ತುಮಕೂರು | ಕನ್ನಡ ಹೃದಯದ ಭಾಷೆಯಾಗಲಿ: ಡಾ. ಪುರುಷೋತ್ತಮ ಬಿಳಿಮಲೆ

Date:

ಕನ್ನಡವನ್ನು ಕೇವಲ ಸರ್ಕಾರಿ ಆದೇಶಗಳ ಮೂಲಕ ಉಳಿಸಲು ಸಾಧ್ಯವಿಲ್ಲ. ಅದು ಹೃದಯದ ಭಾಷೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.

- Advertisement -

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಬಳಕೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕನ್ನಡ ಎಂದರೆ ಕೇವಲ ಭಾಷೆ ಅಲ್ಲ ಅದು ಒಂದು ಸಂಸ್ಕೃತಿ. ಕೇವಲ ಬಲವಂತವಾಗಿ ಆದೇಶ ಅಥವಾ ಅನುಷ್ಠಾನದ ಒತ್ತಾಯದಿಂದ ಉಳಿಸಬಹುದೆಂಬುದು ಸುಳ್ಳು. ಕನ್ನಡ ಹೃದಯದ ಭಾಷೆಯಾದಲ್ಲಿ ಮಾತ್ರ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರಭುತ್ವ ಮತ್ತು ಪ್ರಜೆಗಳ ನಡುವೆ ಸಂವಹನ ನಡೆಸಲು ಭಾಷೆ ಅತ್ಯುತ್ತಮ ಸೇತುವೆಯಾಗಿ ಕೆಲಸ ಮಾಡಬೇಕು. ಆಡಳಿತದಲ್ಲಿ ಕನ್ನಡದ ಅನುಷ್ಠಾನವು ಕೇವಲ ಸಾಂಪ್ರದಾಯಿಕ ಕೆಲಸವಲ್ಲ, ಅದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಕೆಲಸವಾಗಿದೆ ಎಂದು ಹೇಳಿದರು.

ಸ್ವಭಾಷೆಯನ್ನು ಗೌರವಿಸುತ್ತಲೇ ಅನ್ಯ ಭಾಷೆಗಳನ್ನು ಕಲಿಯುವುದು ನಿಜವಾದ ಪ್ರಜಾಪ್ರಭುತ್ವದ ಲಕ್ಷಣ ಎಂದ ಅವರು, 1956ರ ಏಕೀಕರಣದ ನಂತರ ಕನ್ನಡ ಪರವಾಗಿ 3ಸಾವಿರಕ್ಕೂ ಹೆಚ್ಚು ಸರ್ಕಾರಿ ಆದೇಶಗಳು ಹೊರಬಿದ್ದಿವೆ. ಆದರೆ, ವಾಸ್ತವದಲ್ಲಿ ಶೇ. 10ರಷ್ಟು ಆದೇಶಗಳೂ ಸರಿಯಾಗಿ ಜಾರಿಯಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವರದಿಯೊಂದನ್ನು ಉಲ್ಲೇಖಿಸಿದ ಅವರು, 2001ರ ಜನಗಣತಿಯಲ್ಲಿದ್ದ ಸುಮಾರು 254 ಭಾಷೆಗಳು ಇಂದು ಅಸ್ತಿತ್ವ ಕಳೆದುಕೊಂಡಿವೆ. ಕನ್ನಡಕ್ಕೂ ಇಂತಹ ಸ್ಥಿತಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಕನ್ನಡ ಅನುಷ್ಠಾನದಲ್ಲಿ ವಿಫಲರಾಗುವ ಅಥವಾ ನಿರ್ಲಕ್ಷö್ಯ ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದ ಅವರು, ಸಮಗ್ರ ಕನ್ನಡ ಅನುಷ್ಠಾನ ಅಧಿನಿಯಮ ಕಾಯ್ದೆಯನ್ನು ಮತ್ತಷ್ಟು ಬಲಗೊಳಿಸಲಾಗಿದೆ. ಭಾಷಾ ಅನುಷ್ಠಾನದಲ್ಲಿ ಲೋಪವೆಸಗುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಕಾನೂನುಗಳಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದ್ದು ಸದ್ಯದಲ್ಲೇ ಕಾನೂನು ಜಾರಿಗೊಳ್ಳಲಿದೆ ಎಂದರು.

1994ರಲ್ಲಿ ಸ್ಥಾಪನೆಯಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದಾದ್ಯಂತ ಕನ್ನಡ ಬಳಕೆಯ ಸ್ಥಿತಿಗತಿಗಳನ್ನು ಪತ್ತೆಹಚ್ಚುತ್ತಿದೆ. ಜಿಲ್ಲಾ ಪ್ರವಾಸಗಳ ಮೂಲಕ ಅನುಷ್ಠಾನದ ಹಾದಿಯಲ್ಲಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ತೊಡಕುಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಹೇಳಿದರು.

ಸಭೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರವಿಕುಮಾರ್ ನೀಹಾ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತುಮಕೂರು ಉಪ ವಿಭಾಗಾಧಿಕಾರಿ ನಹೀದಾ ಜ಼ಮ್ ಜಮ್ ವಿವಿಧ ಇಲಾಖೆಗಳ ಮುಖ್ಯಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ...

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...