ತುಮಕೂರು | ಚಲನೆಯೇ ಜೀವನ-ಜಡತೆಯೇ ಸಾವು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ಚಲನೆಯೇ ಜೀವನ-ಜಡತೆಯೇ ಸಾವು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನುಷ್ಯ ಯಾವಾಗಲೂ ಕ್ರಿಯಾಶೀಲವಾಗಿರಬೇಕು ಎಂದು ನೌಕರರಿಗೆ ಕಿವಿಮಾತು ಹೇಳಿದರು

- Advertisement -

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುಮಕೂರು ಜಿಲ್ಲಾ ಘಟಕದ ವತಿಯಿಂದ ಡಾ.ಜಿ. ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ಆಯೋಜಿಸಿದ್ದ “2025-26ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ” ಉದ್ಘಾಟಿಸಿ ಅವರು ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

 ಯಾವುದೇ ವ್ಯಕ್ತಿ ಕ್ರಿಯಾಶೀಲವಾಗಿದ್ದಲ್ಲಿ ಮಾತ್ರ ಬದುಕಿರುತ್ತಾನೆ ಎಂದ ಅವರು, ಸರ್ಕಾರಿ ನೌಕರರು ದೈಹಿಕವಾಗಿ ಹೆಚ್ಚೆಂದರೆ 10 ಗಂಟೆ ಕೆಲಸ ನಿರ್ವಹಿಸಬಹುದು. ಮಾನಸಿಕವಾಗಿ 4 ಗಂಟೆ ಕೆಲಸ ನಿರ್ವಹಿಸಬಹುದು. ಆದರೂ ಮನೆಗೆ ತೆರಳಿದ ನಂತರ ಇಡೀ ದಿನ ಆದ ಘಟನೆಗಳು ಹಾಗೂ ನಾಳೆ ಆಗಬೇಕಿರುವ ಕೆಲಸಗಳ ಬಗ್ಗೆ ಯೋಚಿಸುತ್ತೇವೆ. ದೈಹಿಕ ಮತ್ತು ಮಾನಸಿಕ ದೃಢತೆ ನೌಕರರಿಗೆ ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನೌಕರರು ಸದಾ ಕ್ರಿಯಾಶೀಲರಾಗಿರಬೇಕು. ಒಂದಿಲ್ಲೊಂದು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ನೌಕರರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದರು. 

1002746457

 ತುಮಕೂರು ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಜಿಲ್ಲೆಯ ಎಲ್ಲಾ ಹಂತದ ಅಧಿಕಾರಿಗಳು, ನೌಕರರ ಸಹಕಾರ ಮತ್ತು ಕ್ರಿಯಾಶೀಲತೆಯೇ ಮುಖ್ಯವಾಗಿತ್ತು ಎಂದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ 2 ಬಾರಿ ಮುಖ್ಯಮಂತ್ರಿಯವರ ಕಾರ್ಯಕ್ರಮ, 2 ವರ್ಷ ತುಮಕೂರು ದಸರಾ ಉತ್ಸವ, ಕರ್ನಾಟಕ ರಾಜ್ಯ ಒಲಿಂಪಿಕ್ ಕ್ರೀಡಾಕೂಟ ಸೇರಿದಂತೆ ರಾಜ್ಯ ಮಟ್ಟದ ಹಲವಾರು ಕಾರ್ಯಕ್ರಮಗಳನ್ನು ತುಮಕೂರಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಎಲ್ಲಾ ಯಶಸ್ಸು ನೌಕರರಿಗೇ ಸೇರಬೇಕು ಎಂದ ಅವರು, ತುಮಕೂರಿನಲ್ಲಿ ನಾಗರಿಕರಿಗೆ ಪೂರಕವಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಹಾಗೂ ಯುವ ಸಮುದಾಯಕ್ಕೆ, ಕ್ರೀಡಾಸಕ್ತರಿಗೆ ಪೂರಕ ಆಟದ ಮೈದಾನಗಳು, ಅಂತಾರಾಷ್ಟ್ರೀಯ ಕ್ರೀಡಾಂಗಣಗಳನ್ನು ನಿರ್ಮಿಸುವ ಮಹತ್ತರ ಯೋಜನೆಗಳು ನಡೆದಿದ್ದು, ಮುಂಬರುವ ದಿನಗಳಲ್ಲಿ ತುಮಕೂರು ರಾಜ್ಯದಲ್ಲಿಯೇ ವಿಶೇಷ ಗಮನ ಸೆಳೆಯುವ ಜಿಲ್ಲೆಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು. 

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಮಾತನಾಡಿ, ತುಮಕೂರು ಅತಿ ವೇಗದಲ್ಲಿ ಬೆಳೆಯುತ್ತಿರುವ ಜಿಲ್ಲೆಯಾಗಿದ್ದು, ರಾಜಧಾನಿ ಬೆಂಗಳೂರು ನಂತರ ಎಲ್ಲಾ ರೀತಿಯ ಸೌಲಭ್ಯಗಳನ್ನು ಹೊಂದಿರುವ ಜಿಲ್ಲೆ ತುಮಕೂರು ಎಂಬುದು ಹೆಮ್ಮೆ ಎಂದರು. 

 ಯಾವುದೇ ರಾಜಕೀಯ ಪ್ರೇರಿತವಿಲ್ಲದ, ಧರ್ಮಲೇಪಿತವಲ್ಲದ ವೇದಿಕೆಯೆಂದರೆ ಅದು ಕ್ರೀಡಾವೇದಿಕೆ ಎಂದ ಅವರು, ಕ್ರೀಡೆಯಲ್ಲಿ ಸೋಲುಗಳಿಗೆ ವಿಚಲಿತರಾಗುವ ಅಗತ್ಯವಿಲ್ಲ. ಒಂದು ಸೋಲಿನ ನಂತರದ ಗೆಲುವು ಜಯವಷ್ಟೆ, ಎರಡು ಸೋಲಿನ ಬಳಿಕ ಬಂದ ಗೆಲುವು ವಿಜಯ. ಮೂರಕ್ಕಿಂತ ಹೆಚ್ಚು ಬಾರಿ ಸೋತು ಗೆದ್ದರೆ ಅದನ್ನು ದಿಗ್ವಿಜಯ ಎಂದು ನಾವು ಅಥೈಸಿಕೊಳ್ಳಬೇಕು. ಕ್ರೀಡೆ ಸೌಹಾರ್ದತೆಯ ತೊಟ್ಟಿಲು ಎಂದು ಬಣ್ಣಿಸಿದರು. 

1002746462

 ಸರ್ಕಾರಿ ನೌಕರರಿಗೆ ಪೂರಕವಾಗಿ ಸಂಘವು ಸಾಕಷ್ಟು ಪ್ರಗತಿಯ ಮತ್ತು ಆಶಾದಾಯಕ ಕೆಲಸಗಳನ್ನು ಮಾಡಿದೆ ಎಂದ ಅವರು, ಸರ್ಕಾರಿ ನೌಕರರ ಮೇಲೆ ಹಲ್ಲೆ, ನಿಂದನೆಯಂತಹ ಚಟುವಟಿಕೆಗಳಿಗೆ ಸೂಕ್ತ ಕಡಿವಾಣ ಹಾಕಲು ಸಧ್ಯದಲ್ಲಿಯೇ ಸರ್ಕಾರಿ ಆದೇಶವೊಂದು ಹೊರಬೀಳಲಿದೆ. ಅಲ್ಲದೆ, ಸಂಘವು ಈ ಹಿಂದಿನಿಂದಲೂ ಸರ್ಕಾರಿ ನೌಕರರ ಒಳಿತಿಗಾಗಿ ಬೇಡಿಕೆಯೊಂದನ್ನು ಸರ್ಕಾರದ ಮುಂದಿಡುತ್ತಾ ಬಂದಿದ್ದು, ಹೊಸ ಪಿಂಚಣಿ ಯೋಜನೆಯನ್ನು ತೆಗೆದು ಹಳೆ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕೆಂಬ ಹೋರಾಟ ಮುಂದುವರೆಯಲಿದೆ. ಈ ವಿಷಯದಲ್ಲಿ ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದೆ ಎಂದು ಅವರು ಹೇಳಿದರು. 

 ಕಾರ್ಯಕ್ರಮದಲ್ಲಿ ತುಮಕೂರಿನ ರಾಷ್ಟ್ರೀಯ ಖೋ-ಖೋ ಆಟಗಾರ್ತಿ ಚೈತ್ರ ಹಾಗೂ ಸ್ಕೇಟಿಂಗ್ ಆಟಗಾರ್ತಿ ಜಯತೀಕ್ಷ್ಣ ಇವರನ್ನು ಗೌರವಿಸಲಾಯಿತು. ಅಲ್ಲದೆ, 2024 ಹಾಗೂ 2025ನೇ ಸಾಲಿನ 22 ಅಧಿಕಾರಿ, ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರು :

 ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ತಿಪಟೂರು ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸಹಾಯಕಿ ಆರ್. ರೂಪಕಲಾ, ಸರ್ವೇ ಇಲಾಖೆ ಸರ್ವೇ ಸೂಪರ್ ವೈಸರ್ ದಯಾನಂದ್, ಗುಬ್ಬಿ ತಹಶೀಲ್ದಾರ್ ಬಿ. ಆರತಿ, ಗುಬ್ಬಿ ತಾಲ್ಲೂಕು ಆರೋಗ್ಯ ಇಲಾಖೆ ತಜ್ಞವೈದ್ಯ ಡಾ: ಶಿವರಾಜ್ ಟಿ.ಎನ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮುಖ್ಯ ಅಡುಗೆಯವರಾದ ಎಸ್.ಜಿ. ನಿರ್ಮಲ, ನ್ಯಾಯಾಂಗ ಇಲಾಖೆ ಶಿರಸ್ತೇದಾರ್ ಶಿವಣ್ಣ ಎಲ್., ಆರೋಗ್ಯ ಇಲಾಖೆ ಪ್ರಾಥಮಿಕ ಆರೋಗ್ಯಾಧಿಕಾರಿ ಬಿಂಧು ಕೆ., ತುಮಕೂರು ತಾಲ್ಲೂಕು ಹಕ್ಕು ದಾಖಲೆ ಶಿರಸ್ತೇದಾರ್ ಎನ್. ನರಸಿಂಹರಾಜು. 

2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರು :- ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್ ಚಂದ್ರ ಎನ್.ಆರ್., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಉದ್ಯೋಗ ವಿನಿಮಯದ ಅಧಿಕಾರಿ ಕಿಶೋರ್, ತುಮಕೂರು ವಿಶ್ವವಿದ್ಯಾಲಯದ ಕುಲ ಸಚಿವೆ ನಾಹಿದಾ ಜûಮ್ ಜûಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ದಿನೇಶ್ ಆರ್.ಎಂ., ಮಧುಗಿರಿ ಉಪ ಕೃಷಿ ನಿರ್ದೇಶಕ ಡಾ: ಚಂದ್ರಕುಮಾರ್ ಹೆಚ್.ಎಲ್., ಶಿರಾ ತಹಶೀಲ್ದಾರ್ ಅನಂತಕುಮಾರ್, ಕಂದಾಯ ಇಲಾಖೆ ಪ್ರಥಮ ದರ್ಜೆ ಸಹಾಯಕ ಗೋಪಿನಾಥ್ ಪಿ., ತಿಪಟೂರು ಸಮಾಜ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಜಿ.ಆರ್., ಶಾಲಾ ಶಿಕ್ಷಣ ಇಲಾಖೆ ತುಮಕೂರು ದ್ವಿತೀಯ ದರ್ಜೆ ಸಹಾಯಕಿ ಕವಿತಾ ಕೆ.ಕೆ., ನ್ಯಾಯಾಂಗ ಇಲಾಖೆ ಶಿರಸ್ತೆದಾರ್ ಡಾ.ರಾಮಕೃಷ್ಣ. 

 ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ತುಮಕೂರು ಜಿಲ್ಲಾ ಘಟಕದ ರಮೇಶ್ ಎಚ್.ಇ., ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ., ಮಧುಗಿರಿ ಶೈಕ್ಷಣಿಕ ಜಿಲ್ಲೆ ನೌಕರರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್. ಪರಮೇಶ್ವರ, ರಾಜ್ಯ ಕ್ರೀಡಾ ಕಾರ್ಯದರ್ಶಿ ಮೋಹನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ ಉತ್ಸವಕ್ಕೆ ಪೂರ್ವಸಿದ್ಧತೆ: ಆಚರಣೆಗೆ ಜಿಲ್ಲಾಡಳಿತ ಸಜ್ಜು

ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ...

ತುಮಕೂರು | ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ...

ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ...