ತುಮಕೂರು | ನಂದಿಹಳ್ಳಿ, ಮಲ್ಲಸಂದ್ರ, ವಸಂತನರಸಾಪುರ ಔಟರ್‌ ರಿಂಗ್ ರಸ್ತೆ ಡಿಪಿಆರ್ ರೈತ ವಿರೋಧಿ : ಡಿ.ಸಿ.ಗೌರಿಶಂಕರ್

Date:

ಸರಕಾರದ ಪ್ರಸ್ತಾಪಿತ ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಔಟರ್‌ ರಿಂಗ್ ರಸ್ತೆಯ ಡಿಪಿಆರ್, ಸಂಪೂರ್ಣ ರೈತ ವಿರೋಧಿ, ಜನ ವಿರೋಧಿಯಾಗಿದ್ದು,ಸರಕಾರ ದಬ್ಬಾಳಿಕೆ,ದೌರ್ಜನ್ಯದ ಮೂಲಕ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಮುಂದಾಗಿದ್ದು,ಯಾವುದೇ ಕಾರಣಕ್ಕೂ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.

- Advertisement -

ತುಮಕೂರು ನಗರದಲ್ಲಿ ನಡೆದ   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಯಾರಿಸಿರುವ ವಿಸ್ಕೃತ ಯೋಜನಾ ವರದಿ(ಡಿಪಿಆರ್) ಸಂಪೂರ್ಣ ರೈತ ವಿರೋಧಿ, ಜನವಿರೋಧಿಯಾಗಿದೆ.ನಿಯಮಗಳನ್ನೆಲ್ಲ ಗಾಳಿಗೆ ತೂರಿ, ಭೂ ಮಾಫಿಯ ಕಪಿಮುಷ್ಠಿಗೆ ಸಿಲುಕಿ ರಿಂಗ್ ರಸ್ತೆ ಬದಲು, ಜಿಗ್‌ಜಾಗ್ ರಸ್ತೆ ಅಲೈನ್ ಮಾಡಿದ್ದು, ಓರ್ವ ರೈತನ ಮಗನಾಗಿ, ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸಹಿಸದೆ, ರಾಜಕೀಯ ರಹಿತವಾಗಿ ಅವರ ಬೆಂಬಲಕ್ಕೆ ನಿಂತಿದ್ದೇನೆ. ಈ ಹೋರಾಟದಿಂದ ನನ್ನ ರಾಜಕೀಯ ಜೀವನಕ್ಕೆ ಕುಂದುಂಟಾದರೂ ಹೆದರುವ ಪ್ರಶ್ನೆಯೇ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಭಾರತೀಯ ಭೂ ಸ್ವಾಧೀನ ಅಧಿನಿಯಮ-2013 ರ ಪ್ರಕಾರ, ಒಂದು ಯೋಜನೆಗೆ ಭೂಮಿ ಸ್ವಾಧೀನ ಪಡಿಸಿಕೊಳ್ಳುವ ವೇಳೆ ಶೇ.80ರಷ್ಟು ರೈತರ ಒಪ್ಪಿಗೆ ಇರಬೇಕು, ನಿಯಮಾನುಸಾರ ರೈತರ ಒಪ್ಪಿಗೆ ಪಡೆಯಬೇಕು.ಆದರೆ ಗ್ರಾಮ ಸಭೆಗಳನ್ನೇ ನಡೆಸದೆ, ಸಾಮಾಜಿಕ ಪರಿಣಾಮಗಳನ್ನು ಲೆಕ್ಕ ಹಾಕದೆ, ರೈತರೊಂದಿಗೆ ಸಮಾಲೋಚನೆ ನಡೆಸದೆ,ಈ ಎಲ್ಲಾ ನಿಯಮಗಳನ್ನು ಪಾಲಿಸಿರುವುದಾಗಿ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಅನುಮೋಧನೆ ಪಡೆಯಲು ಮುಂದಾಗಿದ್ದಾರೆ.  ಸಂಸದರು, ಕೇಂದ್ರದ ಮಂತ್ರಿಗಳಾಗಿರುವ ವಿ.ಸೋಮಣ್ಣ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಜಿಲ್ಲಾಧಿಕಾರಿಗಳು ಯಾವ ಕಾರಣಕ್ಕೆ ಈ ಡಿಪಿಆರ್‌ನ್ನು ಒಪ್ಪಿಕೊಳ್ಳದೆ ತಿರಸ್ಕರಿಸಬೇಕು.ಇಲ್ಲದಿದ್ದಲ್ಲಿ,ಬೆಂಗಳೂರು ಗ್ರಾಮಾಂತರದ ಚನ್ನರಾಯಪಟ್ಟಣ ಹೋರಾಟದ ರೀತಿ, ನಿರಂತರ ಹೋರಾಟಕ್ಕೆ ರೈತರೊಂದಿಗೆ ಸಜ್ಜಾಗುವುದಾಗಿ ಡಿ.ಸಿ.ಗೌರಿಶಂಕರ್ ತಿಳಿಸಿದರು.

ಸರಕಾರದ ಪ್ರಸ್ತಾಪಿತ ಔಟರ್ ರಿಂಗ್ ರಸ್ತೆ ಹಾದು ಹೋಗುವ ಜಾಗದ ಸುಮಾರು 26 ಹಳ್ಳಿಗಳ 750ಕ್ಕೂ ಹೆಚ್ಚು ರೈತರ, 700 ಎಕರೆಗೂ ಹೆಚ್ಚು ಪ್ರದೇಶ ಭೂಸ್ವಾಧೀನಕ್ಕೆ ಗುರುತಿಸಲಾಗಿದೆ.ಸರಕಾರದ ಅಧಿಕಾರಿಗಳ ಪ್ರಕಾರ,ಈ ಪ್ರದೇಶ ಶೇ70ರಷ್ಟು ಒಣಭೂಮಿ ಎಂದು ಡಿಪಿಆರ್‌ನಲ್ಲಿ ಉಲ್ಲೇಖಿಸಲಾಗಿದೆ.ಆದರೆ ವಾಸ್ತವದಲ್ಲಿ ಶೇ.80ರಷ್ಟು ಜಾಗದಲ್ಲಿ ತೆಂಗು, ಅಡಿಕೆ, ಮಾವು, ಸಪೋಟ, ಸೀಬೆ, ಬಟರ್ ಪ್ರೂಟ್ ಸೇರಿದಂತೆ ಹಲವು ಜಾತಿಯ ಹಣ್ಣಿನ ಗಿಡಗಳನ್ನು ಹೊಂದಿದ ನೀರಾವರಿ ಪ್ರದೇಶವಿದೆ.ಡಿಪಿಆರ್ ಸಿದ್ದವಾಗಿ ವರ್ಷಗಳೇ ಕಳೆದರೂ, ಸಂತ್ರಸ್ಥ ರೈತರಿಗೆ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದ ಮೇಲೆ ಭೂಮಿ ಕಳೆದುಕೊಳ್ಳುವ ರೈತರಿಗೆ ಡಿಪಿಆರ್ ನೀಡಲಾಗಿದೆ.ಜನರನ್ನು ಇಷ್ಟು ಕತ್ತಲಲ್ಲಿ ಇಟ್ಟು ರಸ್ತೆ ಮಾಡುವ ಅಗತ್ಯವಾದರೂ ಏನಿದೆ ?. ಗುಬ್ಬಿ ಯಿಂದ ದಾಬಸ್‌ಪೇಟೆಯವರೆಗೆ 100 ಅಡಿಗಳ ನಕಾಸೆ ರಸ್ತೆಯಿದ್ದು, ಅದನ್ನು ತೆರವು ಮಾಡಿ, ಅಭಿವೃದ್ದಿ ಪಡಿಸಲಿ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಆಗ್ರಹಿಸಿದರು.

ನಾವು ಅಭಿವೃದ್ಧಿಗೆ ವಿರೋಧಿಗಳಲ್ಲ.ಆದರೆ ರೈತರ ಬದುಕು, ಕೃಷಿ, ಪರಿಸರ ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಹಾಳುಮಾಡುವ ಅಭಿವೃದ್ಧಿ ಮಾದರಿಯನ್ನು ಒಪ್ಪಲಾಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರ ಅನುಮತಿ ಮತ್ತು ಪಾರದರ್ಶಕತೆ ಅತ್ಯಗತ್ಯ.ಸರಕಾರವು ತಕ್ಷಣ ರೈತರೊಂದಿಗೆ ಸಂವಾದ ನಡೆಸಿ ನ್ಯಾಯಸಮ್ಮತ ಹಾಗೂ ಪರಿಸರ ಸ್ನೇಹಿ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಭೈರಸಂದ್ರ ರಮೇಶ್, ಪಾಲನೇತ್ರಯ್ಯ, ಹೊಸಹಳ್ಳಿ ಲಿಂಗರಾಜು, ಹೆತ್ತೇನಹಳ್ಳಿ ಮಂಜುನಾಥ್, ನರಸಿಂಹಯ್ಯ, ರಾಜಶೇಖರ್, ಸುರೇಶ್, ಪ್ರಕಾಶ್ ಸೇರಿದಂತೆ ನಂದಿಹಳ್ಳಿ, ಭೈರಸಂದ್ರ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತ ಮುಖಂಡರು ಉಪಸ್ಥಿರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ...