ತುಮಕೂರು | ಆದಿಚುಂಚನಗಿರಿ ವಿಶ್ವವಿದ್ಯಾಲಯ ಮತ್ತು ಸಿದ್ಧಾರ್ಥ ಮಾಧ್ಯಮ ಕೇಂದ್ರದ ಜಂಟಿ ಒಡಂಬಡಿಕೆ

Date:

 ಪದವಿ ಹಂತದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂವಹನ ಕೌಶಲ್ಯ ಆಧಾರಿತ ತರಬೇತಿ, ಶಿಕ್ಷಣ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ತತ್ವದಡಿಯಲ್ಲಿ ಕೆಲಸ ಮಾಡಲು ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದೊಂದಿಗೆ ಆದಿಚುಂಚನಗಿರಿ ವಿಶ್ವವಿದ್ಯಾಲಯ ಪರಸ್ಪರ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ.

- Advertisement -

ನಗರದ ಎಸ್‌ಎಸ್‌ಐಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾತುಕತೆಯಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯ ಶೈಕ್ಷಣಿಕ ಪ್ರತಿನಿಧಿಗಳ ಜಂಟಿ ಸಭೆಯಲ್ಲಿ ಇನ್ನು ಮುಂದೆ ಎರಡು ಸಂಸ್ಥೆಗಳು ಶೈಕ್ಷಣಿಕ ಕ್ಷೇತ್ರದ ಸಹಕಾರ ಸಂಬಂಧಗಳನ್ನು ಔಪಚಾರಿಕಗೊಳಿಸಲು ಮತ್ತು ವೇಗಗೊಳಿಸಿಕೊಳ್ಳುವ ಸಂಬAಧ ಚರ್ಚಿಸಿದವು. ಎರಡು ವಿವಿಗಳ ನಡುವಿನ ಸಹಕಾರವನ್ನು ಪ್ರೋತ್ಸಾಹಿಸುವುದು ಮತ್ತು ಬೆಂಬಲಿಸುವುದು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಎರಡೂ ಸಂಸ್ಥೆಗಳಿಂದ ಶೈಕ್ಷಣಿಕವಾಗಿ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೆ ತರಲು ಬದ್ಧವಾಗಿರಲು ತೀರ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಭೆಯ ಬಳಿಕ ಆದಿಚುಂಚಂಗಿರಿ ವಿಶ್ವವಿದ್ಯಾಲಯದ ಬಿ ಜಿ ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರೋಹಿತ್ ಎನ್ ಆರ್ ಮತ್ತು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ, ನಿರ್ದೇಶಕ ಡಾ. ಬಿ ಟಿ ಮುದ್ದೇಶ ಅವರು ಪರಸ್ಪರ ಒಡಂಬಡಿಕೆ ಪತ್ರಗಳಿಗೆ ಸಹಿ ಮಾಡಿ, ವಿನಿಮಯ ಮಾಡಿಕೊಂಡರು.

ಸಂವಹನ ಕೌಶಲ್ಯ ಆಧಾರಿತ ತರಬೇತಿ, ಶಿಕ್ಷಣ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಪರಸ್ಪರ ಸಹಕಾರದ ಮೇಲೆ ತಮ್ಮ ಪ್ರಯತ್ನಗಳನ್ನು ಕೇಂದ್ರೀಕರಿಸಲು ಎರಡು ಸಂಸ್ಥೆಗಳು ಉದ್ದೇಶಿಸಿವೆ.

ವಿದ್ಯಾರ್ಥಿಗಳ ವಿನಿಮಯ, ಜಂಟಿ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ವಿಸ್ತರಣೆ, ಶೈಕ್ಷಣಿಕ ಪಠ್ಯ ಮತ್ತು ಶೈಕ್ಷಣಿಕ ಪ್ರಕಟಣೆಗಳ ವಿನಿಮಯ ಮಾಡಿಕೊಳ್ಳುವ ಮೂಲಕ ತುಮಕೂರಿನಂತಹ ಎರಡನೆ ಹಂತದ ನಗರದಲ್ಲೂ ರಾಷ್ಟ್ರೀಯ  ಮಟ್ಟದ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಬಹುದು ಎಂಬುದು ಸಾಬೀತಾಗಿದೆ ಎಂದು ಡಾ. ರೋಹಿತ್ ಎನ್ ಆರ್ ಹರ್ಷ ವ್ಯಕ್ತಡಿಸಿದರು.

ಸೆಮಿನಾರ್‌ಗಳು, ಜಂಟಿ ಸಮ್ಮೇಳನಗಳು ಮತ್ತು ಶೈಕ್ಷಣಿಕ ಸಭೆಗಳಲ್ಲಿ ಪರಸ್ಪರ ಭಾಗವಹಿಸುವಿಕೆ, ಅಧ್ಯಾಪಕರು ಮತ್ತು ಸಿಬ್ಬಂದಿಗಳ ವಿನಿಮಯ ಸೇರಿದಂತೆ ಹತ್ತು ಹಲವು ಯೋಜನೆಗಳ ಜಾರಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಉದ್ಯೋಗ ಮತ್ತು ಕೈಗಾರಿಕಾ ವಲಯಕ್ಕೆ ಬೇಕಾದ ಕೋರ್ಸ್ಗಳ ಶಿಕ್ಷಣ ಮತ್ತು ತರಬೇತಿ ನೀಡಲು ಈ ಒಪ್ಪಂದ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಸಂಶೋಧನಾ ಯೋಜನೆಗಳು ಮತ್ತು ಪ್ರಕಟಣೆಗಳ ಕುರಿತು ಸಹಯೋಗಗಳು, ಆನ್‌ಲೈನ್ ಕಲಿಕೆ ಮತ್ತು ವೆಬಿನಾರ್‌ಗಳ ಸಂಘಟನೆಯಲ್ಲಿ ಸಹಕಾರ, ಜಂಟಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವುದು, ಮಾಧ್ಯಮ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಹಯೋಗ ಕಾರ್ಯಕ್ರಮಗಳು, ಆನ್‌ಲೈನ್ ಕಲಿಕೆ ಮತ್ತು ವೆಬಿನಾರ್‌ಗಳ ಸಂಘಟನೆಯಲ್ಲಿ ಸಹಕಾರದೊಂದಿಗೆ ಜಂಟಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವುದು ಒಡಂಬಡಿಕೆಯ ಮೂಲ ಉದ್ದೇಶವಾಗಿದೆ ಎಂದು ಡಾ. ರೋಹಿತ್ ಎನ್ ಆರ್ ನುಡಿದರು.

ಒಪ್ಪಂದದ ನಂತರ ಮಾತನಾಡಿದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ, ನಿರ್ದೇಶಕ ಡಾ. ಬಿ ಟಿ ಮುದ್ದೇಶ ಅವರು, ವಿದ್ಯಾರ್ಥಿ ಮತ್ತು ಅಧ್ಯಾಪಕರ ಮಟ್ಟದಲ್ಲಿ ಸಹಯೋಗದ ಕಲಿಕೆಯ ಕ್ರಮಗಳು, ಸಿದ್ದಾರ್ಥ ರೇಡಿಯೋದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸಂಶೋಧನಾ ಯೋಜನೆಗಳನ್ನು ಜಾರಿಯಿಂದ ರಾಷ್ಟçಮಟ್ಟದಲ್ಲಿ ಪೈಪೋಟಿಯನ್ನು ಎದರಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಕೋರ್ಸ್ಗೆ ಸಂಬಂಧಿಸಿದ ಶೈಕ್ಷಣಿಕ ವಸ್ತುಗಳ ವಿನಿಮಯ ಮತ್ತು ಜಂಟಿ ಶೈಕ್ಷಣಿಕ ಸಂಶೋಧನಾ ಯೋಜನೆಗಳ ಪರಿಣಾಮವಾಗಿ ಶೈಕ್ಷಣಿಕ ಸಂಶೋಧನೆಗಳ ಪ್ರಕಟಣೆಗಳಿಗೆ ಒತ್ತು ನೀಡುವುದರಿಂದ ವಿದ್ಯಾರ್ಥಿಗಳ ಗ್ರಹಿಕೆ ಮಟ್ಟವನ್ನು ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು

ಎರಡೂ ಸಂಸ್ಥೆಗಳು ಪರಸ್ಪರ ಸಂಪರ್ಕವನ್ನು ಕಲ್ಪಿಸಿಕೊಂಡಿರುವುದರಿಂದ ಜಂಟಿ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು ಆಯೋಜಿಸಿ, ಅವುಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರಿಗೆ ಸಿಗುವಂತೆ ಮಾಡುತ್ತವೆ, ಸಾಧ್ಯವಾದರೆ ಅಧ್ಯಾಪಕರು ಮತ್ತು ಸಿಬ್ಬಂದಿ ಪರಸ್ಪರ ವಿನಿಮಯವು ಎರಡೂ ಸಂಸ್ಥೆಗಳಲ್ಲಿ ಮಾಡಿಕೊಳ್ಳಲಾಗುವುದು.

 ವಿದ್ಯಾರ್ಥಿಗಳ ಪ್ರಯೋಜನಕ್ಕಾಗಿ ವರ್ಚುವಲ್ ಉಪನ್ಯಾಸಗಳನ್ನು ಮತ್ತು ವರ್ಚುವಲ್ ಇಂಟರ್ನ್ಶಿಪ್‌ಗಳು, ಪ್ರಾಜೆಕ್ಟ್ ಪ್ರದರ್ಶನ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಶ್ವೇತಾರಾಣಿ ಎಚ್, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ.ಜ್ಯೋತಿ ಸಿ, ಶ್ವೇತಾ ಎಂ.ಪಿ, ಸಿದ್ಧಾರ್ಥ ರೇಡಿಯೋದ ಸಿಬ್ಬಂದಿ ಈ ಜಂಟಿ ಒಪ್ಪಂದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಭೇಟಿ-ಪರೀಶೀಲನೆ:

ಇದಕ್ಕೂ ಮೊದಲು ಈ ನಿಯೋಗ ಶ್ರೀ ಸಿದ್ಧಾರ್ಥ ಸಮೂಹ ಸಂಸ್ಥೆಗಳ ಮೂಲಭೂತ ಸೌಕರ್ಯಗಳು, ರೇಡಿಯೋ ಮತ್ತು ಟಿವಿ ಕೇಂದ್ರಗಳು, ಪ್ರಾಯೋಗಿಕ ಲ್ಯಾಬ್‌ಗಳು, ಗೋಳಾಕೃತಿಯ ಗ್ರಂಥಾಲಯಕ್ಕೂ ಭೇಟಿಕೊಟ್ಟು ಸೌಲಭ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿತು. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...

ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...