ತುಮಕೂರು | ಸಂಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Date:

ಮುಂಬರುವ ಬಜೆಟ್‌ ಅಧಿವೇಶನದಲ್ಲಿ ನೇರ ನೇಮಕಾತಿ, ಪದೊನ್ನತ್ತಿ, ಬ್ಯಾಕ್‌ಲಾಗ್, ಕೆಐಎಡಿಬಿ, ಬಿಡಿಎ ಹಾಗೂ ಸರಕಾರಿಗುತ್ತಿಗೆ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡಬೇಕುಎಂದು ಒತ್ತಾಯಿಸಿ ಸೋಮವಾರ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

ತುಮಕೂರು  ನಗರದ ಟೌನ್‌ ಹಾಲ್‌ನಲ್ಲಿ ಸಮಾವೇಶಗೊಂಡ ಸಾವಿರಾರು ಒಳಮೀಸಲಾತಿ ಹೋರಾಟ ಸಮಿತಿಯ ಸದಸ್ಯರುಗಳು,ಬಿ.ಜಿ.ಎಸ್ ವೃತ್ತದಿಂದ ಅಶೋಕ ರಸ್ತೆಯ ಮೂಲಕ ಚರ್ಚ್ ಸರ್ಕಲ್,ಕೋಡಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿತಲುಪಿ, ಜಿಲ್ಲಾಧಿಕಾರಿ ಶುಭಾಕಲ್ಯಾಣಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1002875781

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡಿದ್ದ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ತುಮಕೂರುಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ, ಮಾದಿಗ ಸಮುದಾಯ ಕಳೆದ 35 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠದ ತೀರ್ಪಿನಂತೆ,ರಾಜ್ಯ ಸರಕಾರ ನ್ಯಾ.ನಾಗಮೋಹನ್‌ದಾಸ್‌ಅವರ ಸಮಿತಿ ವರದಿಯನ್ನು ಆಧರಿಸಿ ಒಳಮೀಸಲಾತಿಯನ್ನು ಘೋಷಣೆ ಮಾಡಿದೆ. ನಾವು ಯಾರ ಪಾಲನ್ನು ಕೇಳುತ್ತಿಲ್ಲ. ನಮ್ಮ ಪಾಲಿನ ಹಕ್ಕನ್ನು ಎಲ್ಲಾ ರಂಗದಲ್ಲಿಯೂ ನೀಡಿ ಎಂದು ಕೇಳುತಿದ್ದೇವೆ.ಇದು ನಮ್ಮ ನ್ಯಾಯ ಸಮ್ಮತ ಬೇಡಿಕೆಯಾಗಿದೆ.ಮಾದಿಗರು ಮತ್ತು ಹೊಲೆಯರ ಮೇಲೆ ರಾಜ್ಯ ಸರಕಾರ ಪರಸ್ವರ ದೋಷಾರೋಪಣೆ ಮಾಡುವುದರನ್ನು ಬಿಟ್ಟು, ಸುಪ್ರಿಂ ಕೋರ್ಟಿನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಎಲ್ಲಾ 101 ಜಾತಿಗಳಿಗೂ ಅನ್ಯಾಯವಾಗದ ರೀತಿ, ಸಾಮಾಜಿಕ ನ್ಯಾಯಕಲ್ಪಿಸುವ ನಿಟ್ಟಿನಲ್ಲಿ ಈ ಬಜೆಟ್‌ಅಧಿವೇಶನದಲ್ಲಿ ಸಂಪೂರ್ಣ ಒಳಮೀಸಲಾತಿಗೆ ಜಾರಿ ಘೋಷಿಸಬೇಕು. ನಮ್ಮ ತಾಳ್ಮೆ ಪರೀಕ್ಷೆ ಮಾಡಲು ಸರಕಾರ ಹೋಗಬಾರದು ಎಂಬ ಎಚ್ಚರಿಕೆಯನ್ನು ನೀಡಿದರು.

1002875775

ಕರ್ನಾಟಕ ಮಾದಾರ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ ಜಿ.ಪಂ.ಮಾಜಿಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಕಳೆದ 35 ವರ್ಷಗಳ ಹಿಂದೆ ಪ್ರೊ,.ಬಿ.ಕೃಷ್ಣಪ್ಪನವರದಲಿತ ಸಂಘರ್ಷ ಸಮಿತಿ, ಮಾದಿಗದಂಡೋರ ಹಾಗೂ ಇನ್ನಿತರ ಸಂಘಟನೆಗಳ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಾ ಬಂದ ಪರಿಣಾಮ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ಪ್ರಾಣಾಳಿಕೆಯಲ್ಲಿ ಈ ವಿಷಯ ಸೇರಿಸಿ, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿವೆ. ಆದರೆ 2024ರ ಆಗಸ್ಟ್ 01ರ ಸುಪ್ರಿಂ ಕೋರ್ಟಿನ ಪ್ರಕಾರ, ರಾಜ್ಯದಲ್ಲಿ ನ್ಯಾ.ನಾಗಮೋಹನ್‌ದಾಸ್ ಸಮಿತಿ ಮಾಡಿ, ವರದಿ ಪಡೆದು,  ವರ್ಗಿಕರಿಸಿ ಜಾರಿಗೆತರಲು ಮುಂದಾಗಿದೆ.ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ.ಒಳಮೀಸಲಾತಿ ನಿಗಧಿಯಾಗಿರುವುದು ಜನಸಂಖ್ಯೆಯ ಜೊತೆಗೆ,ಅವರ ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಹಿಂದುಳಿದಿರುವ ಆಧಾರದಲ್ಲಿ,ಆದರೆ ಕೆಲವರು ತಪ್ಪು ಮಾಹಿತಿ ನೀಡಿ, ಇಷ್ಟು ದಿನದ ಹೋರಾಟವನ್ನು ಮಣ್ಣು ಪಾಲು ಮಾಡಲು ಹೊರಟಿದ್ದಾರೆ. ಇದಕ್ಕೆ ನಾವು ಎಂದಿಗೂ ಆಸ್ಪದ ನೀಡುವುದಿಲ್ಲ.ಇಲ್ಲಿ ಪಕ್ಷ ಮುಖ್ಯವಲ್ಲ,ಸಮುದಾಯ ಮುಖ್ಯ. ಹಾಗಾಗಿ ಯಾರ ವಿರುದ್ದ ಹೋರಾಟಕ್ಕೂ ನಾವು ಸಿದ್ದರಿದ್ದೇವೆ ಎಂಬುದನ್ನು ಸರಕಾರದ ಗಮನಕ್ಕೆ ತರಬಯಸುತ್ತೇನೆ ಎಂದರು.

1002875779

ಹಿರಿಯ ಹೋರಾಟಗಾರ ಕೆ.ದೊರೆರಾಜು ಮಾತನಾಡಿ, ಸುಪ್ರಿಂಕೋರ್ಟಿನ ಆದೇಶದ ಅನ್ವಯ ನ್ಯಾ.ನಾಗಮೋಹನ್‌ದಾಸ್ ಸಮಿತಿ ರಚಿಸಿ, ಅದರ ವರದಿಯನ್ನು ಪಡೆದುಕೊಂಡು,ಪರಿಶಿಷ್ಟ ಜಾತಿಗಳನ್ನು ಜನಸಂಖ್ಯೆ ಮತ್ತು ಹಿಂದುಳಿದಿರುವಿಕೆಯ ಆಧಾರದಲ್ಲಿ ಮಾಡಿದ ವರ್ಗೀಕರಣವನ್ನು ಒಪ್ಪಿಕೊಂಡಿರುವ ಸರಕಾರ ಅದನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದೆ. ಬೊಮ್ಮಾಯಿ ಅವರ ಸರಕಾರ ಹೆಚ್ಚು ಮಾಡಿದ ಮೀಸಲಾತಿ ಪ್ರಮಾಣ ಹಾಗೂ ಒಳಮೀಸಲಾತಿಯನ್ನು ಸಂವಿಧಾನದ 9ನೇ ಷಡ್ಯೋಲ್‌ಗೆ ಸೇರಿಸುವುದು. ಶಾಶ್ವತ ಆಯೋಗ ರಚನೆ ಮುಂತಾದ ವಿಚಾರಗಳನ್ನು ಸರಕಾರ ಬಜೆಟ್‌ ಅಧಿವೇಶನದಲ್ಲಿ ಜಾರಿಗೆತರುವ ಭರವಸೆ ನೀಡಬೇಕು. ಒಳಮೀಸಲಾತಿ ವಿಷಯ ಇಟ್ಟುಕೊಂಡು 2028ರ ಚುನಾವಣೆಯ ಗೆಲುವಿನ ಕನಸು ಕಾಣುವುದನ್ನು ಬಿಟ್ಟು, ಸಾಮಾಜಿಕ ನ್ಯಾಯಕ್ಕಾಗಿ ಹಾತೊರೆಯುತ್ತಿರುವ ಸಮುದಾಯಕ್ಕೆ ನ್ಯಾಯ ಒದಗಿಸಿ ಎಂದು ಆಗ್ರಹಿಸಿದರು.

1002875783

ಜಿ.ಪಂ.ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಇಡೀ ಮಾದಿಗ ಸಮುದಾಯ ಕಳೆದುಕೊಂಡಿದೆ. ಒಂದು ಸಮುದಾಯದ ಮಂತ್ರಿಗಳ ಕೈಗೊಂಬೆಯಾಗಿ ನಮಗೆ ಅನ್ಯಾಯ ಮಾಡುತ್ತಿದೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ವಿರೋಧಿಸಿದ ಸಮುದಾಯವೇ,ನ್ಯಾ.ನಾಗಮೋಹನ್‌ದಾಸ್ ಸಮಿತಿಯ ಒಳಮೀಸಲಾತಿಯ ಸಂಪೂರ್ಣ ಜಾರಿಗೆ ಅಡ್ಡಿ ಪಡಿಸುತ್ತಿದೆ.ಹಾಗಾಗಿ ಮಾದಿಗ ಸಮುದಾಯದ ಪ್ರತಿಯೊಬ್ಬರು ಈ ಹೋರಾಟದಲ್ಲಿ ಕೈಜೋಡಿಸಿ, ಹೋರಾಟಕ್ಕೆ ತಮ್ಮ ತನು, ಮನ, ಧನದ ಸಹಾಯದ ಮೂಲಕ ಹೋರಾಟವನ್ನು ಉಗ್ರ ಸ್ಪರೂಪಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕಾಗಿದೆ ಎಂದರು.

1002875782

ಮಾಜಿ ಶಾಸಕರಾದ ಗಂಗಹನುಮಯ್ಯ, ಹೋರಾಟಗಾರರಾದಡಾ.ಅರುಂಧತಿ,ಪಾವಗಡ ಶ್ರೀರಾಮ ಸೇರಿದಂತೆ ಹಲವರು ಮಾತನಾಡಿದರು.

 ಪ್ರತಿಭಟನೆಯಲ್ಲಿ ಮುಖಂಡರಾದ  ಹೆತ್ತೇನಹಳ್ಳಿ ಮಂಜುನಾಥ್,  ವಾಲೆಚಂದ್ರಯ್ಯ, ಹನುಮಂತರಾಯಪ್ಪ, ಕೊಟ್ಟಶಂಕರ್,ರಂಗಸ್ವಾಮಯ್ಯ ಸಿದ್ದಾಪುರ,ದೊಡ್ಡೇರಿಕಣಿಮಯ್ಯ,ನರಸೀಯಪ್ಪ, ಕೊಡಿಯಾಲ ಮಹದೇವ್,ಉದ್ಯಮಿ ಡಿ.ಟಿ.ವೆಂಕಟೇಶ್,ಹೊಳಕಲ್ಲು ಅಂಜನಪ್ಪ,ಸಿ.ಗಂಗರಾಜು,ಡಾ.ಲಕ್ಷ್ಮೀಕಾಂತ್ ,ನವೀನ್ ಪೂಜಾರಹಳ್ಳಿ,ಶಿರಾ ರಾಜಸಿಂಹ, ಕುಣಿಗಲ್ ಶಿವಶಂಕರ್ ಸೇರಿದಂತೆ ಸಾವಿರಾರುಜನರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...