ತುಮಕೂರು | ಮಾಧ್ಯಮ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು : ಗೃಹ ಸಚಿವ ಡಾ.ಜಿ.ಪರಮೇಶ್ವರ

Date:

ಶ್ರೀ ಸಿದ್ಧಾರ್ಥ ಮಾಧ್ಯಮ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳೆಲ್ಲ ರಾಜ್ಯದ ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಾ ಉತ್ತಮ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸಂಸ್ಥೆಗೆ ಬಹಳ ಕೀರ್ತಿ ತರಲಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರೀಯ , ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

- Advertisement -

ತುಮಕೂರು  ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಮಾಧ್ಯಮ ಹಬ್ಬ ಸಂಭ್ರಮ- 2026′ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಗಿ ಬೀಸುವ ಮೂಲಕ ಅವರು ಹಳೆಯ ವಿದ್ಯಾರ್ಥಿಗಳ ಸಮ್ಮಿಲನಕ್ಕೆ ಸಾಕ್ಷಿಯಾದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, 1985-86 ರಲ್ಲಿ ಸಂಸ್ಥೆಯ ಜವಾಬ್ದಾರಿ ವಹಿಸಿಕೊಳ್ಳಲಾಯಿತು. ಶಿಕ್ಷಣ ಕ್ಷೇತ್ರದ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಹೊಸ ಕೋರ್ಸ್ ಆರಂಭಕ್ಕೆ ಯೋಜನೆ ರೂಪಿಸಲಾಯಿತು. ಬಿಎಸ್ ಸಿ, ಕಂಪ್ಯೂಟರ್ ಆಧಾರಿತಿ, ಭವಿಷ್ಯ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವ ಕೋರ್ಸ್ ಆರಂಭಿಸಬೇಕು ಎಂಬ ಉದ್ದೇಶದಿಂದ ಹೊಸ ಹೊಸ ಕೋರ್ಸ್ ಪರಿಚಯಿಸಲಾಯಿತು. ಇದರ ಭಾಗವಾಗಿ ಪತ್ರಿಕೋದ್ಯಮ ಕೋರ್ಸ್ ಶುರು ಮಾಡಲಾಯಿತು ಎಂದರು. 

1003186622

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತುಂಬಾ ಕಡಿಮೆ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದ ಮಕ್ಕಳು ಪತ್ರಿಕೋದ್ಯಮ ಕಲಿಯಬೇಕು ಎಂಬ ಉದ್ದೇಶದಿಂದ ಮಾಧ್ಯಮ ಅಧ್ಯಯನ ಕೇಂದ್ರ ಪ್ರಾರಂಭಿಸಲಾಯಿತು ಎಂದು ಆರಂಭದ ಕ್ಷಣಗಳನ್ನು ಮೆಲುಕು ಹಾಕಿದರು.

ಮಾಧ್ಯಮ ಕ್ಷೇತ್ರ ಬಹಳಷ್ಟು ಬದಲಾಗಿದೆ. ಒಂದೊಂದು ಲೇಖನ, ವರದಿ ಅನೇಕ ಬದಲಾವಣೆ ತರಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಬಹಳಷ್ಟು ಬದಲಾವಣೆ ನೋಡುತ್ತಿದ್ದೇವೆ. ಸಾಮಾಜಿಕ ಜಾಲತಾಣದ ಕಾಲದಲ್ಲೂ ಪತ್ರಿಕೆ ನೋಡುತ್ತೇವೆ. ಪತ್ರಿಕೆಗಳು ಇಂದಿಗೂ ನಂಬಿಕೆ ಉಳಿಸಿಕೊಂಡಿವೆ ಎಂದರು.

ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘ ಸಮಾಗಮ ಆಯೋಜಿಸಿಆಯಾ ದಿನ ನಿಗದಿ ಪಡಿಸಿ,ಎಲ್ಲಾ ಒಟ್ಟಾಗಿ ಸೇರಿಕೊಳ್ಳತ್ತಾರೆ. ಮಾಧ್ಯಮ ಕ್ಷೇತ್ರದ ಹಳೆಯ ವಿದ್ಯಾರ್ಥಿಗಳು ಸೇರಿ ಪರಿಣಾಮಕಾರಿಯಾಗಿ ಸಂಘ ನಿರ್ಮಿಸಿಕೊಂಡು ಮುನ್ನಡೆಸಿ ಎಂದರು. 

ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಲ್ಲಿ ತರಬೇತಿಗೆಂದು ವಿದ್ಯಾರ್ಥಿಗಳು ತೆರಳಿದರೆ ಸಂಸ್ಥೆ ವತಿಯಿಂದ ಉತ್ತೇಜನ ಖರ್ಚಿನ ಹಣವನ್ನು ಭರಿಸಲಾಗುವುದು ಎಂದು ಹಳೆಯ ವಿದ್ಯಾರ್ಥಿಗಳಿಗೆ ಡಾ.ಜಿ.ಪರಮೇಶ್ವರ ಘೋಷಿಸಿದರು. 

1003186600

ಇದೇ ಸಂದರ್ಭದಲ್ಲಿ ವಿವಿಧ ಮಾಧ್ಯಮ ಸಂಸ್ಥೆಗಳಿಂದ ಪುರಸ್ಕೃತರಾದ ಹಳೆಯ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರಾದ ಹರೀಶ್ ಆಚಾರ್ಯ, ಮಾರುತಿ ಪಾವಗಡ, ವಿಜಯ್‌ಕುಮಾರ್ ಮತ್ತು ಮಹೇಶ್ ಕುಮಾರ್ ಎನ್ ಇ ನಾಲ್ವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ ವಿ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ ನಡಕಟ್ಟಿ, ಎಲ್ಲಾ ಮಾಧ್ಯಮ ಪ್ರತಿನಿಧಿಗಳು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಹಳೆಯ ವಿದ್ಯಾರ್ಥಿಗಳು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಬಿ.ಟಿ ಮುದ್ದೇಶ್, ಸಹಾಯಕ ಪ್ರಾಧ್ಯಾಪಕರಾದ ಡಾ. ಜ್ಯೋತಿ ಸಿ, ಶ್ವೇತಾ ಎಂ.ಪಿ, ನವೀನ್ ಎನ್ ಜಿ, ರೇಡಿಯೋ ಸಿದ್ಧಾರ್ಥ ಸಿಬ್ಬಂದಿ ಗೌತಮ್ ಎ.ವಿ, ರವಿಕುಮಾರ್, ಮಧುಶ್ರೀ, ಹರೀಶ್ ಕುಮಾರ್, ಟೆಲಿವಿಷನ್ ನಿರ್ವಾಹಕರಾದ ಎಸ್ ರಾಘವ್, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಮಣಿ ಎಚ್.ಜಿ, ಎಸ್‌ಎಸ್‌ಸಿಎಂಎಸ್‌ನ ಬೋಧಕೇತರ ಸಿಬ್ಬಂದಿಗಳಾದ ಮಂಜುಳಾ ಟಿ ವಿ, ಶಿಲ್ಪ ಜಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...