ತುಮಕೂರು | ಪತ್ರಕರ್ತ ಎಂ. ಈಶ್ವರ್ ನಿಧನ : ಕಣ್ಣು ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

Date:

ಹಿರಿಯ ಪತ್ರಕರ್ತ, ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ (45)  ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಇವರು ಪತ್ನಿ ಅನಿತಾ, ಪುತ್ರಿ ಆಧ್ಯಶ್ರೀ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಈಶ್ವರ್ ಅವರ ಸ್ವಗ್ರಾಮ ಆಂಧ್ರಪ್ರದೇಶದ ಹೇಮಾವತಿ ಬಳಿಯ ಕೆಂಕೆರೆಯಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.

- Advertisement -

ನಗರದ ಪತ್ರಿಕಾ ಭವನ ಬಳಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರ ಇಡಲಾಗಿತ್ತು. ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೇಶ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಖಜಾಂಚಿ ಹಾರೋಗೆರೆ ಸತೀಶ್ ಹಾಗೂ ಪದಾಧಿಕಾರಿಗಳು, ಪತ್ರಿಕೋದ್ಯಮಿ ಡಾ.ಎಸ್. ನಾಗಣ್ಣ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಆರ್. ಕಾಮರಾಜ್, ಚಿ.ನಿ. ಪುರುಷೋತ್ತಮ್, ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಕರುಣಾಕರ್, ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ, ತುಮಕೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶಶಿಧರ್ ದೋಣಿಹಕ್ಲು ಸೇರಿದಂತೆ ಜಿಲ್ಲೆಯ ಹಲವು ಪತ್ರಕರ್ತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮೃತ ಈಶ್ವರ್ ಅವರ ಕಣ್ಣುಗಳನ್ನು ಅವರ ಕುಟುಂಬದವರು ದಾನ ನೀಡಿದರು. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬೆರೆಯುತ್ತಿದ್ದ ಗೆಳೆಯ ಈಶ್ವರ್ ಅಗಲಿಕೆಗೆ ಪತ್ರಕರ್ತರು ಶೋಕ ವ್ಯಕ್ತಪಡಿಸಿದರು.

ಪತ್ರಕರ್ತ ಈಶ್ವರ್ ನಿಧನಕ್ಕೆ ಡಿಸಿಎಂ ಪರಮೇಶ್ವರ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರು ಪತ್ರಕರ್ತರಾಗಿ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಗಂಗಹನುಮಯ್ಯ, ಎಂ.ಡಿ. ಲಕ್ಷಿನಾರಾಯಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಜಿಲ್ಲಾ ವಕ್ತಾರ ಜೆ. ಜಗದೀಶ್ ಮೊದಲಾದವರು ಈಶ್ವರ್ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...