ತುಮಕೂರು | ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು : ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

Date:

ಕನ್ನಡ ಮತ್ತು  ಸಂಸ್ಕೃತಿ ಇಲಾಖೆ ಸಚಿವ  ಶಿವರಾಜ್ ತಂಗಡಗಿ ಅವರಿಗೆ ಶಿರಾ- ತುಮಕೂರು ಮಾರ್ಗ ಮಧ್ಯೆ  ಎದೆ ನೋವು ಕಾಣಿಸಿಕೊಂಡಿದ್ದು,  ತುಮಕೂರು ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

- Advertisement -

ಕೊಪ್ಪಳದ ಕನಕಗಿರಿ ತಮ್ಮ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯ ಘಟನೆ ನಡೆದಿದೆ.  ಚಿಕಿತ್ಸೆ ಪಡೆದ ಬಳಿಕ ಸಚಿವ ಶಿವರಾಜ್ ತಂಗಡಗಿ  ಮಾಧ್ಯಮದವರಿಗೆ ಪ್ರತಿಕ್ರಿಯಿಸಿ,   ನಾನು ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದೆ. ಶಿರಾ ಬಳಿ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ನಮ್ಮ ಫ್ಯಾಮಿಲಿ ವೈದ್ಯರಿಗೆ ಕರೆ ಮಾಡಿ ಮಾತನಾಡಿದೆ. ಅವರು ಬೆಂಗಳೂರು ಮಾರ್ಗ ತುಂಬಾ ಟ್ರಾಫೀಕ್ ಇದೆ.  ಬೆಂಗಳೂರಿಗೆ ತಕ್ಷಣದಲ್ಲಿ ತಲುಪುವುದು ಕಷ್ಟವಾಗಲಿದೆ. ಚಾನ್ಸ್ ತಗೊಳೊದು ಬೇಡ.ಸ್ಥಳೀಯ ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದರು. ಹಾಗಾಗಿ ನಾನು  ಸಿದ್ದಗಂಗಾ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದೇನೆ. ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...
1003021252

ಅಸಿಡಿಟಿಯಿಂದ ಎದೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಗ ಆರೋಗ್ಯವಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ. ಹಿಂದೆ ಯಾವತ್ತು ಈರೀತಿ ಆಗಿರಲಿಲ್ಲ‌‌. ನನಗೆ ಯಾವುದೇ ಸಮಸ್ಯೆ ಇರಲಿಲ್ಲ. ನಾನು ಮತ್ತೆ ಬೆಂಗಳೂರಿಗೆ ತೆರಳುತ್ತೇನೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...