ತುಮಕೂರು | ಉದ್ದಿಮೆದಾರರು–ಗ್ರಾಹಕರ ನಡುವಿನ ಸೇತುವೆಯೇ ಕನಕೋದ್ಯಮ : ಸುನೀಲ್ ಜೈರಾಜ್

Date:

ಕನಕೋದ್ಯಮ ಕೇವಲ ಹಾಲುಮತ ಸಮುದಾಯದ ಉದ್ದಿಮೆದಾರರ ಸಂಘಟನೆಯ ವೇದಿಕೆಯಲ್ಲ. ಉದ್ದಿಮೆದಾರರು ಹಾಗೂ ಗ್ರಾಹಕರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಸಂಘಟನೆ ಸ್ಥಾಪಿಸಲಾಗಿದೆ ಎಂದು ಕನಕೋದ್ಯಮ ಸಂಘಟನೆಯ ರಾಜ್ಯಾಧ್ಯಕ್ಷ ಸುನೀಲ್ ಜೈರಾಜ್ ಹೇಳಿದರು.

- Advertisement -

ನಗರದ ಶ್ರೀದೇವಿ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಹಾಲುಮತ ಉದ್ಯಮಿಗಳ ಸಂಘದ **‘ಕನಕೋದ್ಯಮಿ ತುಮಕೂರು ಅಧ್ಯಾಯ’**ದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕೀಯ ರಹಿತ ಉದ್ದೇಶದೊಂದಿಗೆ ಸಮುದಾಯದ ಉದ್ಯಮಿಗಳು ಪರಸ್ಪರ ಸಹಕಾರ ನೀಡುವ ಮೂಲಕ ಗ್ರಾಹಕರನ್ನು ವೃದ್ಧಿಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳಲು ಕನಕೋದ್ಯಮ ವೇದಿಕೆ ಕಲ್ಪಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸ್ವಾಮಿ ಯೋಗೀಶ್ವರನಂದಜೀ ಅವರ ಮಾರ್ಗದರ್ಶನದಲ್ಲಿ ಆರಂಭವಾದ ಸಂಘಟನೆಯಲ್ಲಿ ಈಗಾಗಲೇ ರಾಜ್ಯದಾದ್ಯಂತ ಸಾವಿರಕ್ಕೂ ಅಧಿಕ ಉದ್ಯಮಿಗಳು ಸದಸ್ಯರಾಗಿದ್ದಾರೆ. ಬೆಂಗಳೂರಿನ ಹೊರತಾಗಿ ಸಂಘಟನೆಯ ವಿಸ್ತರಣೆಗೆ ತುಮಕೂರಿನಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ. ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರಿನಲ್ಲಿ 5 ಸಾವಿರ ಉದ್ಯಮಿಗಳ ಬೃಹತ್ ಸಮಾವೇಶ ಆಯೋಜಿಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ತಿಳಿಸಿದರು.

ಸ್ವಂತ ಉದ್ಯಮದತ್ತ ಯುವಕರು ಹೆಜ್ಜೆ ಇಡಲಿ

ಕಾರ್ಮಿಕ ಇಲಾಖೆಯ ನಿವೃತ್ತ ಜಂಟಿ ಕಾರ್ಯದರ್ಶಿ ವಸಂತ್ ಇಟ್ಟಣಗಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಸಮುದಾಯದ ಉದ್ಯಮಿಗಳ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಯುವಜನರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸಲು ಕನಕೋದ್ಯಮದಂತಹ ಸಂಘಟನೆಗಳು ಉತ್ತಮ ವೇದಿಕೆಯಾಗಲಿವೆ ಎಂದರು.

ಲಕ್ಷಾಂತರ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸರ್ಕಾರಿ ನೌಕರಿ ಪಡೆಯುವುದಕ್ಕಿಂತ ಸ್ವಾವಲಂಬಿಗಳಾಗಿ ಸ್ವಂತ ಉದ್ಯಮ ಆರಂಭಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸಾಮಾನ್ಯ ವರ್ಗದ ಕುಟುಂಬಗಳಿಂದ ಬಂದು ಸಾಧನೆ ಮಾಡಿರುವ ಸುನೀಲ್ ಜೈರಾಜ್, ಡಾ. ಎಂ.ಆರ್. ಹುಲಿನಾಯ್ಕರ್ ಹಾಗೂ ಎಸ್. ನಾಗಣ್ಣ ಅವರಂತಹವರ ಸಾಧನೆಗಳು ಯುವ ಉದ್ಯಮಿಗಳಿಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು.

ಪರಸ್ಪರ ಸಹಕಾರದಿಂದ ಉದ್ಯಮ ಕ್ಷೇತ್ರದಲ್ಲಿ ಬೆಳೆಯಬೇಕು

ಹಿರಿಯ ಪತ್ರಿಕಾ ಸಂಪಾದಕ ಡಾ. ಎಸ್. ನಾಗಣ್ಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ತುಮಕೂರಿನಲ್ಲಿ ಕನಕೋದ್ಯಮದ ಹೊಸ ಅಧ್ಯಾಯ ಆರಂಭವಾಗಿರುವುದು ಉತ್ತಮ ಬೆಳವಣಿಗೆ. ರಾಜ್ಯದ ಮೂರನೇ ಅತಿ ದೊಡ್ಡ ಸಮುದಾಯವಾಗಿದ್ದರೂ ಔದ್ಯಮಿಕ ಕ್ಷೇತ್ರದಲ್ಲಿ ಬೆಳೆದಿರುವವರ ಸಂಖ್ಯೆ ಕಡಿಮೆ ಇದೆ. ಪರಸ್ಪರ ಸಹಕಾರದೊಂದಿಗೆ ಉದ್ಯಮ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಬೇಕಿದೆ ಎಂದರು.

ನಮ್ಮನ್ನು ಯಾರೂ ಬಂದು ಬೆಳೆಸುವುದಿಲ್ಲ. ನಾವು ಬೆಳೆದಾಗ ಎಲ್ಲರೂ ನಮ್ಮನ್ನು ಬೆಂಬಲಿಸುತ್ತಾರೆ. ಉದ್ಯಮಿ ಡಾ. ಎಂ.ಆರ್. ಹುಲಿನಾಯ್ಕರ್ ಅವರ ಸಾಧನೆ ಇದಕ್ಕೆ ಜ್ವಲಂತ ಉದಾಹರಣೆಯಾಗಿದೆ ಎಂದು ಹೇಳಿದರು.

ಬಿಎಂಟಿಸಿ ಉಪಾಧ್ಯಕ್ಷ ನಿಖೇತ್ ರಾಜ್ ಮೌರ್ಯ ಮಾತನಾಡಿ, ಯಾವುದೇ ಅಧಿಕಾರ ಅಥವಾ ಸಂಘಟನೆಯ ಜವಾಬ್ದಾರಿ ಸಿಕ್ಕರೂ ಅವಕಾಶವನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳುವುದು ಮುಖ್ಯ. ಈ ನಿಟ್ಟಿನಲ್ಲಿ ಕನಕೋದ್ಯಮ ಸಂಘಟನೆ ಸ್ಥಾಪನೆಯ ಪರಿಕಲ್ಪನೆಯೇ ಅದ್ಭುತ ಸೇವಾ ಚಿಂತನೆಯಾಗಿದೆ. ಇದನ್ನು ತುಮಕೂರಿಗೆ ತಂದಿರುವ ಮಧುಕರ್, ಧರ್ಮರಾಜ್ ಹಾಗೂ ಪ್ರೊ. ಕೆ.ಜಿ. ಪರಶುರಾಮ್ ಅವರ ಕಾರ್ಯ ಶ್ಲಾಘನೀಯ ಎಂದರು.

ಇನ್ಸೈಟ್ಸ್ ಐಎಎಸ್ ಅಕಾಡೆಮಿ ಮುಖ್ಯಸ್ಥ ಜಿ.ಬಿ. ವಿನಯ್ ಕುಮಾರ್ ಮಾತನಾಡಿ, ಇಂದಿನ ಸಂದರ್ಭದಲ್ಲಿ ರಾಜಕೀಯ ಅಧಿಕಾರವು ಹಲವು ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ. ಉದ್ಯಮಿಗಳು ಯುವ ನಾಯಕತ್ವವನ್ನು ಬೆಳೆಸಲು ಹಾಗೂ ಯುವಕರನ್ನು ಪ್ರೋತ್ಸಾಹಿಸಲು ಮುಂದಾಗಬೇಕು ಎಂದು ಹೇಳಿದರು.

ಉದ್ಯಮಿಗಳಾದ ಮಂಜು ಪ್ರಸಾದ್, ಶಿಕ್ಷಣ ಉದ್ಯಮಿ ರಾಮಾಂಜಿನಯ್ಯ ಹಾಗೂ ಪ್ರೊ. ಕೆ.ಜಿ. ಪರಶುರಾಮ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಶ್ರೀದೇವಿ ಶಿಕ್ಷಣ ಸಮೂಹದ ಸಂಸ್ಥಾಪಕ ಡಾ. ಎಂ.ಆರ್. ಹುಲಿನಾಯ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಾಲುಮತ ಸಮುದಾಯದವರು ಉದ್ಯಮ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಕನಕೋದ್ಯಮ ಸೂಕ್ತ ಅವಕಾಶಗಳ ವೇದಿಕೆಯಾಗಿದೆ ಎಂದು ಹೇಳಿ ಶುಭ ಹಾರೈಸಿದರು.

ರಾಮೋಹಳ್ಳಿಯ ಸ್ವಾಮಿ ಯೋಗೀಶ್ವರನಂದಜೀ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರಜಾಪ್ರಗತಿ ಸಹ ಸಂಪಾದಕ ಟಿ.ಎನ್. ಮಧುಕರ್ ಆಶಯ ನುಡಿಗಳೊಂದಿಗೆ ಸ್ವಾಗತಿಸಿದರು.

ಕವಿರತ್ನ ಕಾಳಿದಾಸ ಸಹಕಾರ ಸಂಘದ ಅಧ್ಯಕ್ಷ ಧರ್ಮರಾಜ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್. ಸುರೇಶ್, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ, ಕನಕೋದ್ಯಮ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಸುದರ್ಶನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...