ತುಮಕೂರು | ಮಲ್ಲಘಟ್ಟ ಸುತ್ತಮುತ್ತ 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

ತುಮಕೂರು ಜಿಲ್ಲೆಯ  ತುರುವೇಕೆರೆ ತಾಲೂಕಿನ ಮಲ್ಲಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

- Advertisement -

  ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ತುಮಕೂರು ಜಿಲ್ಲೆಗೆ ಭೇಟಿ ನೀಡಿದ ಅವರು, ಮಲ್ಲಘಟ್ಟದ ಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

  ರೈತರು, ಸುತ್ತಮುತ್ತಲಿನ ಜನರಿಗೆ ಅನುಕೂಲವಾಗುವಂತೆ ಕಾಲುವೆ ವ್ಯವಸ್ಥೆ, ಸಮುದಾಯಭವನ, ಅತಿಥಿ ಗೃಹ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವುದಾಗಿ ಹೇಳಿದರು.

  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಈ ಪವಿತ್ರ ಸನ್ನಿಧಿಗೆ ಭೇಟಿ ನೀಡಿದ್ದು, ಗಂಗಾಧರೇಶ್ವರ ದೇವಾಲಯ ಹಾಗೂ ಮಲ್ಲಘಟ್ಟ ಕೆರೆ ತಮಗೆ ವಿಶೇಷ ಭಾವನಾತ್ಮಕ ನಂಟು ಹೊಂದಿರುವ ಸ್ಥಳಗಳು. ಈ ಕೆರೆಗೆ ಈ ಹಿಂದೆ ಮೂರು-ನಾಲ್ಕು ಬಾರಿ ಭೇಟಿ ನೀಡಿದ್ದು, ಇದು ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾಗಿದೆ ಎಂದರು.

1003424568

  ಇಲ್ಲಿನ ನೀರನ್ನು ತಮ್ಮ ಮನೆಯ ಗೃಹಪ್ರವೇಶದ ಸಂದರ್ಭದಲ್ಲೂ ತೆಗೆದುಕೊಂಡು ಹೋಗಿದ್ದಾಗಿ ಅವರು ಹೇಳಿದರು.

ಮಲ್ಲಘಟ್ಟ ಕೆರೆ ಸದಾ ತುಂಬಿ ತುಳುಕುತ್ತಿರುತ್ತದೆ. ಸುಮಾರು 25 ವರ್ಷಗಳಿಂದ ಈ ಪ್ರದೇಶವನ್ನು ಗಮನಿಸಿದ್ದು, ಇಲ್ಲಿಗೆ ಬಂದಾಗ ತಮಗೆ ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ,” ಎಂದರು.

“ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕಾಡುಸಿದ್ದೇಶ್ವರ ಮಠದವರೊಂದಿಗೆ ಚರ್ಚೆ ನಡೆಸಿದ್ದೇನೆ. ಅಭಿವೃದ್ಧಿಗೆ ಏನು ಬೇಕು ಎಂದು ಸ್ಥಳೀಯರು ಹಾಗೂ ಮಠದವರ ಸಲಹೆ ಪಡೆದು ಅಗತ್ಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದರು.

  ಪ್ರಮಾಣವಚನ ಸ್ವೀಕಾರ ವೇಳೆ ಹಿಂದೂ ಸಂಪ್ರದಾಯ ಅನುಸರಿಸಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣಕ್ಕಿಂತ ಭಕ್ತಿ ಮುಖ್ಯ. ಭಕ್ತನಿಗೂ ಭಗವಂತನಿಗೂ ಇರುವ ಸಂಬAಧ ವೈಯಕ್ತಿಕವಾದದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ಹಿಂದೂ, ಕ್ರೆöÊಸ್ತ, ಸಿಖ್, ಬೌದ್ಧ ಸೇರಿದಂತೆ ಎಲ್ಲಾ ಧರ್ಮಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿತ್ತು ಎಂದರು.

ರಾಜ್ಯದ ಹಿತ ಕಾಪಾಡುವ ಜವಾಬ್ದಾರಿ ತಮ್ಮ ಮೇಲಿದ್ದು, ಎಲ್ಲ ಧರ್ಮಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಆ ರೀತಿಯ ಕಾರ್ಯಕ್ರಮ ನಡೆಸಲಾಗಿತ್ತು ಎಂದು ಸ್ಪಷ್ಟಪಡಿಸಿದರು.

1003424573

ಮಲ್ಲಘಟ್ಟದ ಗಂಗಾಧರೇಶ್ವರನಿಗೆ ಹರಕೆ ಹೊತ್ತಿದ್ದೀರಾ ಎಂಬ ಪ್ರಶ್ನೆಗೆ, “ಯಾವುದೇ ಹರಕೆ ಇಲ್ಲ. ಇದು ನನ್ನ ಭಕ್ತಿ ಮತ್ತು ಭಾವನೆ. ಜನರ ಕಲ್ಯಾಣ, ರಾಜ್ಯದ ಸುಭಿಕ್ಷತೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ನನಗೆ ದೊರೆತಿರುವ ಅಧಿಕಾರವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಶಾಸಕರಾದ ಕೆ.ಷಡಕ್ಷರಿ, ಎಂ.ಟಿ ಕೃಷ್ಣಪ್ಪ ಮತ್ತಿತರ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...