಿನ ದಿನಗಳಲ್ಲಿ ಗೂಳೂರು, ಕೈದಾಳ ಹಾಗೂ ಹೆತ್ತೇನಹಳ್ಳಿಯನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ನಾವೆಲ್ಲರೂ ಒಟ್ಟುಗೂಡಿ ಕೆಲಸ ಮಾಡೋಣ ಎಂದರು.

ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಶಿಲ್ಪಕಲೆಗೆ ಅತ್ಯಂತ ಉನ್ನತ ಸ್ಥಾನವಿದೆ. ಕಲ್ಲನ್ನು ಕಲೆಯಾಗಿಸುವ ಶಿಲ್ಪಿಗಳು ಕೇವಲ ಕೆಲಸಗಾರರಲ್ಲ, ಅವರು ನಮ್ಮ ಇತಿಹಾಸದ ರಾಯಭಾರಿಗಳು. ಆದರೆ ಇಂದು ಆಧುನಿಕತೆಯ ಅಬ್ಬರದಲ್ಲಿ ಈ ಕಲೆ ಮತ್ತು ಕಲಾವಿದರು ಎಲೆಮರೆ ಕಾಯಿಯಂತಾಗುತ್ತಿದ್ದಾರೆ. ಇವರನ್ನು ಪ್ರೋತ್ಸಾಹಿಸುವುದು ಕೇವಲ ವ್ಯಕ್ತಿಯೊಬ್ಬನಿಗೆ ನೀಡುವ ಬೆಂಬಲವಲ್ಲ, ಬದಲಿಗೆ ಒಂದು ಪರಂಪರೆಯನ್ನು ಜೀವಂತವಾಗಿಡುವ ಪ್ರಯತ್ನವಾಗಿದೆ ಎಂದರು. 

ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ಜಕಣಾಚಾರಿಯವರ ಜನ್ಮಸ್ಥಳ ಹಾಗೂ ಅವರು ನಿರ್ಮಿಸಿದ ಸುಂದರ ಚನ್ನಕೇಶವ ದೇವಾಲಯದ ಆವರಣದಲ್ಲೇ ಈ ಸಂಸ್ಮರಣಾ ಕಾರ್ಯಕ್ರಮ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಅಂದಿನ ಇತಿಹಾಸ ಮತ್ತು ಜಕಣಾಚಾರಿಯವರ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು.

ಇದಕ್ಕೂ ಮುನ್ನ ನಗರದ ಚಿಕ್ಕಪೇಟೆ ಸರ್ಕಲ್‌ನಲ್ಲಿ ಬೈಕ್ ರ‍್ಯಾಲಿಗೆ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ವೆಂಕಟೇಶ್ವರಲು ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಎಂ. ನಿಕೇತ್ ರಾಜ್ ಮೌರ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪಿ.ಎಲ್. ರಮೇಶ್ ಸೇರಿದಂತೆ ಹಲವಾರು ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...